ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BAD Movie: ʼBADʼ ಸಿನಿಮಾದ ಪ್ರೇಮಗೀತೆಗೆ‌‌ ಅಭಿಮಾನಿಗಳು ಫಿದಾ!

BAD Movie: ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼBADʼ ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ ಅವರು ಬರೆದಿರುವ ʼನೀ ಬರುವೆ ಅಂತ ನಾ ಕಾದು ಕುಂತʼ ಎಂಬ ಸುಂದರ ಪ್ರೇಮಗೀತೆ ಇತ್ತೀಚೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

ʼBADʼ ಸಿನಿಮಾದ ಪ್ರೇಮಗೀತೆಗೆ‌‌ ಅಭಿಮಾನಿಗಳು ಫಿದಾ!

Profile Siddalinga Swamy Mar 11, 2025 3:29 PM

ಬೆಂಗಳೂರು: ಪಿ.ಸಿ. ಶೇಖರ್ ನಿರ್ದೇಶನದ, ಎಸ್‌.ಆರ್. ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼBADʼ ಚಿತ್ರಕ್ಕಾಗಿ(BAD Movie) ಖ್ಯಾತ ಸಾಹಿತಿ ಕವಿರಾಜ್ ಅವರು ಬರೆದಿರುವ ʼನೀ ಬರುವೆ ಅಂತ ನಾ ಕಾದು ಕುಂತʼ ಎಂಬ ಸುಂದರ ಪ್ರೇಮಗೀತೆ ಇತ್ತೀಚೆಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ʼಸರಿಗಮಪʼ ಖ್ಯಾತಿಯ ಪೃಥ್ವಿ ಭಟ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಹಾಡು ಜನಮನಸೂರೆಗೊಳ್ಳುತ್ತಿದ್ದು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನಕುಲ್ ಗೌಡ ಹಾಗೂ ಮಾನ್ವಿತ ಹರೀಶ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.



ನಾಯಕನ ಬರುವಿಕೆಗಾಗಿ ಕಾದು ಕುಳಿತಿರುವ ನಾಯಕಿ, ಕಾಯುವಿಕೆಯ ಆ ಸಮಯದಲ್ಲಿ ಏನೆಲ್ಲಾ ಕಲ್ಪಿಸಿಕೊಳ್ಳುತ್ತಾಳೆ ಎಂಬುದನ್ನು ಈ ಹಾಡಿನ ಮೂಲಕ ತೋರಿಸಲಾಗಿದೆ ಎಂದು ತಿಳಿಸಿರುವ ನಿರ್ದೇಶಕ ಪಿ.ಸಿ. ಶೇಖರ್, ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ ಎನ್ನುತ್ತಾರೆ. ʼBADʼ ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಿತ್ರೀಕರಣ ಮುಕ್ತಾಯವಾಗಿದೆ. ಟೀಸರ್ ಮೂಲಕ ಸದ್ದು ಮಾಡುತ್ತಿರುವ ಈ ಚಿತ್ರದ ಹಾಡುಗಳು ಸಹ ಜನಪ್ರಿಯವಾಗುತ್ತಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ʼBADʼ ಚಿತ್ರಕ್ಕೆ ನಿರ್ದೇಶಕ ಪಿ.ಸಿ. ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ. ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ʼBADʼ ಚಿತ್ರಕ್ಕೆ ಸಚಿನ್ ಜಗದೀಶ್ವರ್ ಎಸ್.ಬಿ. ಸಂಭಾಷಣೆ ಬರೆದಿದ್ದಾರೆ.

ಈ ಸುದ್ದಿಯನ್ನೂ ಓದಿ | Holi Dresscode 2025: ಹೋಳಿ ಸಂಭ್ರಮಕ್ಕೆ ಬಂತು 3 ಶೈಲಿಯ ಡ್ರೆಸ್ ಕೋಡ್ಸ್

ʼಪ್ರೀತಿಯ ರಾಯಭಾರಿʼ ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ ʼBADʼ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.