#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Nayanthara: ನಯನತಾರಾಗೆ ಬಂಪರ್‌ ಚಾನ್ಸ್‌; ಮಲಯಾಳಂ ಸ್ಟಾರ್ ಮೋಹನ್‌ಲಾಲ್‌, ಮಮ್ಮುಟ್ಟಿ ಚಿತ್ರದಲ್ಲಿ ಅವಕಾಶ

ಮಲಯಾಳಂ ಸೂಪರ್‌ ಸ್ಟಾರ್‌ಗಳಾದ ಮೋಹನ್‌ಲಾಲ್ ಮತ್ತು ಮಮ್ಮುಟ್ಟಿ ಅಭಿನಯದ ಹೊಸ ಚಿತ್ರಕ್ಕೆ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಆಯ್ಕೆಯಾಗಿದ್ದಾರೆ. ಸದ್ಯ ಯಶ್‌ ಅಭಿನಯದ ʼಟಾಕ್ಸಿಕ್‌ʼ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಅವರ ಕೈಯಲ್ಲಿ ಒಟ್ಟು 7 ಚಿತ್ರಗಳಿವೆ.

ಮೋಹನ್‌ಲಾಲ್‌, ಮಮ್ಮುಟ್ಟಿ ಜತೆ ಮತ್ತೆ ನಟಿಸಲಿದ್ದಾರೆ ನಯನತಾರಾ

nayanthara

Profile Pushpa Kumari Feb 10, 2025 8:18 PM

ತಿರುವನಂತಪುರಂ: ಕಾಲಿವುಡ್‌ನ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಲಯಾಳಂ, ತಮಿಳು, ತೆಲುಗು, ಕನ್ನಡ ಹಾಗೂ ಹಿಂದಿಯಲ್ಲೂ ಅಭಿನಯಿಸಿ ಸೈ ಎನಿಸಿಕೊಂಡಿರುವ ಅವರ ಕೈತುಂಬ ಚಿತ್ರಗಳಿವೆ. ಚಿತ್ರರಂಗದಲ್ಲಿ ಉತ್ತಮ ಪಾತ್ರಗಳನ್ನೇ ಆಯ್ದುಕೊಳ್ಳುವ ನಯನತಾರ ಮೊದಲ ಬಾರಿ ಶಾರುಖ್​ ಖಾನ್​ ಜತೆ ನಟಿಸಿದ, 2023ರಲ್ಲಿ ತೆರೆಕಂಡ ʼಜವಾನ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂ. ಕಲೆಕ್ಷನ್​ ಮಾಡಿದೆ. ಸದ್ಯ ನಯನತಾರಾ 7 ಚಿತ್ರಗಳಲ್ಲಿ ನಟಿಸುತ್ತಿದ್ದು, ಈಗಾಗಲೇ ಈ ಸಿನಿಮಾಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ.

ಮಲಯಾಳಂನ ಸೂಪರ್‌ ಸ್ಟಾರ್‌ಗಳಾದ ಮೋಹನ್‌ಲಾಲ್ ಮತ್ತು ಮಮ್ಮುಟ್ಟಿ ಅಭಿನಯಿಸುತ್ತಿರುವ ಸಿನಿಮಾದಲ್ಲಿಯೂ ನಯನತಾರಾ ಚಾನ್ಸ್‌ ಗಿಟ್ಟಿಸಿಕೊಂಡಿದ್ದಾರೆ. ಸದ್ಯ ನಟಿಯ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಯನತಾರಾ ಅಭಿನಯದ ಯಾವ ಚಿತ್ರವೂ ಕಳೆದ ವರ್ಷ ತೆರೆಕಂಡಿರಲಿಲ್ಲ. ಈ ವರ್ಷ ಅವರ ಸುಮಾರು 7 ಚಿತ್ರಗಳು ರಿಲೀಸ್‌ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು,ಇದಕ್ಕೆ ನಿಮ್ಮೆಲ್ಲರ ಆಶೀರ್ವಾದ ಕಾರಣ ಎಂದು ಬರೆದುಕೊಂಡಿದ್ದಾರೆ.

ನಯನತಾರಾ ಮತ್ತೆ ಮಲಯಾಳಂ ಚಿತ್ರದಲ್ಲಿ ನಟಿಸಲು ಸಹಿ ಹಾಕಿದ್ದು, ಅವರ ಅಭಿಮಾನಿಗಳಿಗೆ ಖುಷಿ ತಂದಿತ್ತಿದೆ. ಮಹೇಶ್ ನಾರಾಯಣನ್ ನಿರ್ದೇಶನದಲ್ಲಿ ಮೋಹನ್‌ಲಾಲ್ ಮತ್ತು ಮಮ್ಮುಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ನಯನತಾರಾ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ MMMN ಎಂದು ಹೆಸರಿಡಲಾಗಿದ್ದು, ಅವರು ಶೂಟಿಂಗ್ ಸೆಟ್‌ನಲ್ಲಿರುವ ಫೋಟೊ ವೈರಲ್ ಆಗುತ್ತಿದ್ದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನು ಓದಿ: Dharwad News: ಆತ್ಮಹತ್ಯೆ ಬೆದರಿಕೆ; ಉಪನ್ಯಾಸಕನನ್ನು ಜಡ್ಜ್‌ ಎಂದು ತೋರಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

ನಯನತಾರಾ ಅವರು ಯಶ್ ಅಭಿನಯದ ಕನ್ನಡದ ʼಟಾಕ್ಸಿಕ್ʼ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಇದರ ಜತೆಗೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿರುವ ತಮಿಳಿನ ʼಟೆಸ್ಟ್ʼ ಚಿತ್ರದಲ್ಲಿಯು ಅಭಿನಯಿಸುತ್ತಿದ್ದಾರೆ. ಮಾತ್ರವಲ್ಲ ಕಾಲಿವುಡ್‌ ಚಿತ್ರ  ʼಮಣ್ಣಂಗಟ್ಟಿ ಸಿನ್ಸ್‌ 1960ʼ, ʼಮೂಕುತಿ ಅಮ್ಮನ್ 2ʼ, ಮಲಯಾಳಂ ಸಿನಿಮಾ ʼಡಿಯರ್ ಸ್ಟೂಡೆಂಟ್ಸ್‌ʼನಲ್ಲಿಯೂ ಅಭಿನಯಿಸುತ್ತಿದ್ದಾರೆ.