Web Series: ಜೀ5ನಲ್ಲಿ ಬರ್ತಿದೆ "ಅಯ್ಯನ ಮನೆ"ಮಿನಿ ವೆಬ್ ಸೀರೀಸ್
ZEE5 ಮತ್ತೊಂದು ಗುಡ್ ನ್ಯೂಸ್ ನೀಡಲು ಮುಂದಾಗಿದ್ದು ಕನ್ನಡ ಸಿನಿಮಾಪ್ರೇಮಿಗಳಿಗಾಗಿ ಮಿನಿ ವೆಬ್ ಸೀರೀಸ್ ನ್ನು ಪರಿಚಯಿಸಿದೆ. ZEE5 ನಿಂದ ಮೂಡಿ ಬರುತ್ತಿರುವ ಮೊದಲ ಕನ್ನಡ ಮಿನಿ ವೆಬ್ ಸೀರೀಸ್ ನ್ನು ಖ್ಯಾತ ನಿರ್ದೇಶಕ ಹಾಗೂ ಕಲಾವಿದರ ರಮೇಶ್ ಇಂದಿರಾ ನಿರ್ಮಾಣ ಮಾಡಿದ್ದಾರೆ. ಈ ಸೀರೀಸ್ ಗೆ ಅಯ್ಯನ ಮನೆ ಎಂದು ಟೈಟಲ್ ಇಡಲಾಗಿದ್ದು ಅಕ್ಷಯ್ ನಾಯಕ್ ಮತ್ತು ಮಾನಸಿ ಸುಧೀರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.


ಬೆಂಗಳೂರು: ಜನಪ್ರಿಯ ಒಟಿಟಿ ಫ್ಲಾಟ್‌ಫಾರ್ಮ್‌ನಲ್ಲಿ ZEE5 ಕೂಡ ಒಂದು, ಹಲವು ಸೂಪರ್ ಹಿಟ್ ಸಿನಿಮಾಗಳು ಈ ಒಟಿಟಿ ಫ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿದೆ. ಇದೀಗ ZEE5 ಮತ್ತೊಂದು ಗುಡ್ ನ್ಯೂಸ್ ನೀಡಲು ಮುಂದಾಗಿದ್ದು ಕನ್ನಡ ಸಿನಿಮಾಪ್ರೇಮಿಗಳಿಗಾಗಿ ಮಿನಿ ವೆಬ್ ಸೀರೀಸ್ (Web Series) ಪರಿಚಯಿಸಿದೆ. ZEE5 ನಿಂದ ಮೂಡಿ ಬರುತ್ತಿರುವ ಮೊದಲ ಕನ್ನಡ ಮಿನಿ ವೆಬ್ ಸೀರೀಸ್ ಅನ್ನು ಖ್ಯಾತ ನಿರ್ದೇಶಕ ಹಾಗೂ ಕಲಾವಿದರ ರಮೇಶ್ ಇಂದಿರಾ ನಿರ್ಮಾಣ ಮಾಡಿದ್ದಾರೆ. ಈ ಸೀರೀಸ್ ಗೆ ಅಯ್ಯನ ಮನೆ ಎಂದು ಟೈಟಲ್ ಇಡಲಾಗಿದ್ದು ಅಕ್ಷಯ್ ನಾಯಕ್ ಮತ್ತು ಮಾನಸಿ ಸುಧೀರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ
ರಮೇಶ್ ಇಂದಿರಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಅಯ್ಯನ ಮನೆʼ ವೆಬ್ ಸೀರೀಸ್ ಗೆ ಶೃತಿ ನಾಯ್ಡು ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ಏಳು ಎಪಿಸೋಡ್ ಹೊಂದಿರುವ ವೆಬ್ ಸೀರೀಸ್ ನಲ್ಲಿ ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಅಭಿನಯಿಸಿದ್ದಾರೆ. ಇದು ಭಯ, ನಂಬಿಕೆ ಮತ್ತು ವಿಧಿ ಘರ್ಷಿಸುವ ಕಥೆಯನ್ನೊಳಗೊಂಡಿದ್ದು, ಇದೇ ತಿಂಗಳ 25ರಿಂದ ZEE5ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಈ ಮೂಲಕ ಅಭಿಮಾನಿಗಳನ್ನು ಹೊಸ ರೀತಿಯಲ್ಲಿ ಮನರಂಜಿಸಲು ಜೀ5 ಮುಂದಾಗಿದೆ.
ಇದನ್ನು ಓದಿ: OTT Malayalam Movies: ಒಟಿಟಿಯಲ್ಲಿ ಧೂಳೆಬ್ಬಿಸುತ್ತಿದೆ ಈ 5 ಹೊಸ ಮಲಯಾಳಂ ಸಿನಿಮಾ
ಚಿಕ್ಕಮಗಳೂರಿನ ಅಯ್ಯನ ಮನೆ ಕುಟುಂಬದಲ್ಲಿ ಅಡಗಿರುವ ಸತ್ಯಗಳ ಸುತ್ತಕಥೆ ಸಾಗುತ್ತದೆ. ಇದೊಂದು ಮಿಸ್ಟ್ರೀ ಕಥೆ ಒಳಗೊಂಡಿದ್ದು, ಪ್ರೇಕ್ಷಕರನ್ನು ಪ್ರತಿ ಕ್ಷಣ ಎಕ್ಸೈಟ್ ಆಗುವಂತೆ ಮಾಡುತ್ತದೆ. ಈಗಾಗಲೇ ಹಲವು ಹಿಟ್ ಚಿತ್ರ ಕೊಟ್ಟುರುವ ರಮೇಶ್ ಇಂದಿರಾ ಹೊಸ ಬಗೆಯ ಕಥೆಯ ಮೂಲಕ ಒಟಿಟಿ ಪ್ರೇಕ್ಷಕರನ್ನು ತಲುಪಲಿದ್ದಾರೆ. ಅಯ್ಯನ ಮನೆ ವೆಬ್ ಸೀರೀಸ್ ಬಗ್ಗೆ ನಿರ್ದೇಶಕರಾದ ರಮೇಶ್ ಇಂದಿರಾ ಮಾತನಾಡಿ, ಅಯ್ಯನ ಮನೆ ರೋಚಕತೆ ಜೊತೆಗೆ ಭಯ, ನಂಬಿಕೆ ಮತ್ತು ಫ್ಯಾಮಿಲಿ ಕಥೆಯೊನ್ನೊಳಗೊಂಡಿದೆ. ಈ ವೆಬ್ ಸರಣಿ ಕರ್ನಾಟಕ ಸಂಸ್ಕೃತಿ, ಸಂಪ್ರದಾಯದವನ್ನು ತಿಳಿಸಲಿದ್ದು ಅಯ್ಯನ ಮನೆ ವೆಬ್ ಸರಣಿ ಪ್ರೇಕ್ಷಕರನ್ನು ಹೆಚ್ಚು ಆಸಕ್ತಿದಾಯಕವಾಗಿ ಮಾಡಲಿದೆ ಎಂದಿದ್ದಾರೆ.
ಜಾಜಿ ಪಾತ್ರ ಮಾಡಿರುವ ಖುಷಿ ರವಿ ಮಾತನಾಡಿ, ಮುಗ್ದತೆ, ಗಂಡನ ಪ್ರೀತಿಯ ಹೆಂಡತಿ, ಸಂಪ್ರದಾಯಕ್ಕೆ ನಡೆದುಕೊಳ್ಳುವ ಹೆಣ್ಣು ಮಗಳಾಗಿ ನಟನೆ ಮಾಡಿದ್ದೇನೆ. ಇದೊಂದು ಎಮೋಷನ್ ಪಯಣ. ಜೊತೆಗೆ ಅನೇಕ ರಹಸ್ಯಗಳ ಕಥಾಹಂದರ. ನಾನು ವೆಬ್ ಸರಣಿ ನೋಡಲು ಕಾತರಳಾಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಈಗಾಗಲೇ ಹಲವು ಹಿಟ್ ಚಿತ್ರ ನೀಡಿರುವ ರಮೇಶ್ ಇಂದಿರಾ ಹೊಸ ರೀತಿಯ ಕಥೆಯ ಮೂಲಕ ಒಟಿಟಿ ಪ್ರೇಕ್ಷಕರನ್ನು ಮನರಂಜಿಸಲಿದ್ದಾರೆ.