ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Kannada Movie: ಉತ್ತರ ಕರ್ನಾಟಕದ ಸೊಗಡಿನ ಕಥೆ; ʻಹುಬ್ಬಳ್ಳಿ ಹಂಟರ್ಸ್ʼ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

Hubballi Hunters: ಕನ್ನಡದ ಸೂಪರ್ ಹಿಟ್ ಸಿನಿಮಾ ಬೆಲ್ ಬಾಟಮ್ ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಹೊಸ ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ತಮ್ಮದೇ ಗೋಲ್ಡನ್ ಹಾರ್ಸ್ ಸಿನಿಮಾ ಬ್ಯಾನರ್‌ನಡಿ‌ ಹುಬ್ಬಳ್ಳಿ ಹಂಟರ್ಸ್ ಎಂಬ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ಎಡಗೈ ಅಪಘಾತಕ್ಕೆ ಕಾರಣ ಚಿತ್ರ ನಿರ್ದೇಶಿಸಿದ್ದ ಸಮರ್ಥ್ ಬಿ‌ ಕಡ್ಕೋಲ್ ಹುಬ್ಬಳ್ಳಿ ಹಂಟರ್ಸ್ ನಿರ್ದೇಶಕರು. ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಪ್ರಮೋದ್ ಶೆಟ್ಟಿ ಹುಬ್ಬಳ್ಳಿ ಹಂಟರ್ಸ್ ಸಿನಿಮಾದ ನಾಯಕ. ಮಹಾನಟಿ‌ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ.

ʻಹುಬ್ಬಳ್ಳಿ ಹಂಟರ್ಸ್ʼ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ʻಹುಬ್ಬಳ್ಳಿ ಹಂಟರ್ಸ್ʼ ಸಿನಿಮಾ -

Yashaswi Devadiga
Yashaswi Devadiga Feb 10, 2026 10:30 AM

ಕನ್ನಡದ ಸೂಪರ್ ಹಿಟ್ ಸಿನಿಮಾ ಬೆಲ್ ಬಾಟಮ್ (bell bottom) ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಹೊಸ ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ತಮ್ಮದೇ ಗೋಲ್ಡನ್ ಹಾರ್ಸ್ ಸಿನಿಮಾ ಬ್ಯಾನರ್‌ನಡಿ‌ ಹುಬ್ಬಳ್ಳಿ ಹಂಟರ್ಸ್ (Hubballi hunters) ಎಂಬ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ಎಡಗೈ ಅಪಘಾತಕ್ಕೆ ಕಾರಣ ಚಿತ್ರ ನಿರ್ದೇಶಿಸಿದ್ದ ಸಮರ್ಥ್ ಬಿ‌ ಕಡ್ಕೋಲ್ ಹುಬ್ಬಳ್ಳಿ ಹಂಟರ್ಸ್ ನಿರ್ದೇಶಕರು. ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಪ್ರಮೋದ್ ಶೆಟ್ಟಿ ಹುಬ್ಬಳ್ಳಿ ಹಂಟರ್ಸ್ ಸಿನಿಮಾದ ನಾಯಕ. ಮಹಾನಟಿ‌ ಖ್ಯಾತಿಯ ಧನ್ಯಶ್ರೀ ಸುಜಿತ್ (Sujith) ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ.

ಇದನ್ನೂ ಓದಿ: Allu Arjun: ಖ್ಯಾತ ಬಾಲಿವುಡ್​ನ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಮೂವಿ?

ಮೊದಲ ಹಂತದ ಶೂಟಿಂಗ್ ಮುಕ್ತಾಯ

ಹುಬ್ಬಳ್ಳಿಯಲ್ಲಿ ಮುಹೂರ್ತ ನೆರವೇರೆಸಿದ್ದ ಚಿತ್ರತಂಡ ಇದೀಗ ಮೊದಲ ಹಂತದ ಶೂಟಿಂಗ್ ಮುಗಿಸಿದೆ. ಹುಬ್ಬಳ್ಳಿ ನಗರದಲ್ಲಿ 14 ದಿನ ಶೂಟಿಂಗ್ ಚಿತ್ರೀಕರಣ ನಡೆಸಿದೆ. ಮಾರ್ಚ್ ತಿಂಗಳಲ್ಲಿ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಶುರು ಮಾಡಲು ಯೋಜನೆ ಹಾಕಿಕೊಂಡಿದೆ.

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದ ಪ್ರಮೋದ್ ಶೆಟ್ಟಿ,‌ಮಹಾನಟಿ‌ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಚಿತ್ರದಲ್ಲಿ ನಟಿಸುತ್ತಿರುವುದು ಮತ್ತೊಂದು ವಿಶೇಷ.

ಇದನ್ನೂ ಓದಿ: Ram Charan: ನಟ ರಾಮ್ ಚರಣ್, ಉಪಾಸನಾ ಬಾಳಲ್ಲಿ ಅವಳಿ ಮಕ್ಕಳು; ಸಂಭ್ರಮಿಸಿದ್ದು ಹೀಗೆ

ಸಿನಿಮಾದ ಟೈಟಲ್ ಹೇಳುವಂತೆ ಇದು ಉತ್ತರ ಕರ್ನಾಟಕ ಸೊಗಡಿನ ಕಥೆ. ಸಮರ್ಥ್ ಅವರ್ ಕಥೆ ಬರೆದು ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಅವರೊಂದಿಗೆ ಸಂಭಾಷಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಛಾಯಾಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಹುಬ್ಬಳ್ಳಿ ಹಂಟರ್ಸ್ ಮೂಲಕ ಸಮರ್ಥ್ ಬಿ ಕಡ್ಕೋಳ್ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಬಡಿಸಲು ಹೊರಟಿದ್ದಾರೆ.