ನವದೆಹಲಿ: ಹಾಸ್ಯನಟ ಕಪಿಲ್ ಶರ್ಮಾ (Kapil Sharma) ಅವರ ಕ್ಯಾಪ್ಸ್ ಕೆಫೆ ಮೇಲೆ ಬುಧವಾರ ತಡರಾತ್ರಿ ದಾಳಿ ನಡೆದ ನಂತರ ಕಪಿಲ್ ಶರ್ಮಾ ಅವರು ಈ ಘಟನೆಯ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡ ಅವರು ಈ ಘಟನೆಯು ತಮ್ಮನ್ನು ಆಘಾತಗೊಳಿಸಿದೆ ಎಂದು ಹೇಳಿದ್ದಾರೆ. ಹಿಂಸಾಚಾರದ ವಿರುದ್ಧ ದೃಢವಾಗಿ ನಿಲ್ಲುತ್ತೇನೆ ಎಂದು ಕಪಿಲ್ ಹೇಳಿದ್ದಾರೆ.
ರುಚಿಕರವಾದ ಕಾಫಿ ಮತ್ತು ಸ್ನೇಹಪರ ಸಂಭಾಷಣೆಗಳ ಮೂಲಕ ಜನರಿಗೆ ಸಂತೋಷವನ್ನು ತರುವ ಭರವಸೆಯೊಂದಿಗೆ ನಾವು ಕ್ಯಾಪ್ಸ್ ಕೆಫೆಯನ್ನು ತೆರೆದಿದ್ದೇವೆ. ಆ ಕನಸಿಗೆ ಪೆಟ್ಟು ಬಿದ್ದರೆ ನಾವು ಅದನ್ನು ಸಹಿಸುವುದಿಲ್ಲ. ನಾವು ಮತ್ತೆ ಎದ್ದು ನಿಲ್ಲುತ್ತೇವೆ. ಅದೇ ಜಗದಲ್ಲಿ ಮರಳಿ ಕೆಫೆ ಪ್ರಾರಂಭಿಸುತ್ತೇವೆ. ಯಾವುದಕ್ಕೂ ಭಯ ಪಡುವುದಿಲ್ಲ ಎಂದು ಕಪಿಲ್ ಹೇಳಿದ್ದಾರೆ.
ಖಲಿಸ್ತಾನಿ ಭಯೋತ್ಪಾದಕ ಹರ್ಜೀತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪಟ್ಟಿ ಮಾಡಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಲಡ್ಡಿ, ನಿಷೇಧಿತ ಗುಂಪು ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ಗೆ ಸಂಬಂಧಿಸಿದ್ದಾನೆ. ದಾಳಿಕೋರರು ಕಾರಿನಲ್ಲಿ ಬಂದು ಸ್ವಲ್ಪ ಹೊತ್ತಿನಲ್ಲೇ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ತಡ ರಾತ್ರಿಯಾದ ಕಾರಣ ಕ್ಯಾಪ್ಸ್ ಕೆಫೆ ಕ್ಲೋಸ್ ಆಗಿತ್ತು.
ಈ ಸುದ್ದಿಯನ್ನೂ ಓದಿ; Terrorist Arrested: 58 ಜನರನ್ನು ಸಾಯಿಸಿದ ಕೊಯಮತ್ತೂರು ಬಾಂಬ್ ಸ್ಫೋಟ ಆರೋಪಿ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಸೆರೆ!
ಲಡ್ಡಿ ಭಾರತದ ಮೋಸ್ಟ್ ವಾಟೆಂಟ್ ಉಗ್ರನಾಗಿದ್ದಾನೆ. ಭಾರತದಲ್ಲಿ ಹಲವು ಭಯೋತ್ಪಾದಕ ಕೃತ್ಯಗಳು, ಹಿಂದೂ ನಾಯಕ ಹತ್ಯೆ ಹಿಂದೆ ಈತನ ಮೇಲೆ ಗಂಭೀರ ಆರೋಪಗಳು ಕೇಳಿಬಂದಿದೆ. ಎಪ್ರಿಲ್ 13, 2024ರಲ್ಲಿ ವಿಶ್ವ ಹಿಂದೂಪರಿಷತ್ ಪ್ರಭಾಕರ್ ಮೇಲೆ ಪಂಜಾಬ್‌ನ ನಂಗಾಲ್‌ನಲ್ಲಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಈ ದಾಳಿ ಹಿಂದೆ ಇದೆ ಲಡ್ಡಿ ಮಾಸ್ಟರ್ ಮೈಂಡ್ ಆಗಿ ಕಾರ್ಯನಿರ್ವಹಿಸಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗವಾಗಿದೆ. 2023ರಲ್ಲಿ ಲಡ್ಡಿ ಕುರಿತು ಮಾಹಿತಿ ನೀಡಿದರೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿತ್ತು.