ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Pavithra Gowda: ದರ್ಶನ್‌ ಬರ್ತ್‌ಡೇ ದಿನವೇ ಪವಿತ್ರಾಗೆ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಮಧ್ಯಂತರ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ದರ್ಶನ್ ಬರ್ತ್​ಡೇ ದಿನವೇ ಪವಿತ್ರಾ ಗೌಡಗೆ ಬಿಗ್ ಶಾಕ್ ಸಿಕ್ಕಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯ ಜಾಮೀನು ವಜಾ ಆಗಿದೆ. ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್​​ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ.

ದರ್ಶನ್‌ ಬರ್ತ್‌ಡೇ ದಿನವೇ ಪವಿತ್ರಾಗೆ ನಿರಾಸೆ; ಸಿಗಲಿಲ್ಲ ಜಾಮೀನು!

ಪವಿತ್ರಾ ಗೌಡ -

Yashaswi Devadiga
Yashaswi Devadiga Feb 16, 2026 1:46 PM

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಅವರ ಮಧ್ಯಂತರ ಜಾಮೀನು (Pavithra Gowda Bail Denied) ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ದರ್ಶನ್ ಬರ್ತ್​ಡೇ ದಿನವೇ (Darshan Birthday) ಪವಿತ್ರಾ ಗೌಡಗೆ ಬಿಗ್ ಶಾಕ್ ಸಿಕ್ಕಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯ ಜಾಮೀನು ವಜಾ ಆಗಿದೆ. ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್​​ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ.

ಅರ್ಜಿ ಸಲ್ಲಿಸಿದ್ದೇಕೆ?

57ನೇ ಸೆಷನ್ಸ್ ಕೋರ್ಟ್ ನಿಂದ ಆದೇಶ ಬಂದಿದ್ದು, ಮಗಳ ಬೋರ್ಡ್ ಪರೀಕ್ಷೆ ಹಿನ್ನೆಲೆಯಲ್ಲಿ ಜಾಮೀನು ಕೊಡಿ ಎಂದು ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದರು. ಪವಿತ್ರಾಗೌಡ ಜಾಮೀನು ಅರ್ಜಿಗೆ ಆಕ್ಷೇಪಿಸಿದ ಪ್ರಾಸಿಕ್ಯೂಷನ್ ಕೊಲೆ ಪ್ರಕರಣದ ಟ್ರಯಲ್ ನಡೆಯುತ್ತಿದೆ‌.

ಇದನ್ನೂ ಓದಿ: Vijay Devarakonda: ಸಿಎಂ ಭೇಟಿ ಮಾಡಿದ ವಿಜಯ್ ದೇವರಕೊಂಡ; ಮದುವೆಗೆ ಆಮಂತ್ರಣ ಆರಂಭಿಸಿದ್ರಾ?

ಹೀಗಾಗಿ ಜಾಮೀನು ನೀಡಬಾರದು ಎಂದು ವಾದಿಸಿದ್ದಾರೆ. ಸೆಷನ್ಸ್ ಕೋರ್ಟ್ ವಿಚಾರಣೆ ನಡೆಸಿ ಪವಿತ್ರಾಗೌಡ ಅರ್ಜಿ ವಜಾಗೊಳಿಸಿದೆ. ನ್ಯಾ. ಐ ಪಿ ನಾಯಕ್ ಅವರಿಂದ ಆದೇಶ ಹೊರಬಿದ್ದಿದೆ.

ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು. ನಂತರ ಇದನ್ನು ರದ್ದು ಮಾಡಲಾಯಿತು.

ಇದೇ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ನಾಗರಾಜ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪತ್ನಿಗೆ ಶಸ್ತ್ರಚಿಕಿತ್ಸೆ (Operation) ನಡೆಯುತ್ತಿರುವ ಹಿನ್ನೆಲೆಯಲ್ಲಿ ತನಗೆ ಜಾಮೀನು ಬೇಕು ಎಂದು ನಾಗರಾಜ್ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನೂ ಕೂಡ ನ್ಯಾಯಾಲಯವು ಇಂದು ಕೈಗೆತ್ತಿಕೊಳ್ಳಲಿದೆ ಎನ್ನಲಾಗಿದೆ.

ಇದನ್ನೂ ಓದಿ: Darshan Birthday: ಉಸಿರಿರುವವರೆಗೂ ನಿಮ್ಮ ಹಿಂದೆ ಇರ್ತೀವಿ ಅಣ್ಣ! ದರ್ಶನ್‌ಗೆ ಧನ್ವೀರ್‌ ವಿಶ್‌

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರಿಗೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದನೆಂಬ ಕಾರಣಕ್ಕಾಗಿ, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ತಂದು, ಪಟ್ಟಣಗೆರೆಯಲ್ಲಿನ ಶೆಡ್‌ನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿಯಾಗಿದ್ದರು.