Pinaka Movie: ʼಪಿನಾಕʼ ಚಿತ್ರದ ವಿಭಿನ್ನ ಪೋಸ್ಟರ್ ರಿಲೀಸ್: ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಲುಕ್‌ಗೆ ಫ್ಯಾನ್ಸ್ ಫಿದಾ
ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ʼಪಿನಾಕʼ ಚಿತ್ರದ ಪೋಸ್ಟರ್ ಮಹಾ ಶಿವರಾತ್ರಿ ದಿನದಂದು ಬಿಡುಗಡೆಯಾಗಿದೆ. ಪೋಸ್ಟರ್‌ನಲ್ಲಿ ತ್ರಿಶೂಲ ಹಿಡಿದು ನಿಂತಿರುವ ಗಣೇಶ್ ಅವರ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.


ಬೆಂಗಳೂರು: ಪ್ರತಿಷ್ಟಿತ ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ಟಿ.ಜಿ.ವಿಶ್ವ ಅವರು ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕರಾಗಿ ಜನಪ್ರಿಯರಾಗಿರುವ ಬಿ.ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಾಯಕನಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ʼಪಿನಾಕʼ ಚಿತ್ರದ (Pinaka Movie) ಪೋಸ್ಟರ್ ಮಹಾ ಶಿವರಾತ್ರಿ ದಿನದಂದು ಬಿಡುಗಡೆಯಾಗಿದೆ. ʼಪಿನಾಕʼ ಚಿತ್ರದ ವಿಭಿನ್ನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಚಿತ್ರತಂಡ ಮಹಾ ಶಿವರಾತ್ರಿ ಶುಭಾಶಯ ತಿಳಿಸಿದೆ. ಪೋಸ್ಟರ್‌ನಲ್ಲಿ ತ್ರಿಶೂಲ ಹಿಡಿದು ನಿಂತಿರುವ ಗಣೇಶ್ ಅವರ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ʼಪಿನಾಕʼ ಎಂದರೆ ಶಿವನ ತ್ರಿಶೂಲ. ಈ ಚಿತ್ರದ ಶೀರ್ಷಿಕೆಯೂ ಹೌದು. ಗಣೇಶ್ ಅವರು ಸಹ ಈ ಚಿತ್ರದಲ್ಲಿ ಕ್ಷುದ್ರ ಹಾಗೂ ರುದ್ರ ಎಂಬ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಟೀಸರ್‌ಗೆ ಮಹಾಪೂರವೇ ಹರಿದು ಬಂದಿದೆ. ಕ್ಷುದ್ರ ಮತ್ತು ರುದ್ರನ ಅವತಾರದಲ್ಲಿ ಗಣೇಶ್ ಈವರೆಗೂ ಯಾವ ಚಿತ್ರದಲ್ಲೂ ಕಾಣಿಸದ ಪಾತ್ರದಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಟೈಟಲ್ ಟೀಸರ್‌ನಲ್ಲಿ ಮೈನವಿರೇಳಿಸುವ ದೃಶ್ಯಗಳಿದ್ದು, ಹಿನ್ನೆಲೆ ಸಂಗೀತ ಕೂಡ ಮೋಡಿ ಮಾಡಿದೆ.
ಈ ಸುದ್ದಿಯನ್ನೂ ಓದಿ | Maha Shivaratri 2025: ತ್ಯಾಗ, ವಿರಕ್ತಿಯಿಂದ ಶಾಂತಿ, ನೆಮ್ಮದಿ: ಡಿ. ವೀರೇಂದ್ರ ಹೆಗ್ಗಡೆ
ಈಗಾಗಲೇ ತೆಲುಗು, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ 48 ಚಿತ್ರಗಳನ್ನು ನಿರ್ಮಿಸಿರುವ ಟಿ.ಜಿ. ವಿಶ್ವಪ್ರಸಾದ್ ಸಾರಥ್ಯದ ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣ ಮಾಡುತ್ತಿರುವ 49ನೇ ಚಿತ್ರವಿದು. ನೃತ್ಯ ನಿರ್ದೇಶಕನಾಗಿ ಜನಪ್ರಿಯರಾಗಿರುವ ಧನಂಜಯ ಮೊದಲ ಬಾರಿಗೆ ʼಪಿನಾಕʼ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.