ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಅಂದು ಮಚ್ಚು, ಇಂದು ಸಿಗರೇಟು; ʻಬಿಗ್‌ ಬಾಸ್‌ʼ ಖ್ಯಾತಿಯ ರಜತ್‌ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು!

Rajath Bujji Controversy: ಬಿಗ್‌ ಬಾಸ್‌ ಖ್ಯಾತಿಯ ರಜತ್‌ ವಿರುದ್ಧ ಮೈಸೂರಿನ ಪಾರಂಪರಿಕ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನುಮತಿ ಇಲ್ಲದೆ ಸಿಗರೇಟು ಸೇದುತ್ತಾ ರೀಲ್ಸ್ ಮಾಡಿದ ಆರೋಪ ಕೇಳಿಬಂದಿದೆ. ಈ ಹಿಂದೆ ಲಾಂಗು ಹಿಡಿದು ಜೈಲು ಸೇರಿದ್ದ ರಜತ್, ಈಗ ಮತ್ತೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿದ್ದಾರೆಂದು ಕರ್ನಾಟಕ ಸೇನಾ ಪಡೆ ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ನೀಡಿದೆ.

ಬಿಗ್ ಬಾಸ್ ಖ್ಯಾತಿಯ ರಜತ್ ಬುಜ್ಜಿ, ಆಗಾಗ ಸೋಶಿಯಲ್ ಮೀಡಿಯಾ ರೀಲ್ಸ್‌ಗಳ ಮೂಲಕವೂ ಹೆಚ್ಚು ಸದ್ದು ಮಾಡುತ್ತಾರೆ. ಇದೀಗ ಅವರು ರೀಲ್ಸ್‌ ವಿಚಾರಕ್ಕಾಗಿಯೇ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಹಿಂದೆ ಲಾಂಗು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿದ್ದ ರಜತ್, ಇದೀಗ ಸಿಗರೇಟು ಸೇದುತ್ತಾ ಮಾಡಿದ ವಿಡಿಯೋದಿಂದಾಗಿ ಮತ್ತೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೈಸೂರಿನಲ್ಲಿ ಮಾಡಿದ್ದ ರೀಲ್ಸ್‌ನಿಂದ ಹೊಸ ವಿವಾದ

ಎರಡು ದಿನಗಳ ಹಿಂದೆ ರಜತ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ರೀಲ್ಸ್ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಅವರು ಮೈಸೂರಿನ ಐತಿಹಾಸಿಕ ಹಾಗೂ ಪಾರಂಪರಿಕ ಕಟ್ಟಡವಾದ ಹಳೆಯ ಜಿಲ್ಲಾಧಿಕಾರಿ ಕಚೇರಿಯ (Old DC Office) ಮುಂಭಾಗ ಕಾರಿನಿಂದ ಸ್ಟೈಲಿಶ್ ಆಗಿ ಇಳಿಯುತ್ತಾ, ಬಾಯಲ್ಲಿ ಸಿಗರೇಟು ಇಟ್ಟುಕೊಂಡು ಫೋಸ್ ನೀಡಿದ್ದಾರೆ. ಈ ವಿಡಿಯೋ ಈಗ ವಿವಾದಕ್ಕೆ ಕಾರಣವಾಗಿದೆ.

Bigg Boss Kannada 12: ಗಿಲ್ಲಿಯನ್ನೇ ನಾಮಿನೇಟ್‌ ಮಾಡಿದ ಕಾವು! ರಜತ್‌-ಧ್ರುವಂತ್‌ ಮಧ್ಯೆ ಮಾರಾಮಾರಿ

ಅನುಮತಿ ಇಲ್ಲದೆ ಚಿತ್ರೀಕರಣ

ಸಾರ್ವಜನಿಕ ಸ್ಥಳದಲ್ಲಿ, ಅದರಲ್ಲೂ ಪಾರಂಪರಿಕ ಕಟ್ಟಡದ ಮುಂಭಾಗದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೇ ಈ ರೀತಿ ಸಿಗರೇಟು ಸೇದುತ್ತಾ ವಿಡಿಯೋ ಚಿತ್ರೀಕರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾಗಿವೆ. ಮಚ್ಚು ಹಿಡಿದು ರೀಲ್ಸ್‌ ಮಾಡಿ, ಅದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಕ್ಕೆ ರಜತ್‌ ಜೈಲಿಗೆ ಹೋಗಬೇಕಾಯಿತು. ಇದೀಗ ಮತ್ತೊಮ್ಮೆ ಅದೇ ಮಾದರಿಯಲ್ಲಿ ಸಿಗರೇಟ್‌ ಸೇದುತ್ತಾ ವಿಡಿಯೋ ಮಾಡಿರುವ ಇವರು, ಯುವ ಜನತೆಗೆ ಏನು ಸಂದೇಶ ನೀಡುತ್ತಾರೆ ಎಂಬ ಮಾತುಗಳು ಕೇಳಿಬಂದಿವೆ.

ರಜತ್‌ ಹಂಚಿಕೊಂಡಿರುವ ರೀಲ್ಸ್



ಪೊಲೀಸ್ ಠಾಣೆಯಲ್ಲಿ ದೂರು

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು, ರಜತ್ ವಿರುದ್ಧ ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಸದ್ಯ ಎನ್‌ಸಿಆರ್ (NCR - Non-Cognizable Report) ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ರಜತ್ ಅವರು ಮಚ್ಚು (ಲಾಂಗು) ಹಿಡಿದುಕೊಂಡು ರೀಲ್ಸ್ ಮಾಡಿದ್ದಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಲ್ಲದೆ, ಜೈಲು ಶಿಕ್ಷೆಯನ್ನೂ ಅನುಭವಿಸಿದ್ದರು. ಆ ಘಟನೆ ಮಾಸುವ ಮುನ್ನವೇ ಈಗ ಮತ್ತೊಂದು ರೀಲ್ಸ್ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಂತಾಗಿದೆ.