Prabhas: ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ; ಪ್ರಭಾಸ್ ‘ದಿ ರಾಜಾಸಾಬ್’ ಬಿಗ್ ಅಪ್ಡೇಟ್
ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಥಮನ್ ಎಸ್. ಸಂಗೀತ ನೀಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹಾರರ್, ಕಾಮಿಡಿ ಜತೆಗೆ ಲವ್ ಸ್ಟೋರಿಯೂ ಸಹ ಇರಲಿದೆ. ಈಗಾಗಲೇ ಬೃಹತ್ ಸೆಟ್ಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾವನ್ನು ಶೂಟ್ ಮಾಡಲಾಗಿದೆ.
Prabhas -
Yashaswi Devadiga
Nov 6, 2025 9:34 AM
ರೆಬೆಲ್ ಸ್ಟಾರ್ ಪ್ರಭಾಸ್ ಅವರ ಬಹುನಿರೀಕ್ಷಿತ ಹಾರರ್-ಫ್ಯಾಂಟಸಿ ಚಿತ್ರ 'ದಿ ರಾಜಾ ಸಾಬ್' ಬಿಡುಗಡೆ ವಿಳಂಬವಾಗುವ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಕೇಳಿಬಂದಿದ್ದವು. ಆದರೆ, ತಯಾರಕರು ಈಗ ಅಂತಹ ಎಲ್ಲಾ ವದಂತಿಗಳನ್ನು ತಳ್ಳಿಹಾಕಿದ್ದಾರೆ.
ಈ ಹೈ ಪ್ರೊಫೈಲ್ ಚಿತ್ರ ಬೆಂಬಲಿಸುವ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ, ಚಿತ್ರವನ್ನು ಮುಂದೂಡಲಾಗಿದೆ ಎಂಬ ವರದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದೆ. ಸಂಕ್ರಾಂತಿ ಅಂದರೆ ಜನವರಿ 9, 2026 ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಚಿತ್ರ ಬಿಡುಗಡೆಯಾಗಲಿದೆ ಎಂದು ಖಚಿತಪಡಿಸಿದೆ.
ರಾಜಾ ಸಾಬ್ ಜನವರಿ 9, 2026 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ವೇಗವಾಗಿ ನಡೆಯುತ್ತಿವೆ, ಯಾವುದೇ ವಿಳಂಬವಿಲ್ಲದೆ ಉನ್ನತ ತಾಂತ್ರಿಕ ಗುಣಮಟ್ಟವನ್ನು ಕಾಯ್ದುಕೊಳ್ಳುತ್ತಿವೆ ಎಂದು ನಿರ್ಮಾಪಕ ಟಿಜಿ ವಿಶ್ವ ಪ್ರಸಾದ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ತಂಡವು ಶೀಘ್ರದಲ್ಲೇ ಪ್ರಚಾರ ಕಾರ್ಯ ಶುರು ಮಾಡಲಿದೆ.
ಮಾರುತಿ ಬರೆದು ನಿರ್ದೇಶಿಸಿದ ಈ ಚಿತ್ರದಲ್ಲಿ ಪ್ರಭಾಸ್, ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್, ರಿದ್ಧಿ ಕುಮಾರ್, ಸಂಜಯ್ ದತ್ ಮತ್ತು ಬೊಮನ್ ಇರಾನಿ ನಟಿಸಿದ್ದಾರೆ. ಚಲನಚಿತ್ರವು ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಜನವರಿ 9, 2026 ರಂದು ವಿಶ್ವದಾದ್ಯಂತ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ಜನರ ಊಹೆಗೂ ಮೀರಿ ಅಂದರೆ ಲಾರ್ಜರ್ ದ್ಯಾನ್ ಲೈಫ್’ ರೀತಿಯಲ್ಲಿ ‘ರಾಜಾಸಾಬ್’ಸಿನಿಮಾವನ್ನು ನಿರ್ಮಿಸಲಾಗುತ್ತಿದೆ. ಪ್ರಪಂಚದಾದ್ಯಂತದ ಪ್ರೇಕ್ಷಕರಿಗೆ ಒಂದು ಅತ್ಯುತ್ತಮ ಥಿಯೇಟರ್ ಅನುಭವ ನೀಡಲೆಂದೇ ಈ ಸಿನಿಮಾ ನಿರ್ಮಾಣಮಾಡಲಾಗಿದೆ ಎಂದು ತಂಡ ಹೇಳಿಕೊಂಡಿದೆ. ಪ್ರಭಾಸ್ ಅವರು ಹಲವು ರೀತಿಯ ಪಾತ್ರಗಳನ್ನು ಮಾಡಿದ್ದಾರೆ. ಈಗ ಅವರು ಈ ಚಿತ್ರದಲ್ಲಿ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.
ಈಗಾಗಲೇ ರಿಲೀಸ್ ಆಗಿರುವ 'ದಿ ರಾಜಾ ಸಾಬ್' ಸಿನಿಮಾದ ಟೀಸರ್ ಪೋಸ್ಟರ್ ವೀಕ್ಷಕರ ಕುತೂಹಲ ಕೆರಳಿಸಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ, ಟಿ.ಜಿ. ವಿಶ್ವ ಪ್ರಸಾದ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ.
ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಥಮನ್ ಎಸ್. ಸಂಗೀತ ನೀಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹಾರರ್, ಕಾಮಿಡಿ ಜತೆಗೆ ಲವ್ ಸ್ಟೋರಿಯೂ ಸಹ ಇರಲಿದೆ. ಈಗಾಗಲೇ ಬೃಹತ್ ಸೆಟ್ಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾವನ್ನು ಶೂಟ್ ಮಾಡಲಾಗಿದೆ.