ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Prabhas: ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ; ಪ್ರಭಾಸ್‌ ‘ದಿ ರಾಜಾಸಾಬ್’ ಬಿಗ್‌ ಅಪ್‌ಡೇಟ್‌

ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಥಮನ್ ಎಸ್. ಸಂಗೀತ ನೀಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹಾರರ್, ಕಾಮಿಡಿ ಜತೆಗೆ ಲವ್ ಸ್ಟೋರಿಯೂ ಸಹ ಇರಲಿದೆ. ಈಗಾಗಲೇ ಬೃಹತ್ ಸೆಟ್ಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾವನ್ನು ಶೂಟ್ ಮಾಡಲಾಗಿದೆ.

Prabhas
1/7

ರೆಬೆಲ್ ಸ್ಟಾರ್ ಪ್ರಭಾಸ್ ಅವರ ಬಹುನಿರೀಕ್ಷಿತ ಹಾರರ್-ಫ್ಯಾಂಟಸಿ ಚಿತ್ರ 'ದಿ ರಾಜಾ ಸಾಬ್' ಬಿಡುಗಡೆ ವಿಳಂಬವಾಗುವ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಕೇಳಿಬಂದಿದ್ದವು. ಆದರೆ, ತಯಾರಕರು ಈಗ ಅಂತಹ ಎಲ್ಲಾ ವದಂತಿಗಳನ್ನು ತಳ್ಳಿಹಾಕಿದ್ದಾರೆ.

2/7

ಈ ಹೈ ಪ್ರೊಫೈಲ್ ಚಿತ್ರ ಬೆಂಬಲಿಸುವ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ, ಚಿತ್ರವನ್ನು ಮುಂದೂಡಲಾಗಿದೆ ಎಂಬ ವರದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದೆ. ಸಂಕ್ರಾಂತಿ ಅಂದರೆ ಜನವರಿ 9, 2026 ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಚಿತ್ರ ಬಿಡುಗಡೆಯಾಗಲಿದೆ ಎಂದು ಖಚಿತಪಡಿಸಿದೆ.

3/7

ರಾಜಾ ಸಾಬ್ ಜನವರಿ 9, 2026 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ವೇಗವಾಗಿ ನಡೆಯುತ್ತಿವೆ, ಯಾವುದೇ ವಿಳಂಬವಿಲ್ಲದೆ ಉನ್ನತ ತಾಂತ್ರಿಕ ಗುಣಮಟ್ಟವನ್ನು ಕಾಯ್ದುಕೊಳ್ಳುತ್ತಿವೆ ಎಂದು ನಿರ್ಮಾಪಕ ಟಿಜಿ ವಿಶ್ವ ಪ್ರಸಾದ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ತಂಡವು ಶೀಘ್ರದಲ್ಲೇ ಪ್ರಚಾರ ಕಾರ್ಯ ಶುರು ಮಾಡಲಿದೆ.

4/7

ಮಾರುತಿ ಬರೆದು ನಿರ್ದೇಶಿಸಿದ ಈ ಚಿತ್ರದಲ್ಲಿ ಪ್ರಭಾಸ್, ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್, ರಿದ್ಧಿ ಕುಮಾರ್, ಸಂಜಯ್ ದತ್ ಮತ್ತು ಬೊಮನ್ ಇರಾನಿ ನಟಿಸಿದ್ದಾರೆ. ಚಲನಚಿತ್ರವು ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಜನವರಿ 9, 2026 ರಂದು ವಿಶ್ವದಾದ್ಯಂತ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

5/7

ಜನರ ಊಹೆಗೂ ಮೀರಿ ಅಂದರೆ ಲಾರ್ಜರ್ ದ್ಯಾನ್ ಲೈಫ್’ ರೀತಿಯಲ್ಲಿ ‘ರಾಜಾಸಾಬ್’ಸಿನಿಮಾವನ್ನು ನಿರ್ಮಿಸಲಾಗುತ್ತಿದೆ. ಪ್ರಪಂಚದಾದ್ಯಂತದ ಪ್ರೇಕ್ಷಕರಿಗೆ ಒಂದು ಅತ್ಯುತ್ತಮ ಥಿಯೇಟರ್ ಅನುಭವ ನೀಡಲೆಂದೇ ಈ ಸಿನಿಮಾ ನಿರ್ಮಾಣಮಾಡಲಾಗಿದೆ ಎಂದು ತಂಡ ಹೇಳಿಕೊಂಡಿದೆ. ಪ್ರಭಾಸ್ ಅವರು ಹಲವು ರೀತಿಯ ಪಾತ್ರಗಳನ್ನು ಮಾಡಿದ್ದಾರೆ. ಈಗ ಅವರು ಈ ಚಿತ್ರದಲ್ಲಿ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

6/7

ಈಗಾಗಲೇ ರಿಲೀಸ್ ಆಗಿರುವ 'ದಿ ರಾಜಾ ಸಾಬ್‌' ಸಿನಿಮಾದ ಟೀಸರ್ ಪೋಸ್ಟರ್‌ ವೀಕ್ಷಕರ ಕುತೂಹಲ ಕೆರಳಿಸಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ, ಟಿ.ಜಿ. ವಿಶ್ವ ಪ್ರಸಾದ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ.‌

7/7

ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಥಮನ್ ಎಸ್. ಸಂಗೀತ ನೀಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹಾರರ್, ಕಾಮಿಡಿ ಜತೆಗೆ ಲವ್ ಸ್ಟೋರಿಯೂ ಸಹ ಇರಲಿದೆ. ಈಗಾಗಲೇ ಬೃಹತ್ ಸೆಟ್​​ಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾವನ್ನು ಶೂಟ್ ಮಾಡಲಾಗಿದೆ.

Yashaswi Devadiga

View all posts by this author