ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʻಕರಾವಳಿʼ ಟ್ರೇಲರ್ ಲಾಂಚ್‌ ವೇಳೆ ಹೈಡ್ರಾಮಾ; ಕೆರಳಿ ಕೆಂಡವಾದ ಪ್ರಜ್ವಲ್ ದೇವರಾಜ್ ಅಭಿಮಾನಿಗಳು, ಅಷ್ಟಕ್ಕೂ ಆಗಿದ್ದೇನು?

ಬೆಂಗಳೂರಿನ ಎಎಂಬಿ ಕಪಾಲಿ ಚಿತ್ರಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕರಾವಳಿ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಭಾರಿ ಗದ್ದಲ ಸೃಷ್ಟಿಸಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ. ನಾಯಕ ನಟನಿಗೆ ಆಹ್ವಾನ ನೀಡದಿರುವುದು ಮತ್ತು ಚಿತ್ರದಲ್ಲಿ ಅವರ ಪಾತ್ರಕ್ಕೆ ಸ್ವತಃ ಪ್ರಜ್ವಲ್ ಡಬ್ ಮಾಡದಿರುವ ಕಾರಣಕ್ಕೆ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಎಎಂಬಿ ಕಪಾಲಿ ಚಿತ್ರಮಂದಿರದಲ್ಲಿ ನಡೆಯುತ್ತಿದ್ದ ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಕಾರ್ಯಕ್ರಮದಲ್ಲಿ ನಟ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಇಂದು (ಜುಲೈ 7) ಚಿತ್ರದ ಟ್ರೇಲರ್‌ ಲಾಂಚ್‌ ಈವೆಂಟ್‌ ಅನ್ನು ಆಯೋಜಿಸಲಾಗಿತ್ತು. ಈ ವೇಳೆ ಸಮಾರಂಭಕ್ಕೆ ಆಗಮಿಸಿದ್ದ ಪ್ರಜ್ವಲ್‌ ಫ್ಯಾನ್ಸ್ ಗಲಾಟೆ ಮಾಡಿದ್ದಾರೆ.

ಟ್ರೇಲರ್‌ ಲಾಂಚ್‌ ವೇಳೆ ಏನಾಯ್ತು?

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಕರಾವಳಿ’ ಚಿತ್ರದ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ಆಯೋಜನೆಗೊಂಡಿತ್ತು. ನಿರೂಪಕಿ ಅನುಶ್ರೀ ಅವರು ನಿರೂಪಣೆ ಮಾಡುತ್ತಿದ್ದ ಈ ಕಾರ್ಯಕ್ರಮದ ವೇಳೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಹಠಾತ್ ಆಕ್ರೋಶ ವ್ಯಕ್ತಪಡಿಸಿ, ಗದ್ದಲ ಸೃಷ್ಟಿಸಿದರು. ಈ ವೇಳೆ ಚಿತ್ರತಂಡ, ಅಭಿಮಾನಿಗಳು ಹಾಗೂ ಕರವೇ ಪ್ರವೀಣ್ ಶೆಟ್ಟಿ ಅವರ ನಡುವೆ ತೀವ್ರ ಜಟಾಪಟಿ ಮತ್ತು ವಾಕ್ಸಮರ ನಡೆಯಿತು.

Gana Movie: ಪ್ರಜ್ವಲ್‌ ದೇವರಾಜ್‌ ಅಭಿನಯದ ʼಗಣʼ ಚಿತ್ರ ಜ.31ಕ್ಕೆ ರಿಲೀಸ್‌

ಅಭಿಮಾನಿಗಳ ಆಕ್ರೋಶಕ್ಕೆ ಕಾರಣವೇನು?

‘ಕರಾವಳಿ’ ಸಿನಿಮಾದಲ್ಲಿ ನಟ ಪ್ರಜ್ವಲ್ ದೇವರಾಜ್ ಅವರು ತಮ್ಮ ಪಾತ್ರಕ್ಕೆ ಸ್ವತಃ ಡಬ್ ಮಾಡಿಲ್ಲ ಎನ್ನುವ ಕಾರಣಕ್ಕೆ ಅಭಿಮಾನಿಗಳು ತೀವ್ರ ಬೇಸರ ಹೊರಹಾಕಿದ್ದಾರೆ. ಚಿತ್ರದ ಹೀರೋ ಆಗಿದ್ದರೂ ಸಹ ಪ್ರಜ್ವಲ್ ದೇವರಾಜ್ ಅವರನ್ನು ಈ ಕಾರ್ಯಕ್ರಮಕ್ಕೆ ಚಿತ್ರತಂಡ ಆಹ್ವಾನಿಸಿಲ್ಲ ಎಂದು ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಈ ಕಾರ್ಯಕ್ರಮಕ್ಕೆ ಪ್ರಜ್ವಲ್‌ ದೇವರಾಜ್‌ ಬರದೇ ಇರುವುದು ಏಕೆ? ಅವರ ಪಾತ್ರಕ್ಕೆ ಅವರಿಂದ ಡಬ್‌ ಮಾಡಿಸಿಲ್ಲವೇಕೆ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಜುಲೈ 24ಕ್ಕೆ ‘ಕರಾವಳಿ’ ಭರ್ಜರಿ ರಿಲೀಸ್

ಈಗಾಗಲೇ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಪ್ರಕಟಗೊಂಡಿದೆ. ಜುಲೈ 24ರಂದು ‘ಕರಾವಳಿ’ ಚಿತ್ರವನ್ನು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಗೆ ತರಲು ಚಿತ್ರತಂಡ ರೆಡಿಯಾಗಿದೆ. ಆದರೆ ಅದಕ್ಕೂ ಮುನ್ನ ಈ ವಿವಾದ ಹುಟ್ಟಿಕೊಂಡಿರುವುದು ಕುತೂಹಲ ಕೆರಳಿಸಿದೆ.

ಕರಾವಳಿ ಸೊಗಡಿನ ಸಿನಿಮಾ

ಹೆಸರೇ ಸೂಚಿಸುವಂತೆ ಈ ಸಿನಿಮಾವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ ಹಾಗೂ ಸೊಗಡನ್ನು ಒಳಗೊಂಡಿದೆ. ಮುಖ್ಯವಾಗಿ ಮನುಷ್ಯ ಮತ್ತು ಪ್ರಾಣಿಯ ನಡುವೆ ನಡೆಯುವ ಸಂಘರ್ಷದ ಕಥಾಹಂದರವನ್ನು ಪಕ್ಕಾ ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಿರ್ದೇಶಕ ಗುರುದತ್ ಗಾಣಿಗ ಅವರು ತೆರೆಯ ಮೇಲೆ ತರುತ್ತಿದ್ದಾರೆ. 'ಗಾಣಿಗ ಫಿಲ್ಮ್ಸ್' ಹಾಗೂ 'ವಿಕೆ ಫಿಲ್ಮ್ಸ್' ಅಸೋಸಿಯೇಷನ್‌ನಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಪ್ರಜ್ವಲ್‌ ದೇವರಾಜ್‌ ವಾಯ್ಸ್‌ಗೆ ಕೊಕ್ ಅಭಿಮಾನಿಗಳ ಆಕ್ರೋಶ



ಚಿತ್ರದಲ್ಲಿ ಪ್ರಜ್ವಲ್ ದೇವರಾಜ್‌ಗೆ ಜೋಡಿಯಾಗಿ ಸಂಪದಾ ನಟಿಸಿದ್ದರೆ, ಉಳಿದಂತೆ ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಸೇರಿದಂತೆ ಒಂದು ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಅವರ ಸಂಗೀತ ನಿರ್ದೇಶನವಿದ್ದು, ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣವಿದೆ.