Dheeraj Kumar: ಹಿರಿಯ ನಟ, ನಿರ್ಮಾಪಕ ಧೀರಜ್ ಕುಮಾರ್ ನಿಧನ
ಬಾಲಿವುಡ್‌ನ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ಧೀರಜ್ ಕುಮಾರ್ ಅವರು ಉಸಿರಾಟದ ತೊಂದರೆ ಮತ್ತು ನ್ಯುಮೋನಿಯಾದಿಂದ ಮಂಗಳವಾರ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ತೀವ್ರ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಅಂಧೇರಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಮುಂಬೈ: ಬಾಲಿವುಡ್‌ನ (Bollywood) ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ಧೀರಜ್ ಕುಮಾರ್ (Dheeraj Kumar) ಅವರು ಉಸಿರಾಟದ ತೊಂದರೆ ಮತ್ತು ನ್ಯುಮೋನಿಯಾದಿಂದ ಮಂಗಳವಾರ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ತೀವ್ರ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಅಂಧೇರಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಕ್ಕೂ ಮುನ್ನ ಸೋಮವಾರ, ಧೀರಜ್ ಕುಮಾರ್ ಅವರ ಕುಟುಂಬ ಮತ್ತು ನಿರ್ಮಾಣ ತಂಡವು ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದನ್ನು ದೃಢಪಡಿಸಿ ಹೇಳಿಕೆಯನ್ನು ಬಿಡುಗಡೆ ಮಾಡಿತ್ತು.
ಹಿಂದಿ ಮಾತ್ರವಲ್ಲದೆ ಧೀರಜ್ ಕುಮಾರ್ ಪಂಜಾಬಿ ಚಲನಚಿತ್ರೋದ್ಯಮ ಮತ್ತು ಟಿವಿ ಜಗತ್ತಿನಲ್ಲಿಯೂ ಗುರುತಿಸಿಕೊಂಡಿದ್ದಾರೆ. 1965 ರಲ್ಲಿ ಪ್ರತಿಭಾ ಪ್ರದರ್ಶನದ ಮೂಲಕ ಉದ್ಯಮಕ್ಕೆ ಪ್ರವೇಶಿಸಿದರು. ಸುಭಾಷ್ ಘಾಯ್ ಮತ್ತು ರಾಜೇಶ್ ಖನ್ನಾ ಕೂಡ ಆ ಕಾರ್ಯಕ್ರಮದಲ್ಲಿ ಅವರೊಂದಿಗೆ ಇದ್ದರು. ರಾಜೇಶ್ ಖನ್ನಾ ಆ ಕಾರ್ಯಕ್ರಮದ ವಿಜೇತರಾದರು.
ಧೀರಜ್ ಕುಮಾರ್ ಹಿಟ್ ಧಾರಾವಾಹಿಗಳನ್ನು ನೀಡಿದ್ದಾರೆ. ಮಿಲೀ, ಕಹಾನ್ ಗಯೇ ವೋ ಲೋಗ್, ಮಾಯ್ಕಾ ಮತ್ತು ಕೋರ್ಟ್‌ರೂಮ್ ನಾಟಕ ಅದಾಲತ್‌ನಂತಹ ಜನಪ್ರಿಯ ಕಾರ್ಯಕ್ರಮಗಳನ್ನು ಜನರಿಗೆ ನೀಡಿದ್ದಾರೆ. 2000 ರ ದಶಕದ ಆರಂಭದಲ್ಲಿ ಭಾರತೀಯ ದೂರದರ್ಶನಕ್ಕೆ ಇವರ ಕೊಡುಗೆ ಅಪಾರ.
ಈ ಸುದ್ದಿಯನ್ನೂ ಓದಿ: B. Saroja Devi: ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ನಿಧನ; 200 ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಅಭಿನಯ ಸರಸ್ವತಿ
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ನಿನ್ನೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾದೇವಿ ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಮಹಾಕವಿ ಕಾಳಿದಾಸ, ಕಿತ್ತೂರು ಚೆನ್ನಮ್ಮ, ಅಣ್ಣಾ ತಮ್ಮ, ಭಕ್ತ ಕನಕದಾಸ, ಬಾಳೇ ಬಂಗಾರ, ನಾಗಕನ್ಯೆ, ಬೆಟ್ಟದ ಹೂವು, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ನಾಡೋಡಿ ಮನ್ನನ್, ಕರ್ಪೂರ ಕರಸಿ, ಪಾಂಡುರಂಗ ಮಹಾತ್ಯಂ, ತಿರುಮಣಂ ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದರು. ಕೊನೆಯದಾಗಿ 2020 ರಲ್ಲಿ ಪುನೀತ್ ರಾಜ್‌ಕುಮಾರ್ ಅಭಿನಯದ ನಟ ಸಾರ್ವಭೌಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.