#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Raju James Bond Movie: ʼರಾಜು ಜೇಮ್ಸ್‌ ಬಾಂಡ್ʼ ಚಿತ್ರದ ಪ್ರೀ ರಿಲೀಸ್ ಇವೆಂಟ್; ಗೃಹ ಸಚಿವ ಪರಮೇಶ್ವರ್, ಮೋಹಕ ತಾರೆ ರಮ್ಯಾ ಭಾಗಿ

ಗುರುನಂದನ್ ನಾಯಕರಾಗಿ ನಟಿಸಿರುವ ʼರಾಜು ಜೇಮ್ಸ್‌ ಬಾಂಡ್ʼ ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರ ಫೆ. 14ರಂದು ಬಿಡುಗಡೆಯಾಗಲಿದೆ.

ʼರಾಜು ಜೇಮ್ಸ್‌ ಬಾಂಡ್ʼ ಚಿತ್ರದ ಪ್ರೀ ರಿಲೀಸ್ ಇವೆಂಟ್

ʼರಾಜು ಜೇಮ್ಸ್‌ ಬಾಂಡ್ʼ ಚಿತ್ರದ ಪ್ರೀ ರಿಲೀಸ್ ಇವೆಂಟ್

Profile Siddalinga Swamy Feb 12, 2025 9:32 PM

ಬೆಂಗಳೂರು: ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ ʼಫಸ್ಟ್ ರ‍್ಯಾಂಕ್ ರಾಜುʼ ಖ್ಯಾತಿಯ ಗುರುನಂದನ್ (Gurunandan) ನಾಯಕರಾಗಿ ನಟಿಸಿರುವ ʼರಾಜು ಜೇಮ್ಸ್‌ ಬಾಂಡ್ʼ ಚಿತ್ರದ (Raju James Bond Movie) ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಹಾಗೂ ಮೋಹಕ ತಾರೆ ರಮ್ಯಾ (Ramya) ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ವೆಂಕಟೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya), ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ನಾಯಕಿ ತಪಸ್ವಿನಿ ಶರ್ಮ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ‌ ಶುಭ ಹಾರೈಸಿದರು.

6

ʼರಾಜು ಜೇಮ್ಸ್‌ ಬಾಂಡ್ʼ ಚಿತ್ರದ ತುಣುಕು ಹಾಗೂ ಹಾಡುಗಳನ್ನು ನೋಡಿದರೆ, ಚಿತ್ರ ಯಶಸ್ವಿಯಾಗುವ ಎಲ್ಲ ಲಕ್ಷಣಗಳು ಇದೆ. ಚಿತ್ರ ಯಶಸ್ಸು ಕಾಣಲಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಶುಭ ಕೋರಿದರು.

ಟ್ರೈಲರ್‌ ಹಾಗೂ ಹಾಡುಗಳು ತುಂಬಾ ಚೆನ್ನಾಗಿದೆ. ಛಾಯಾಗ್ರಹಣವಂತೂ ಸೂಪರ್. ಅಷ್ಟೇ ಚೆನ್ನಾಗಿ ನಾಯಕ ಹಾಗೂ ನಾಯಕಿ ಅಭಿನಯಿಸಿದ್ದಾರೆ. ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿರುವ ಈ ಚಿತ್ರ ಭರ್ಜರಿ ಯಶಸ್ಸು ‌ಕಾಣಲಿ ಎಂದು ನಟಿ ರಮ್ಯಾ ಹಾರೈಸಿದರು.

ಈಗ ನಮಗೆ ಹೆರಿಗೆ ನೋವು ಶುರುವಾಗಿದೆ. ಫೆ. 14ರಂದು ಹೆರಿಗೆ ಆಗಲಿದೆ. ಒಂದೊಳ್ಳೆ ಸಿನಿಮಾ ಮಾಡಿರುವ ಖುಷಿಯಿದೆ.‌ ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ಮನವಿ ಮಾಡಿದರು.

ನಾನು ಸಿನಿಮಾ ಬಗ್ಗೆ ಈಗಾಗಲೇ ಎಲ್ಲ ಹೇಳಿ ಆಗಿದೆ. ಇನ್ನು ನಮ್ಮ ಚಿತ್ರವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಅವರ ಅಭಿಪ್ರಾಯಕ್ಕೆ ಕಾಯುತ್ತಿದ್ದೇವೆ ಎಂದರು ನಿರ್ದೇಶಕ ದೀಪಕ್ ಮಧುವನಹಳ್ಳಿ. ‌

ನಾಯಕ ಗುರುನಂದನ್ ಹಾಗೂ ನಾಯಕಿ ಮೃದುಲ ಸಹ ಶುಕ್ರವಾರ ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು. ನಾನು ಈ ಚಿತ್ರದಲ್ಲಿ ಟಿ.ಆರ್.ಪಿ. ಎಂಬ ಖಾಸಗಿ ವಾಹಿನಿಯ ರಿಪೋರ್ಟರ್ ಆಗಿ ಕಾಣಿಸಿಕೊಂಡಿದ್ದೇನೆ ಎಂದು ನಟ ಚಿಕ್ಕಣ್ಣ ಹೇಳಿದರು‌. ನಟ ತಬಲ ನಾಣಿ, ಛಾಯಾಗ್ರಾಹಕ ಮನೋಹರ್ ಜೋಶಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಗುರುನಂದನ್, ಮೃದುಲಾ ಜತೆಗೆ ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ನಟಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Valentine’s Season Kurta Fashion 2025: ವ್ಯಾಲೆಂಟೈನ್ಸ್ ವೀಕ್ ಸೀಸನ್‌ನಲ್ಲಿ ಟ್ರೆಂಡಿಯಾದ ಕುರ್ತಾಗಳಿವು

ಮನೋಹರ್ ಜೋಶಿ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಅಮಿತ್ ಚವಳ್ಕರ್ ಅವರ ಸಂಕಲನವಿರುವ ʼರಾಜು ಜೇಮ್ಸ್ ಬಾಂಡ್ʼ ಚಿತ್ರಕ್ಕೆ ಜಗದೀಶ್ ನಡನಹಳ್ಳಿ ಸಂಭಾಷಣೆ ಬರೆದಿದ್ದಾರೆ.