ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Ramayana Twitter review: ‘ರಾಮಾಯಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ; ಯಶ್ ನಟನೆಗೆ ಫಿದಾ ಆದ್ರು ಫ್ಯಾನ್ಸ್‌

Ramayana Twitter review: ಬಹುನಿರೀಕ್ಷಿತ ನಟ ರಣಬೀರ್ ಕಪೂರ್ (Ranbir Kapoor) ಅಭಿನಯದ ‘ರಾಮಾಯಣ’ ಸಿನಿಮಾ (Ramayana Movie) ಇಂದು (ನವೆಂಬರ್ 5) ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಾಯಿ ಪಲ್ಲವಿ ಮತ್ತು ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಅದ್ಧೂರಿ ಚಿತ್ರಕ್ಕೆ ಮೊದಲ ದಿನವೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಿತೇಶ್ ತಿವಾರಿ (Nitesh Tiwari) ನಿರ್ದೇಶನದ ಈ ಚಿತ್ರವನ್ನು ನಮಿತ್ ಮಲ್ಹೋತ್ರಾ ನಿರ್ಮಿಸಿದ್ದಾರೆ. ದೆಹಲಿ, ಬೆಂಗಳೂರು, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಬೆಳಗ್ಗೆ 6.30ರಿಂದಲೇ ಮೊದಲ ಪ್ರದರ್ಶನಗಳು ಆರಂಭವಾಗಿವೆ. ಮೊದಲ ದಿನದ ಮೊದಲ ಪ್ರದರ್ಶನ ವೀಕ್ಷಿಸಿದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

‘ರಾಮಾಯಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ

ರಾಮಾಯಣ ಸಿನಿಮಾ -

Yashaswi Devadiga
Yashaswi Devadiga Nov 5, 2026 10:16 AM

ಬಹುನಿರೀಕ್ಷಿತ ನಟ ರಣಬೀರ್ ಕಪೂರ್ (Ranbir Kapoor) ಅಭಿನಯದ ‘ರಾಮಾಯಣ’ ಸಿನಿಮಾ (Ramayana Movie) ಇಂದು (ನವೆಂಬರ್ 5) ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಾಯಿ ಪಲ್ಲವಿ ಮತ್ತು ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಅದ್ಧೂರಿ ಚಿತ್ರಕ್ಕೆ ಮೊದಲ ದಿನವೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಿತೇಶ್ ತಿವಾರಿ (Nitesh Tiwari) ನಿರ್ದೇಶನದ ಈ ಚಿತ್ರವನ್ನು ನಮಿತ್ ಮಲ್ಹೋತ್ರಾ ನಿರ್ಮಿಸಿದ್ದಾರೆ. ದೆಹಲಿ, ಬೆಂಗಳೂರು, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಬೆಳಗ್ಗೆ 6.30ರಿಂದಲೇ ಮೊದಲ ಪ್ರದರ್ಶನಗಳು ಆರಂಭವಾಗಿವೆ. ಮೊದಲ ದಿನದ ಮೊದಲ ಪ್ರದರ್ಶನ ವೀಕ್ಷಿಸಿದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಯಶ್ ಅಭಿನಯಕ್ಕೆ ಪ್ರೇಕ್ಷಕರ ಮೆಚ್ಚುಗೆ

ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಯಶ್ ಅವರ ಅಭಿನಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಬ್ಬ ಪ್ರೇಕ್ಷಕ ನಾಲ್ಕು ಸ್ಟಾರ್ ನೀಡಿ, ಸಿನಿಮಾ ಅದ್ಭುತ ದೃಶ್ಯಗಳ ಹಬ್ಬವಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Keerthy Suresh: ಅಂತರ್ಧರ್ಮೀಯ ವಿವಾಹ; ಕೀರ್ತಿ ಸುರೇಶ್ ಮನದ ಮಾತು

ವಿಶೇಷವಾಗಿ ಯಶ್ ಅವರ ರಾವಣನ ಪಾತ್ರ, ಅದ್ಭುತ ಸ್ಕ್ರೀನ್ ಪ್ರೆಸೆನ್ಸ್ ಮತ್ತು ದೃಶ್ಯ ವೈಭವ ಪ್ರೇಕ್ಷಕರ ಗಮನ ಸೆಳೆದಿದೆ. ಚಿತ್ರದ ಮೊದಲ 30 ನಿಮಿಷಗಳಲ್ಲಿ ರಾವಣನ ಪಾತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಈ ಭಾಗ ಅತ್ಯುತ್ತಮವಾಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಯಶ್ ಅವರ ಗಂಭೀರ ನಟನೆ ಮತ್ತು ಪರದೆಯ ಮೇಲಿನ ಪ್ರಭಾವಿ ವ್ಯಕ್ತಿತ್ವಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.



ರಣಬೀರ್ ಮತ್ತು ಸಾಯಿ ಪಲ್ಲವಿ ಅಭಿನಯಕ್ಕೂ ಮೆಚ್ಚುಗೆ

ಶ್ರೀರಾಮನ ಪಾತ್ರದಲ್ಲಿ ನಟಿಸಿರುವ ರಣಬೀರ್ ಕಪೂರ್ ಹಾಗೂ ಸೀತೆಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಾಯಿ ಪಲ್ಲವಿ ಅವರ ಅಭಿನಯಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಬ್ಬರೂ ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ ಎಂದು ಹಲವು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಕ್ಷ್ಮಣನ ಪಾತ್ರದಲ್ಲಿ ನಟಿಸಿರುವ ರವಿ ದುಬೆ ಅವರ ಅಭಿನಯಕ್ಕೂ ಪ್ರಶಂಸೆ ವ್ಯಕ್ತವಾಗಿದೆ.

ಆದರೆ ರಾಮ ಮತ್ತು ಸೀತೆಯ ಪಾತ್ರಗಳಿಗೆ ಸಂಬಂಧಿಸಿದ ಕೆಲವು ಭಾವನಾತ್ಮಕ ದೃಶ್ಯಗಳು ನಿರೀಕ್ಷಿತ ಮಟ್ಟದಲ್ಲಿ ಮೂಡಿಬಂದಿಲ್ಲ ಎಂಬ ಅಭಿಪ್ರಾಯವೂ ಕೆಲವರಿಂದ ವ್ಯಕ್ತವಾಗಿದೆ.

‘ರಾಮಾಯಣ’ ಚಿತ್ರದ ವಿಎಫ್‌ಎಕ್ಸ್‌ಗೆ ಭಾರಿ ಮೆಚ್ಚುಗೆ

ಚಿತ್ರದ ದೃಶ್ಯ ವೈಭವ, ಗ್ರಾಫಿಕ್ಸ್, ವಿಎಫ್‌ಎಕ್ಸ್, ಅದ್ಧೂರಿ ಸೆಟ್‌ಗಳು ಮತ್ತು 3D ತಂತ್ರಜ್ಞಾನ ಪ್ರೇಕ್ಷಕರ ಪ್ರಮುಖ ಆಕರ್ಷಣೆಯಾಗಿವೆ.

ಕಾಡಿನ ದೃಶ್ಯಗಳು, ಯುದ್ಧದ ಸನ್ನಿವೇಶಗಳು ಮತ್ತು ಅದ್ಧೂರಿ ದೃಶ್ಯಗಳನ್ನು ದೊಡ್ಡ ಪರದೆಯಲ್ಲಿ ನೋಡುವ ಅನುಭವ ಅದ್ಭುತವಾಗಿದೆ ಎಂದು ಪ್ರೇಕ್ಷಕರು ಹೇಳಿದ್ದಾರೆ.

ವಿಶೇಷವಾಗಿ ಜಟಾಯು ಮತ್ತು ರಾವಣನ ನಡುವಿನ ಯುದ್ಧದ ದೃಶ್ಯ ಹಾಗೂ ಪುಷ್ಪಕ ವಿಮಾನದ ಬಳಕೆಯ ಸನ್ನಿವೇಶ ಪ್ರೇಕ್ಷಕರ ಗಮನ ಸೆಳೆದಿದೆ. ಈ ದೃಶ್ಯಗಳನ್ನು ಚಿತ್ರತಂಡ ಅದ್ಭುತವಾಗಿ ಮೂಡಿಸಿದೆ ಎಂದು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆಲವರಿಗೆ ಹಿನ್ನೆಲೆ ಸಂಗೀತದ ಬಗ್ಗೆ ಅಸಮಾಧಾನ

ಚಿತ್ರಕ್ಕೆ ಎಲ್ಲರಿಂದಲೂ ಒಂದೇ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಕೆಲವರು ಚಿತ್ರದ ಹಿನ್ನೆಲೆ ಸಂಗೀತ ಮತ್ತು ಆ್ಯಕ್ಷನ್ ದೃಶ್ಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತೆಲುಗು ಭಾಷೆಯಲ್ಲಿ ಸಿನಿಮಾ ವೀಕ್ಷಿಸಿದ ಒಬ್ಬ ಪ್ರೇಕ್ಷಕ ರಣಬೀರ್ ಮತ್ತು ಯಶ್ ಅವರ ಅಭಿನಯ ಉತ್ತಮವಾಗಿದೆ. ತೆಲುಗು ಡಬ್ಬಿಂಗ್ ಕೂಡ ಚೆನ್ನಾಗಿದೆ. ಆದರೆ ಚಿತ್ರದ ಕಥೆಯಲ್ಲಿನ ಭಾವನಾತ್ಮಕ ಅಂಶಗಳು ಕೆಲವು ಭಾಗಗಳಲ್ಲಿ ಮಾತ್ರ ಪರಿಣಾಮಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕೆಲವು ಆ್ಯಕ್ಷನ್ ದೃಶ್ಯಗಳು ನಿರೀಕ್ಷಿತ ಮಟ್ಟದಲ್ಲಿ ರೋಚಕವಾಗಿಲ್ಲ. ಹಿನ್ನೆಲೆ ಸಂಗೀತವೂ ಹೆಚ್ಚು ಪ್ರಭಾವ ಬೀರಿಲ್ಲ. ಇನ್ನಷ್ಟು ನೈಜ ಸೆಟ್‌ಗಳನ್ನು ಬಳಸಿದ್ದರೆ ಚೆನ್ನಾಗಿರುತ್ತಿತ್ತು ಎಂದು ಅವರು ಹೇಳಿದ್ದಾರೆ.



ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ

ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್, ಡಿಎನ್‌ಇಜಿ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ.ಈ ಸಿನಿಮಾ ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಐಮ್ಯಾಕ್ಸ್ ಚಿತ್ರಮಂದಿರಗಳಲ್ಲಿಯೂ ಸಿನಿಮಾ ವೀಕ್ಷಿಸುವ ಅವಕಾಶವಿದೆ.

ಇದನ್ನೂ ಓದಿ: Bigg Boss Kannada 13: ಕಿರಣ್ ಶಾಸ್ತ್ರಿ ಕೀಳು ಮಟ್ಟದ ಆಟ; ವೀಕ್ಷಕರ ಆಕ್ರೋಶ

ಒಟ್ಟಿನಲ್ಲಿ, ಮೊದಲ ದಿನದ ಪ್ರದರ್ಶನಗಳ ಬಳಿಕ ಯಶ್ ಅವರ ರಾವಣನ ಪಾತ್ರ, ರಣಬೀರ್ ಅವರ ರಾಮನ ಪಾತ್ರ ಮತ್ತು ಚಿತ್ರದ ಅದ್ಧೂರಿ ವಿಎಫ್‌ಎಕ್ಸ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿದೆ.