Ramayana: 'ರಾಮಾಯಣ'ದಲ್ಲಿ ನಟಿಸಲು ನೂರಾರು ಕೋಟಿ ರೂ. ಸಂಭಾವನೆ ಪಡೆದ ಯಶ್-ರಣಬೀರ್ ಕಪೂರ್
ʼರಾಮಾಯಣʼ ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳಂತೂ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಈಗಾಗಲೇ ಸಿನಿಮಾದಲ್ಲಿ ಯಾರು ಯಾರು ಯಾವ್ಯಾವ ಪಾತ್ರ ಮಾಡುತ್ತಿದ್ದಾರೆ ಎನ್ನುವ ವಿಚಾರ ರಿವೀಲ್ ಆಗಿದೆ. ಇದರ ಬೆನ್ನಲ್ಲೇ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ರಣಬೀರ್ ಕಪೂರ್, ಯಶ್ ಹಾಗೂ ಸಾಯಿ ಪಲ್ಲವಿ ದೊಡ್ಡ ಮೊತ್ತದಲ್ಲೇ ಸಂಭಾವಣೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

Ramayana

ಮುಂಬೈ: ಬಾಲಿವುಡ್‌ನ ಬಹುನೀರಿಕ್ಷಿತ ʼರಾಮಾಯಣʼ (Ramayana) ಸಿನಿಮಾ ಬಹಳಷ್ಟು ಸುದ್ದಿಯಲ್ಲಿದೆ. ನಟ ರಣಬೀರ್ ಕಪೂರ್ (Ranbir Kapoor) ರಾಮನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ರಾಕಿಂಗ್ ಸ್ಟಾರ್ ಯಶ್ (Yash) ರಾವಣನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ಅಭಿನಯಿಸುತ್ತಿದ್ದಾರೆ. ಈಗಾಗಲೇ ಬಹು ನಿರೀಕ್ಷಿತ ʼರಾಮಾಯಣʼ ಸಿನಿಮಾದ ಗ್ಲಿಂಪ್ಸ್ ಬಿಡುಗಡೆಯಾಗಿದ್ದು ಭರ್ಜರಿ ಪಾಸಿಟಿವ್ ರೆಸ್ಪಾನ್ಸ್ ಪಡೆಯುತ್ತಿದೆ. ಈ ನಡುವೆ ʼರಾಮಾಯಣʼ ಸಿನಿಮಾದ ಕಲಾವಿದರ ಸಂಭಾವನೆ ಕುರಿತು ಕುತೂಹಲಕಾರಿ ವಿಚಾರವೊಂದು ಹೊರ ಬಿದ್ದಿದೆ.
ʼರಾಮಾಯಣʼ ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳಂತೂ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಈಗಾಗಲೇ ಸಿನಿಮಾದಲ್ಲಿ ಯಾರು ಯಾರು ಯಾವ್ಯಾವ ಪಾತ್ರ ಮಾಡುತ್ತಿದ್ದಾರೆ ಎನ್ನುವ ವಿಚಾರ ಇತ್ತೀಚೇಗಷ್ಟೇ ರಿವೀಲ್ ಮಾಡಲಾಗಿದೆ. ಇದರ ಬೆನ್ನಲ್ಲೇ ರಣಬೀರ್ ಕಪೂರ್, ನಟ ಯಶ್ ಹಾಗೂ ಸಾಯಿ ಪಲ್ಲವಿ ದೊಡ್ಡ ಮೊತ್ತದಲ್ಲೇ ಸಂಭಾವಣೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ:Jockey 42 Movie: ನಟ ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಗುಡ್‌ನ್ಯೂಸ್ ಕೊಟ್ಟ ನಿರ್ದೇಶಕ ಗುರುತೇಜ್ ಶೆಟ್ಟಿ
ರಾಮನ ಪಾತ್ರ ನಿಭಾಯಿಸುತ್ತಿರುವ ರಣಬೀರ್ 150 ಕೋಟಿ ರೂ. ಸಂಭಾವನೆಯನ್ನು ಪಡೆಯುತ್ತಿದ್ದಾರೆ ಎನ್ನಲಾಗಿದೆ. ಇದು ಅವರ ಸಿನಿಮಾ ಬದುಕಿನಲ್ಲೇ ಅತಿ ಹೆಚ್ಚಿನ ಸಂಭಾವನೆಯಾಗಿದೆ. 'ರಾಮಾಯಣ' ತಂಡದಲ್ಲಿಯೇ ಅವರು ಅಗ್ರ ಸ್ಥಾನ ಪಡೆದಿದ್ದಾರೆ. ದಕ್ಷಿಣ ಚಿತ್ರರಂಗದ ಖ್ಯಾತ ನಟಿ ಸಾಯಿ ಪಲ್ಲವಿ ʼರಾಮಾಯಣʼದಲ್ಲಿ ಸೀತೆಯ ಪಾತ್ರ ನಿರ್ವಹಿಸುತ್ತಿದ್ದಾರೆ. ಅವರು ಪ್ರತಿ ಭಾಗಕ್ಕೆ 6 ಕೋಟಿ ರೂ.ಯಂತೆ ಒಟ್ಟು 12 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ 'ರಾಮಾಯಣ'ದ ಮತ್ತೊಂದು ಮಹತ್ವದ ಪಾತ್ರ ಎಂದರೆ ರಾವಣ. ಈ ಪಾತ್ರವನ್ನು ನಟ ಯಶ್ ನಿಭಾಯಿಸಲಿದ್ದು ಅವರು ಸುಮಾರು 100 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.
ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿರುವ ʼರಾಮಾಯಣʼ ಸಿನಿಮಾಕ್ಕೆ ನಿತೇಶ್ ತಿವಾರಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸುಮಾರು 800 ಕೋಟಿ ರೂ. ಬಜೆಟ್‌ನ ಈ ಚಿತ್ರಕ್ಕೆ ಹಾಲಿವುಡ್ನ ಪ್ರತಿಷ್ಠಿತ ಸ್ಟುಡಿಯೋಗಳು ವಿಎಫ್ಎಕ್ಸ್ ತಂತ್ರಜ್ಞಾನ ಬಳಸಲಿವೆ. ಚಿತ್ರವು 2 ಭಾಗಗಳಲ್ಲಿ ಬಿಡುಗಡೆಯಾಗಲಿದೆ. 2026ರ ದೀಪಾವಳಿಗೆ ಮೊದಲ ಭಾಗ ಬಿಡುಗಡೆ ಆಗಲಿದೆ. ಹಾಗೆಯೇ 2027ರ ದೀಪಾವಳಿಗೆ ಸಿನಿಮಾದ 2ನೇ ಭಾಗ ಬಿಡುಗಡೆ ಆಗಲಿದೆ.