2026ರಲ್ಲಿ ಸ್ಯಾಂಡಲ್ವುಡ್ನಲ್ಲಿ ಭರ್ಜರಿ ಬ್ಲಾಕ್ ಬಸ್ಟರ್ ಹಿಟ್ ಎನಿಸಿಕೊಂಡಿರುವ ‘ಪ್ರೇಮದ ಊರಲಿ’ ಸಿನಿಮಾ ಇದೀಗ ಸದ್ದಿಲ್ಲದೇ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಮಾಯಿ ಮಾಡಿರುವ ಈ ಚಿತ್ರ, ಈಗಾಗಲೇ ರಾಜ್ಯಾದ್ಯಂತ ಯಶಸ್ವಿಯಾಗಿ 50 ದಿನಗಳ ಪ್ರದರ್ಶನವನ್ನು ಪೂರೈಸಿದೆ. ಅಷ್ಟೇ ಅಲ್ಲದೆ, ಚಿತ್ರದ ಒಟ್ಟಾರೆ ಗಳಿಕೆ 160 ಕೋಟಿ ರೂಪಾಯಿಗಳ ಗಡಿ ದಾಟಿದೆ ಎಂಬ ಮಾಹಿತಿ ಲಭ್ಯವಾಗಿದ್ದು, 2026ರ ಅತಿ ದೊಡ್ಡ ಯಶಸ್ವಿ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ.
ಚಿತ್ರಮಂದಿರಗಳಲ್ಲಿ ಈಗಲೂ ಉತ್ತಮ ಪ್ರದರ್ಶನ
ಸಾಮಾನ್ಯವಾಗಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡ ಸಿನಿಮಾಗಳು ಒಟಿಟಿಗೆ ಬರುವಾಗ ಚಿತ್ರತಂಡದಿಂದ ದೊಡ್ಡ ಮಟ್ಟದ ಪ್ರಚಾರ ಅಥವಾ ಅನೌನ್ಸ್ಮೆಂಟ್ ಮಾಡಲಾಗುತ್ತದೆ. ಆದರೆ, ಮನೋಜ್ ಕುಮಾರ್ ನಿರ್ದೇಶನದ ‘ಪ್ರೇಮದ ಊರಲಿ’ ಚಿತ್ರವು ಈಗಲೂ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಹೀಗಾಗಿ, ಥಿಯೇಟರ್ ಕಲೆಕ್ಷನ್ಗೆ ಯಾವುದೇ ರೀತಿಯ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಚಿತ್ರತಂಡ ಯಾವುದೇ ಪ್ರಚಾರವಿಲ್ಲದೇ, ಸಿನಿಮಾವನ್ನು ಸದ್ದಿಲ್ಲದೇ ಡಿಜಿಟಲ್ ವೇದಿಕೆಗೆ ತಂದಿರುವ ಸಾಧ್ಯತೆಯಿದೆ.
Premada Oorali movie: ಗಂಟೆಗೆ 15 ಸಾವಿರ ಟಿಕೆಟ್ ಮಾರಾಟ; ‘ಪ್ರೇಮದ ಊರಲಿ’ ಸಿನಿಮಾ ಭರ್ಜರಿ ಗಳಿಕೆ
ಐದು ಭಾಷೆಗಳಲ್ಲಿ ಸ್ಟ್ರೀಮಿಂಗ್
ಸದ್ಯ ಈ ಬ್ಲಾಕ್ ಬಸ್ಟರ್ ಸಿನಿಮಾ ಜನಪ್ರಿಯ ಒಟಿಟಿ ಪ್ಲಾಟ್ಫಾರ್ಮ್ ‘ಅಮೇಜಾನ್ ಪ್ರೈಮ್ ವಿಡಿಯೋ’ದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಕೇವಲ ಕನ್ನಡ ಮಾತ್ರವಲ್ಲದೆ, ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ತಲುಪುವ ನಿಟ್ಟಿನಲ್ಲಿ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲೂ ಈ ಚಿತ್ರ ವೀಕ್ಷಣೆಗೆ ಲಭ್ಯವಿದೆ. ಚಿತ್ರಮಂದಿರಗಳಲ್ಲಿ ‘ಪ್ರೇಮದ ಊರಲಿ’ ಸಿನಿಮಾವನ್ನು ಮಿಸ್ ಮಾಡಿಕೊಂಡಿದ್ದ ಸಿನಿಪ್ರಿಯರಿಗೆ ಈಗ ಮನೆಯಲ್ಲೇ ಕುಳಿತು ನೋಡುವ ಸುವರ್ಣಾವಕಾಶ ಸಿಕ್ಕಂತಾಗಿದೆ. ಅಷ್ಟೇ ಅಲ್ಲದೆ, ಈಗಾಗಲೇ ಥಿಯೇಟರ್ನಲ್ಲಿ ಸಿನಿಮಾ ನೋಡಿ ಮೆಚ್ಚಿಕೊಂಡವರು ಕೂಡ ಮತ್ತೊಮ್ಮೆ ಕುಟುಂಬದವರ ಜೊತೆ ಕುಳಿತು ಈ ಚಿತ್ರವನ್ನು ಎಂಜಾಯ್ ಮಾಡಬಹುದಾಗಿದೆ.
ಒಟಿಟಿಯಲ್ಲಿ ಸಿಗಲಿದೆಯಾ ಉತ್ತಮ ರೆಸ್ಪಾನ್ಸ್?
ಮನೋಜ್ ಕುಮಾರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು, ಶ್ರೀರಾಮ್, ರಮಿಕಾ ಶಿವು, ತಪಸ್ವಿನಿ ಪೂಣಚ್ಚ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕಥೆ ಮತ್ತು ಕಲಾವಿದರ ಮನೋಜ್ಞ ಅಭಿನಯದಿಂದ ಥಿಯೇಟರ್ನಲ್ಲಿ ಮೋಡಿ ಮಾಡಿದ್ದ ಈ ಚಿತ್ರ, ಇದೀಗ ಒಟಿಟಿಯಲ್ಲೂ ಭರ್ಜರಿ ವೀಕ್ಷಣೆ ಪಡೆಯುವ ನಿರೀಕ್ಷೆಯಿದೆ.