ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Photos: ಡಾಕ್ಟರ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನಟ ನಿರಂಜನ್‌ ಸುಧೀಂದ್ರ; ಉಪೇಂದ್ರ ಕುಟುಂಬದಲ್ಲಿ ಮದುವೆ ಸಂಭ್ರಮ

`ರಿಯಲ್ ಸ್ಟಾರ್' ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಉಪೇಂದ್ರ ಅವರ ಅಣ್ಣ ಸುಧೀಂದ್ರ ಅವರ ಪುತ್ರ, ನಟ ನಿರಂಜನ್ ಸುಧೀಂದ್ರ ಅವರು ಮೇ 25ರ ಸೋಮವಾರದ ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಮೊದಲ ಹೆಜ್ಜೆ ಇಟ್ಟಿದ್ದಾರೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ಡಾ. ಸಂಜನಾ ಬಿ. ರಾಜ್ ಅವರೊಂದಿಗೆ ನಿರಂಜನ್ ಸುಧೀಂದ್ರ ಅವರ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಂತ ಅದ್ಧೂರಿಯಾಗಿ ನೆರವೇರಿದೆ. ಕುಟುಂಬಸ್ಥರು ಹಾಗೂ ಅತ್ಯಾಪ್ತರ ಸಮ್ಮುಖದಲ್ಲಿ ನಡೆದ ಈ ಸುಂದರ ಸಮಾರಂಭದಲ್ಲಿ ನಿರಂಜನ್ ಮತ್ತು ಸಂಜನಾ ಪರಸ್ಪರ ಉಂಗುರ ಬದಲಿಸಿಕೊಂಡರು. ಸದ್ಯದಲ್ಲೇ ಈ ಜೋಡಿಯ ವಿವಾಹ ಮಹೋತ್ಸವ ಜರುಗಲಿದ್ದು, ನಿಶ್ಚಿತಾರ್ಥದ ಆಕರ್ಷಕ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.

Photos: ಅದ್ದೂರಿಯಾಗಿ ನಡೆದ ಉಪೇಂದ್ರ ಅಣ್ಣನ ಮಗ ನಿರಂಜನ್ ನಿಶ್ಚಿತಾರ್ಥ

-

Avinash GR
Avinash GR May 26, 2026 12:13 PM