Rishab Shetty: ಐತಿಹಾಸಿಕ ಮೈಲಿಗಲ್ಲು; ದೀರ್ಘಾವಧಿ ಪ್ರಧಾನಿಯಾಗಿ ದಾಖಲೆ ಬರೆದ ಮೋದಿಗೆ ರಿಷಬ್ ಅಭಿನಂದನೆ
Rishab Shetty : ಸತತ ಮೂರು ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಗೆಲುವಿನ ದಡ ಸೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು 2014 ರಿಂದಲೂ ದೇಶದ ಪ್ರಧಾನಿಯಾಗಿದ್ದಾರೆ. ಈ ಮೂಲಕ ದೇಶದ ದೀರ್ಘಾವಧಿ ಚುನಾಯಿತ ಪ್ರಧಾನಿ ಎಂಬ ನೆಹರು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ರಿಷಬ್ ಶೆಟ್ಟಿ -
ಭಾರತದ ಪ್ರಧಾನಿಯಾಗಿ ದೀರ್ಘ ಅವಧಿ ಸೇವೆ ಸಲ್ಲಿಸಿರುವ ನರೇಂದ್ರ ಮೋದಿ (Narendra Modi) ಅವರಿಗೆ ನಟ ರಿಷಬ್ ಶೆಟ್ಟಿ (Rishab Shetty) ಅಭಿನಂದನೆ ಸಲ್ಲಿಸಿದ್ದಾರೆ. ಮೋದಿ ಅವರು ಪ್ರಧಾನಿಯಾಗಿ ಸುದೀರ್ಘ 4,399 ದಿನಗಳನ್ನು ಪೂರೈಸುವ ಮೂಲಕ, ಭಾರತದ ಮೊದಲ ಚುನಾಯಿತ ಪ್ರಧಾನಿಯಾಗಿದ್ದ (PM) ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಮುರಿದಿದ್ದಾರೆ.
ರಿಷಬ್ ಟ್ವೀಟ್
ರಿಷಬ್ ಟ್ವೀಟ್‌ನಲ್ಲಿ, ಐತಿಹಾಸಿಕ ನಾಯಕನಿಗೆ ಇದೊಂದು ಐತಿಹಾಸಿಕ ಮೈಲಿಗಲ್ಲು!ಭಾರತದ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಗೌರವಾನ್ವಿತ ಪ್ರಧಾನಿ ಮೋದಿ ಜಿ ಅವರಿಗೆ ಅಭಿನಂದನೆಗಳು. ವಿಕಸಿತ್ ಗಾಗಿ 12 ವರ್ಷಗಳ ಅವಿಶ್ರಾಂತ ಸೇವೆ, ದೂರದೃಷ್ಟಿ ಮತ್ತು ಸಮರ್ಪಣೆ. ನೀವು ರಾಷ್ಟ್ರವನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುವುದನ್ನು ಮುಂದುವರಿಸಲಿ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Kiccha Sudeep: ಮುಂದಿನ ಯೋಜನೆಗಳ ಬಗ್ಗೆ ಕಿಚ್ಚ ಸುದೀಪ್ ಮಹತ್ವದ ಘೋಷಣೆ; ಫ್ಯಾನ್ಸ್ ಖುಷ್!
ಟ್ರಂಪ್ ಪೋಸ್ಟ್
ಇನ್ನು ಸೋಷಿಯಲ್ ಮೀಡಿಯಾ ಟ್ರೂತ್‌ನಲ್ಲಿ ಟ್ರಂಪ್ ಪೋಸ್ಟ್ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ನನ್ನ ಆತ್ಮೀಯ ಸ್ನೇಹಿತ. ಮಹಾನ್ ನಾಯಕ ಎಂದು ಬಣ್ಣಿಸಿದ್ದಾರೆ. ‘ಭಾರತದ ಪ್ರಧಾನಿಯಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಅವರು ಒಬ್ಬ ಮಹಾನ್ ವ್ಯಕ್ತಿ ಎಂದು ಟ್ರಂಪ್ ಪೋಸ್ಟ್ ಹಂಚಿಕೊಂಡಿದ್ದಾರೆ.
ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಆಗಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ರಾಜ್ಯದ ಹಲವೆಡೆ ವಿಶೇಷ ಸಲ್ಲಿಸಿ, ಸಂಭ್ರಮಾಚರಿಸಿದ್ದಾರೆ.
ರಿಷಬ್ ಶೆಟ್ಟಿ
A historic milestone for a historic leader!
— Rishab Shetty (@shetty_rishab) June 10, 2026
Huge congratulations to Hon’ble PM Shri @narendramodi ji on becoming India’s longest-serving elected Prime Minister for consecutive terms. 12 years of tireless service, vision, and dedication to a #ViksitBharat. May you continue to… pic.twitter.com/nTIep5Qs9v
ಸತತ ಮೂರು ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಗೆಲುವಿನ ದಡ ಸೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು 2014 ರಿಂದಲೂ ದೇಶದ ಪ್ರಧಾನಿಯಾಗಿದ್ದಾರೆ. ಈ ಮೂಲಕ ದೇಶದ ದೀರ್ಘಾವಧಿ ಚುನಾಯಿತ ಪ್ರಧಾನಿ ಎಂಬ ನೆಹರು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇದನ್ನೂ ಓದಿ: Amruthadhaare Serial: ಕೇಡಿ ಜೈದೇವ್ ಮುಖವಾಡ ಕಳಚಿ ಬೀಳೋ ಹೊತ್ತು ಬಂದಾಯ್ತು!
ಈ ದಾಖಲೆಯ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, "ಜನತೆಯೇ ನನಗೆ ದೇವರು. ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು. ಜನರು ನಮ್ಮಲ್ಲಿ ಇಟ್ಟುಕೊಂಡಿರುವ ನಿರೀಕ್ಷೆಗಳನ್ನು ಖಂಡಿತವಾಗಿಯೂ ಈಡೇರಿಸುತ್ತೇವೆ" ಎಂದು ಹೇಳಿದರು.