ʻರಾಕಿಂಗ್ ಸ್ಟಾರ್ʼ ಯಶ್ ಅವರು ಸದ್ಯ ಸಿಕ್ಕಾಪಟ್ಟೆ ಬ್ಯುಸಿ ಇದ್ದಾರೆ. ಅವರ ಮುಂದಿನ ಸಿನಿಮಾ ಟಾಕ್ಸಿಕ್ ಯಾವಾಗ ರಿಲೀಸ್ ಆಗಬೋದು ಎಂಬ ಬಗ್ಗೆ ಫ್ಯಾನ್ಸ್ ತಲೆ ಕೆಡಿಸಿಕೊಂಡಿದ್ದಾರೆ. ಯಶ್ ಕೂಡ ಅದರ ಕೆಲಸಗಳಲ್ಲಿ ಮಗ್ನರಾಗಿದ್ದಾರೆ. ಜೊತೆಗೆ ಅವರ ಮತ್ತೊಂದು ಸಿನಿಮಾ ರಾಮಾಯಣ ಕೂಡ ರಿಲೀಸ್‌ಗೆ ಸಿದ್ಧವಾಗಿದೆ. ಇವೆರಡೂ ಸಿನಿಮಾಗಳಲ್ಲಿ ಯಶ್ ನಟಿಸುವುದರ ಜೊತೆಗೆ ಸಹ ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದಾರೆ. ಹಾಗಾಗಿ, ಅವರು ಭಾರಿ ಬ್ಯುಸಿ ಆಗಿದ್ದಾರೆ. ಇದೆಲ್ಲದರ ನಡುವೆಯೂ ತಮ್ಮ ಅಭಿಮಾನಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರುವ ಅವರ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಹೌದು, ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಯಶ್ ಅಭಿಮಾನಿಯೊಬ್ಬರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ವಿಡಿಯೋ ಕಾಲ್ ಮಾಡಿರುವ ಮಾತನಾಡಿರುವ ಯಶ್, ಧೈರ್ಯ ತುಂಬಿದ್ದಾರೆ. ಯಶ್ ಅವರ ಈ ಮಾನವೀಯ ನಡೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರನ್ನೂ ಭಾವುಕರನ್ನಾಗಿಸಿದೆ.
Yash-Radhika Pandit: ಯಶ್ ಮನೆಯಲ್ಲಿ ಕ್ರಿಸ್ಮಸ್ ಸೆಲೆಬ್ರೇಷನ್! ಚೆಂದದ ವಿಡಿಯೊ ಶೇರ್ ಮಾಡಿದ ರಾಧಿಕಾ ಪಂಡಿತ್
ನಿನ್ನೊಂದಿಗೆ ನಾನು ಇದ್ದೇನೆ ಎಂದ ಯಶ್
ಯಶ್ ಅಭಿಮಾನಿ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷ ಸುನಿಲ್ ಎಂಬುವವರು ಸದ್ಯ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸುನಿಲ್ ಆರೋಗ್ಯದ ಬಗ್ಗೆ ಕೇಳಿ ತಿಳಿದುಕೊಂಡ ಯಶ್, ಅವರ ಕುಟುಂಬಸ್ಥರೊಂದಿಗೂ ಮಾತನಾಡಿ ಈ ಕಠಿಣ ಪರಿಸ್ಥಿತಿಯಲ್ಲಿ ಧೈರ್ಯದಿಂದ ಇರುವಂತೆ ಸಾಂತ್ವನ ಹೇಳಿದ್ದಾರೆ. ಅಷ್ಟೇ ಅಲ್ಲದೆ, "ಈ ಹೋರಾಟದಲ್ಲಿ ನೀನು ಒಬ್ಬಂಟಿಯಲ್ಲ, ನಾನು ನಿನ್ನ ಜೊತೆಗಿದ್ದೇನೆ" ಎಂದು ಸುನಿಲ್‌ಗೆ ಭರವಸೆ ನೀಡಿದ್ದಾರೆ. ಸದಾ ಬೆನ್ನೆಲುಬಾಗಿ ನಿಂತಿರುವ ತಮ್ಮ ಅಭಿಮಾನಿಗಳನ್ನು ಯಶ್ ಎಂದಿಗೂ ಮರೆಯುವುದಿಲ್ಲ ಎಂಬುದಕ್ಕೆ ಸಾಕ್ಷಿಯಾಗಿರುವ ಈ ವಿಡಿಯೋ, ಸದ್ಯ ನೆಟ್ಟಿಗರ ಹೃದಯ ಗೆದ್ದಿದೆ.
ಯಾವಾಗ ಬರಲಿದೆ ಟಾಕ್ಸಿಕ್ ಸಿನಿಮಾ?
ಇನ್ನು, ಸಿನಿಮಾಗಳ ವಿಷಯಕ್ಕೆ ಬಂದರೆ, ಯಶ್ ನಟನೆಯ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರೀಕರಿಸಲಾಗಿದ್ದು, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಿಗೂ ಡಬ್ ಮಾಡಿ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಯಶ್ ಜೊತೆಗೆ ನಯನತಾರಾ, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ಬೃಹತ್ ತಾರಾಗಣವೇ ಇದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಜೂನ್ 4ರಂದು ಈ ಸಿನಿಮಾ ತೆರೆಗೆ ಬರರಬೇಕಿತ್ತು. ಆದರೆ ಅದು ಪೋಸ್ಟ್‌ಪೋನ್ ಆಗಿದೆ. ಯಾವಾಗ ಈ ಸಿನಿಮಾ ತೆರೆಗೆ ಬರಲಿದೆ ಎಂಬುದು ಸದ್ಯಕ್ಕಂತೂ ಗೊತ್ತಾಗಿಲ್ಲ.
ವಿಡಿಯೋ ಕಾಲ್ ಮಾಡಿದ ಯಶ್
ಇದರ ಜೊತೆಗೆ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲೂ ಯಶ್ ರಾವಣನಾಗಿ ಕಾಣಿಸಿಕೊಂಡಿದ್ದು, ಈ ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಸದ್ಯ ಮೊದಲ ಭಾಗ 2026 ರ ದೀಪಾವಳಿ ಹಬ್ಬದ ವೇಳೆಗೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.