Rashmika Mandanna: ಇನ್ನೊಂದು ಬಹುನಿರೀಕ್ಷಿತ ಬಾಲಿವುಡ್ ಚಿತ್ರಕ್ಕೆ ರಶ್ಮಿಕಾ ಆಯ್ಕೆ; ಮತ್ತೊಮ್ಮೆ ಸೂಪರ್ ಸ್ಟಾರ್‌ಗೆ ಜೋಡಿ
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಛಾಪು ಮೂಡಿಸಿದ ಬಳಿಕ ಇದೀಗ ರಶ್ಮಿಕಾ ಮಂದಣ್ಣ ಬ್ಯಾಕ್ ಟು ಬ್ಯಾಕ್ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ವಿಕ್ಕಿ ಕೌಶಲ್ ಜತೆಗಿನ ʼಛಾವಾʼ ತೆರೆಗೆ ಬರಲು ಸಜ್ಜಾಗಿದೆ. ಇತ್ತ ಸಲ್ಮಾನ್ ಖಾನ್ ಜತೆಗಿನ ʼಸಿಕಂದರ್; ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಮಧ್ಯೆ ಅವರು ಮತ್ತೊಂದು ಬಾಲಿವುಡ್ ಸೂಪರ್ ಸ್ಟಾರ್ ಚಿತ್ರವನ್ನು ಒಪ್ಪಿಕೊಂಡಿದ್ದಾರೆ.
ಮುಂಬೈ: 2016ರಲ್ಲಿ ತೆರೆಕಂಡ ಸ್ಯಾಂಡಲ್‌ವುಡ್‌ನ ಕಿರಿಕ್ ಪಾರ್ಟಿ (Kirik Party) ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಬಳಿಕ ಟಾಲಿವುಡ್, ಕಾಲಿವುಡ್‌ಗೆ ಪ್ರವೇಶಿಸಿ, ಬಾಲಿವುಡ್‌ನಲ್ಲಿಯೂ ಛಾಪು ಮೂಡಿಸಿದ್ದಾರೆ. ಸದ್ಯ ಬ್ಯಾಕ್ ಟು ಬ್ಯಾಕ್ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿರುವ ಅವರು ಟಾಪ್ ನಾಯಕರ ಜತೆ ತೆರೆ ಹಂಚಿಕೊಳ್ಳುವ ಚಾನ್ಸ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಜನಪ್ರಿಯ ನಿರ್ದೇಶಕ ಎ.ಆರ್. ಮುರುಗದಾಸ್ ಆ್ಯಕ್ಷನ್ ಕಟ್ ಹೇಳುತ್ತಿರುವ, ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ನಟಿಸುತ್ತಿರುವ 'ಸಿಕಂದರ್' (Sikandar) ಚಿತ್ರದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಸದ್ಯ ಮತ್ತೊಂದು ಬಹು ನಿರೀಕ್ಷಿತ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ.
ಸದ್ಯ 'ಸಿಕಂದರ್ʼ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈಗಾಗಲೇ ಕುತೂಹಲ ಕೆರಳಿಸಿರುವ ಈ ಬಹು ನಿರೀಕ್ಷಿತ ಚಿತ್ರ ವರ್ಷಾಂತ್ಯದಲ್ಲಿ ಬಿಡುಗಡೆಯಾಗಲಿದೆ. ಮೊದಲ ಬಾರಿಗೆ ಸಲ್ಮಾನ್ ಮತ್ತು ರಶ್ಮಿಕಾ ತೆರೆ ಹಂಚಿಕೊಳ್ಳುತ್ತಿರುವ ಕಾರಣಕ್ಕೂ ಇದು ಅಭಿಮಾನಿಗಳ ಗಮನ ಸೆಳೆದಿದೆ. ಈ ಮಧ್ಯೆ ರಶ್ಮಿಕಾ ಮತ್ತೊಮ್ಮೆ ಸಲ್ಮಾನ್‌ಗೆ ಜೋಡಿಯಾಗಿತ್ತಿದ್ದಾರೆ. ಹೌದು, ಸಲ್ಮಾನ್ ಖಾನ್ ಅಭಿನಯದ ಹೊಸ ಚಿತ್ರಕ್ಕೂ ರಶ್ಮಿಕಾ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.
ಅಟ್ಲಿ ಚಿತ್ರದಲ್ಲಿ ಸಲ್ಮಾನ್-ರಶ್ಮಿಕಾ
ಶಾರುಖ್ ಖಾನ್-ನಯನತಾರಾ ನಟನೆಯ ʼಜವಾನ್ʼ ಚಿತ್ರದ ಮೂಲಕ 2023ರಲ್ಲಿ ಬಾಲಿವುಡ್ ಬಾಕ್ಸ್ ಆಫೀಸ್ ಶೇಕ್ ಮಾಡಿರುವ ಕಾಲಿವುಡ್ ಸೂಪರ್ ಸ್ಟಾರ್ ನಿರ್ದೇಶಕ ಅಟ್ಲಿ (Atlee) ಮತ್ತೊಂದು ಹಿಂದಿ ಚಿತ್ರ ಕೈಗೆತ್ತಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ಚಿತ್ರ ನಿರ್ದೇಶಿಸುತ್ತಿರುವುದಾಗಿ ಕಳೆದ ವರ್ಷವೇ ಆವರು ಘೋಷಿಸಿದ್ದರು. ಇದಕ್ಕೆ ತಾತ್ಕಾಲಿಕವಾಗಿ ʼA6ʼ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಇದೀಗ ನಾಯಕಿಯಾಗಿ ರಶ್ಮಿಕಾ ಆಯ್ಕೆಯಾಗಿದ್ದಾರೆ ಎಂದು ಫಿಲ್ಮ್‌ಫೇರ್ ವರದಿ ಮಾಡಿದೆ. ಈ ಚಿತ್ರದಲ್ಲಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅಥವಾ ಕಮಲ್ ಹಾಸನ್ ಅವರೂ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆಯಂತೆ. ಚಿತ್ರತಂಡದ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರ ಬೀಳಬೇಕಿದೆ.
ಇತ್ತೀಚೆಗೆ ತೆರೆಕಂಡ ʼಪುಷ್ಪ 2ʼ (Pushpa 2) ಪ್ಯಾನ್ ಇಂಡಿಯಾ ಚಿತ್ರದಲ್ಲಿನ ರಶ್ಮಿಕಾ ಅಭಿನಯಕ್ಕೆ ಫಿದಾ ಆಗಿರುವ ಅಟ್ಲಿ ಮತ್ತು ಸಲ್ಮಾನ್ ಖಾನ್ ತಮ್ಮ ಚಿತ್ರಕ್ಕೆ ಅವರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದ 'ಪುಷ್ಪ 2' ಇದೀಗ ನೆಟ್‌ಫ್ಲಿಕ್ಸ್‌ನಲ್ಲೂ ತೆರೆಕಂಡಿದ್ದು, ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿನ ಅಲ್ಲು ಅರ್ಜುನ್ ಪಾತ್ರದ ಜತೆಗೆ ರಶ್ಮಿಕಾ ಪಾತ್ರಕ್ಕೂ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ರಶ್ಮಿಕಾ ಅಭಿನಯಲಕ್ಕೆ ಪ್ರೇಕ್ಷಕರು, ವಿಮಶರ್ಕರು ಮೆಚ್ಚುಗೆ ಸೂಚಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣ ಹಂಚಿಕೊಂಡ ತನ್ನ ಎಕ್ಸ್ ರೇಯಲ್ಲಿ ರಿವೀಲ್ ಆಯ್ತು ಶಾಕಿಂಗ್ ವಿಷ್ಯ
ಸದ್ಯ ರಶ್ಮಿಕಾ ಕಾಲಿಗೆ ಗಾಯವಾಗಿದ್ದು, ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಫೆ. 14ರಂದು ಅವರು ಮೊದಲ ಬಾರಿಗೆ ಐತಿಹಾಸಿಕ ಪಾತ್ರದಲ್ಲಿ ಕಾಣಿಸಿಕೊಂಡಿರುವ ಹಿಂದಿ ಚಿತ್ರ 'ಛಾವಾ' ತೆರೆ ಕಾಣಲಿದೆ. ವಿಕ್ಕಿ ಕೌಶಲ್ ನಾಯಕನಾಗಿ ಕಾಣಿಸಿಕೊಂಡಿದ್ದು, ಈಗಾಗಲೇ ರಿಲೀಸ್ ಆಗಿರುವ ಹಾಡು, ಟ್ರೈಲರ್ ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚೆಗೆ ನಡೆದ ಟ್ರೈಲರ್ ರಿಲೀಸ್ ಕಾರ್ಯಕ್ರಮಕ್ಕೆ ವ್ಹೀಲ್ ಚೇರ್‌ನಲ್ಲಿ ಆಗಮಿಸಿದ ರಶ್ಮಿಕಾ ಅವರನ್ನು ಕಂಡು ಅಭಿಮಾನಿಗಳು ಶಾಕ್ ಅಗಿದ್ದರು. ಕಾಲು ನೋವಿದ್ದರೂ ಕುಂಟುತ್ತ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರ ಬದ್ಧತೆಗೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಗಿದೆ.