Actor Darshan: ಮತ್ತೆ ಸಿನಿಮಾ ಚಟುವಟಿಕೆಯಲ್ಲಿ ನಿಧಾನಕ್ಕೆ ತೊಡಗಿಸಿಕೊಳ್ತಿರೋ ದರ್ಶನ್
Actor Darshan: ಹೊಸ ಸಿನಿಮಾವೊಂದರ ಸ್ಪೆಷಲ್ ಪ್ರೀಮಿಯರ್ ಅನ್ನು ದರ್ಶನ್ ಹಾಗೂ ತಾಯಿ ಮೀನಾ ತೂಗುದೀಪ್ ಅವರು ವೀಕ್ಷಣೆ ಮಾಡಿದ್ದಾರೆ.ಒಟ್ಟಿನಲ್ಲಿ ಜೈಲಿನಿಂದ ಬಂದ ನಂತರ ಸಿನಿಮಾ ತಂಡಗಳ ಜತೆ ದರ್ಶನ್ ಬೆರೆಯುತ್ತಿದ್ದಾರೆ.


ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರು ಮತ್ತೆ ನಿಧಾನವಾಗಿ ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಮೂಲಗಳ ಪ್ರಕಾರ ದರ್ಶನ್ ಸಹೋದರ ದಿನಕರ್ ಆಕ್ಷನ್ ಕಟ್ ಹೇಳಿರುವ ರಾಯಲ್ ಸಿನಿಮಾದ ಸ್ಪೆಷಲ್ ಪ್ರೀಮಿಯರ್ ಅನ್ನು ದರ್ಶನ್ ಹಾಗೂ ತಾಯಿ ಮೀನಾ ತೂಗುದೀಪ್ ಅವರು ವೀಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.
ಹೊಸವರ್ಷದ ದಿನವೇ ಡೆವಿಲ್ ಸಿನಿಮಾದ ಡಬ್ಬಿಂಗ್ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ನಟ ದರ್ಶನ್ ಬೆನ್ನು ನೋವಿನ ಕಾರಣದಿಂದ ಸಿನಿಮಾ ಚಿತ್ರೀಕರಣವನ್ನು ಮುಂದೂಡಿದ್ದರು. ದರ್ಶನ್, ದಿನಕರ್ ಹಾಗೂ ಮೀನಾ ತೂಗುದೀಪ್ ಒಟ್ಟಿಗೆ ನಿಂತು ಪೋಜ್ ಕೊಟ್ಟ ಪೋಟೊ ಸದ್ಯ ವೈರಲ್ ಆಗುತ್ತಿದೆ. ಒಟ್ಟಿನಲ್ಲಿ ಜೈಲಿನಿಂದ ಬಂದ ನಂತರ ಸಿನಿಮಾ ತಂಡಗಳ ಜತೆ ದರ್ಶನ್ ಬೆರೆಯುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Bhagya Lakshmi Serial: ಭಾಗ್ಯ ಲಕ್ಷ್ಮೀ ಧಾರಾವಾಹಿಯಲ್ಲಿ ಹೊಸ ತಿರುವು: ಶ್ರೇಷ್ಠಾ ಬಿಟ್ಟು ಮತ್ತೆ ಮನೆಗೆ ಬಂದ ತಾಂಡವ್
ಕಾಂತಾರ ಚಿತ್ರತಂಡದಿಂದ ಅರಣ್ಯದಲ್ಲಿ ಚಿತ್ರೀಕರಣ, ಅಧಿಕಾರಿಗಳ ಪರಿಶೀಲನೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ (Forest Area) ನಡೆಯುತ್ತಿರುವ 'ಕಾಂತಾರ- ಚಾಪ್ಟರ್ 1' ಚಿತ್ರೀಕರಣ (Kantara Movie Shooting) ಪ್ರದೇಶಕ್ಕೆ ಅರಣ್ಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಂತಾರ ಚಿತ್ರತಂಡದಿಂದ (Kantara Chapter 1) ಅರಣ್ಯ ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪರಿಶೀಲನೆ ನಡೆದಿದೆ.
ರಿಷಬ್ ಶೆಟ್ಟಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಕಾಂತಾರ ಚಿತ್ರದ ಪ್ರೀಕ್ವೆಲ್ ನಿರ್ಮಾಣವಾಗುತ್ತಿದ್ದು, ಅದಕ್ಕಾಗಿ ರಿಷಬ್ ಶೆಟ್ಟಿ ಅರಣ್ಯ ಪ್ರದೇಶದಲ್ಲಿ ಭರ್ಜರಿ ಸೆಟ್ ಹಾಕಿ ಚಿತ್ರೀಕರಣ ನಡೆಸುತ್ತಿದ್ದಾರೆ. ಹೆರೂರು ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿನ ಗೋಮಾಳ ಜಾಗದಲ್ಲಿ ಶೂಟಿಂಗ್ ಮಾಡಲು ಕಾಂತಾರ ಚಿತ್ರತಂಡ, ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿದೆ.
ಕಾಂತಾರ ಚಿತ್ರದ ಸೆಟ್‌ಗೆ ನಿನ್ನೆ ಅರಣ್ಯ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿತ್ತು. ಹೀಗಾಗಿ ಅಧಿಕಾರಿಗಳು ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಕಾಡಿಗೆ ಯಾವುದೇ ಹಾನಿ ಆದರೆ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂತಾರ ಚಿತ್ರೀಕರಣಕ್ಕೆ ವಿವಾದಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಸಿನಿಮಾ ಚಿತ್ರೀಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗಿದೆ. ನಮ್ಮ ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ಮಾಡಿಲ್ಲ, ಕಂದಾಯ ಜಮೀನಿನಲ್ಲಿ ಮಾಡಿದ್ದಾರೆ. ಕಾಂತಾರ ಚಿತ್ರತಂಡ ಷರತ್ತುಗಳನ್ನು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದರು.
ಈ ಸುದ್ದಿಯನ್ನೂ ಓದಿ | Kumbh Mela: ಕರ್ನಾಟಕದಲ್ಲೂ ಮುಂದಿನ ತಿಂಗಳು ಕುಂಭಮೇಳ, ದಿನಾಂಕ ಫಿಕ್ಸ್