BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ
ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ ಬಾಸ್ನಲ್ಲಿ ಸಂಚಲನ ಸೃಷ್ಟಿಸಿದ ರಜತ್ ಕಿಶನ್ ಫಿನಾಲೆಯಲ್ಲಿ ಮೊದಲ ಸ್ಪರ್ಧಿಯಾಗಿ ಮನೆಯಿಂದ ಹೊರ ಬಿದ್ದಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಇನ್ನು ಮತ್ತೋರ್ವ ಸ್ಪರ್ಧಿಯಾಗಿ ಭವ್ಯಾ ಗೌಡ ಎಲಿಮಿನೇಟ್ ಆಗಿದ್ದಾರೆ ಎನ್ನಲಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 11ರ (Bigg Boss Kannada 11) ಗ್ರ್ಯಾಂಡ್ ಫಿನಾಲೆ ಆರಂಭವಾಗಿದೆ. ಕಿಚ್ಚ ಸುದೀಪ್ ಸ್ಟೈಲಿಶ್ ಲುಕ್ನೊಂದಿಗೆ ಸ್ಟೇಜ್ನಲ್ಲಿ ಕಂಗೊಳಿಸುತ್ತಿದ್ದಾರೆ. ಜೊತೆಗೆ ಈ ಸೀಸನ್ನಲ್ಲಿ ಎಲಿಮಿನೇಟ್ ಆದ ಬಹುತೇಕ ಎಲ್ಲ ಸ್ಪರ್ಧಿಗಳು ಬಿಗ್ ಬಾಸ್ ವೇದಿಕೆ ಮೇಲೆ ಹಾಜರಾಗಿದ್ದಾರೆ. ಇದರ ನಡುವೆ ಎಲಿಮಿನೇಷನ್ ಪ್ರಕ್ರಿಯೆ ಕೂಡ ನಡೆದಿದೆ. ಸದ್ಯ ಬಂದಿರುವ ಮಾಹಿತಿಯ ಪ್ರಕಾರ ಇಬ್ಬರು ಸ್ಪರ್ಧಿಗಳು ಮನೆಯಿಂದ ಎಲಿಮಿನೇಟ್ ಆಗಿ ಆಚೆ ಬಂದಿದ್ದಾರೆ. 5ನೇ ಮತ್ತು 6ನೇ ಸ್ಥಾನ ಪಡೆದು ಈ ಇಬ್ಬರು ಕಂಟೆಸ್ಟೆಂಟ್ ಹೊರಬಂದಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 11ರ ಫೈನಲ್ನಲ್ಲಿ ಮೋಕ್ಷಿತಾ ಪೈ, ತ್ರಿವಿಕ್ರಮ್, ಹನುಮಂತ, ಉಗ್ರಂ ಮಂಜು, ಭವ್ಯಾ ಗೌಡ, ರಜತ್ ಇದ್ದಾರೆ. ಇವರಲ್ಲಿ ಒಬ್ಬರಷ್ಟೆ ವಿಜೇತರಾಗಿ ಹೊರಹೊಮ್ಮಲಿದ್ದಾರೆ. ಆ ವಿಜೇತ ಯಾರಾಗಲಿದ್ದಾರೆ ಎಂಬುದನ್ನು ಜನರ ಮತಗಳು ನಿರ್ಧಾರ ಮಾಡುತ್ತವೆ. ಈಗಾಗಲೇ ವೋಟಿಂಗ್ ಲೈನ್ಸ್ ಮುಕ್ತಾಯಗೊಂಡಿದೆ. ಇದರಲ್ಲಿ ಅತಿ ಕಡಿಮೆ ಮತ ಪಡೆದುಕೊಂಡ ಇಬ್ಬರು ಸ್ಪರ್ಧಿಗಳು ಹೊರಬಂದಿದ್ದಾರೆ.
ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ ಬಾಸ್ನಲ್ಲಿ ಸಂಚಲನ ಸೃಷ್ಟಿಸಿದ ರಜತ್ ಕಿಶನ್ ಫಿನಾಲೆಯಲ್ಲಿ ಮೊದಲ ಸ್ಪರ್ಧಿಯಾಗಿ ಮನೆಯಿಂದ ಹೊರ ಬಿದ್ದಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಈ ಮನೆಯಲ್ಲಿ ಅರ್ಧ ಜನ ತಿಕ್ಲು, ಇನ್ನು ಅರ್ಧ ಜನ ಪುಕ್ಲು ಎಂದು ಹೇಳಿ ದೊಡ್ಮನೆಗೆ ಕಾಲಿಟ್ಟಿದ್ದ ರಜತ್, ಅಂತಿಮ ಹಂತದಲ್ಲಿ ಎಲಿಮಿನೇಟ್ ಆಗಿ ಆಚೆ ಬಂದಿದ್ದಾರೆ. ಮನೆಯೊಳಗೆ ಬಂದ ಮೊದಲ ದಿನದಿಂದಲೇ ಪ್ರತಿಯೊಬ್ಬರ ಜೊತೆ ಧ್ವನಿ ಏರಿಸೇ ಮಾತನಾಡಿದ ರಜತ್ ವೀಕೆಂಡ್ ಕಾರ್ಯಕ್ರಮದಲ್ಲಿ ಕೂಡ ಖಡಕ್ ಡೈಲಾಗ್ ಹೊಡೆಯುವ ಮೂಲಕ ಸದ್ದು ಮಾಡಿದ್ದರು.
ಇನ್ನು ಮತ್ತೋರ್ವ ಸ್ಪರ್ಧಿಯಾಗಿ ಭವ್ಯಾ ಗೌಡ ಎಲಿಮಿನೇಟ್ ಆಗಿದ್ದಾರೆ ಎನ್ನಲಾಗಿದೆ. ರಜತ್ ಬಳಿಕ ಭವ್ಯಾ ಹೊರಬಂದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಭವ್ಯಾ ಗೌಡ ವಿನ್ ಆಗುತ್ತಾರೆ ಎಂದೇ ಕೆಲವರು ಭಾವಿಸಿದ್ದರು. ಅಲ್ಲದೆ ಈ ಬಾರಿ ಮಹಿಳಾ ಸ್ಪರ್ಧಿ ಟ್ರೋಫಿ ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗಿತ್ತು. ಇವರು ಬಿಗ್ ಬಾಸ್ ಇತಿಹಾಸದಲ್ಲೇ ಮೂರು ಬಾರಿ ಕ್ಯಾಪ್ಟನ್ ಆದ ದಾಖಲೆ ಕೂಡ ಬರೆದಿದ್ದರು. ಆದರೆ, ಅಚ್ಚರಿ ಎಂಬಂತೆ ಇವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಚೆ ಬಂದಿದ್ದಾರೆ.
BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ಹನುಮಂತನ ಹುಡುಗಿ ವಿಚಾರ ಮಾತನಾಡಿದ ಸುದೀಪ್