ಪಾರು ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ (Bigg Boss Kannada 11) ಭಾಗವಹಿಸಿ, ಕನ್ನಡಿಗರ ಮನ ಗೆದ್ದಿದ್ದಾರೆ. ದೊಡ್ಮನೆಯೊಳಗೆ ತಮ್ಮ ಸೌಂದರ್ಯ, ಬೋಲ್ಡ್ ಆಗಿ ಆಟವಾಡುವ ರೀತಿ ಹಾಗೂ ನೇರವಾದ ಮಾತುಗಳಿಂದಲೇ ಜನರಿಗೆ ಇಷ್ಟವಾಗಿದ್ದರು. ಇದೀಗ ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರ ಮೋಕ್ಷಿತಾ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡೋದಕ್ಕೆ ರೆಡಿಯಾಗಿದ್ದಾರೆ. ಈಗಾಗಲೇ ಮೋಕ್ಷಿತಾ ಪೈ ಅವರ ಹೊಸ ಸಿನಿಮಾ ಶೂಟಿಂಗ್ ಮುಕ್ತಾಯಗೊಂಡಿದೆ. ‘ಮಿಡಲ್ ಕ್ಲಾಸ್ ರಾಮಾಯಣ' ಎಂಬುದು ಸಿನಿಮಾ ಹೆಸರಾಗಿದ್ದು, ಈ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ.
ಮೋಕ್ಷಿತಾ ಪೈ, ಯುವ ನಟ ವಿನುಗೌಡ ಹಾಗೂ ಯುಕ್ತಾ ಅಭಿನಯದ ಮಿಡಲ್ ಕ್ಲಾಸ್ ರಾಮಾಯಣ ಚಿತ್ರದ ಟ್ರೇಲರ್ನಲ್ಲಿ ಮಿಡಲ್ ಕ್ಲಾಸ್ ಮಂದಿಯ ಮದುವೆಯ ಸಂಕಷ್ಟಗಳನ್ನು ತೋರಿಸಲಾಗಿದೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ಮೋಕ್ಷಿತಾ ಪೈ ತಮ್ಮ ರಿಯಲ್ ಕಲರ್ ಮರೆಮಾಚಿ, ಸೌಂದರ್ಯ ಅನ್ನೋ ಹೆಸರಿಗೆ ತದ್ವಿರುದ್ಧವಾದಂತ ರೂಪ ತಾಳಿದ್ದಾರೆ.
ಇಲ್ಲಿ ಮೋಕ್ಷಿ ಕಪ್ಪು ಬಣ್ಣದ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಮೈಬಣ್ಣ ಕಪ್ಪು ಇರೋ ಹುಡುಗಿಯ ಜೊತೆಗೆ ಲವ್ ಹಾಗೂ ಮದ್ವೆ ಹೀಗೆ ಈ ಎರಡೂ ಹಂತದಲ್ಲಿ ಏನೆಲ್ಲ ಆಗುತ್ತದೆ ಎಂಬ ವಿಷಯದ ಮೇಲೂ ಈ ಚಿತ್ರ ಇದೆ. ಸದ್ಯ ಟ್ರೇಲರ್ಗೆ ಒಳ್ಳೆ ರೆಸ್ಪಾನ್ಸ್ ಕೇಳಿಬರುತ್ತಿದೆ. ರೆಬಲ್ ಹುಡುಗರು ಸಿನಿಮಾವನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ಧನುಶ್ ಗೌಡ ಈ ಸಿನಿಮಾದ ನಿರ್ದೇಶಕ.
‘‘ತೆರೆ ಹಿಂದೆ ಒಂದಷ್ಟು ಜನರು ಹಾಕಿದ ಶ್ರಮದಿಂದ ಈ ಸಿನಿಮಾ ರಿಲೀಸ್ ಹಂತಕ್ಕೆ ಬಂದಿದೆ. ಸೌಂದರ್ಯ ಎಂಬ ಪಾತ್ರ ಮಾಡಿದ್ದೀನಿ. ಆದರೆ ಸಿನಿಮಾದಲ್ಲಿ ನಾನೇನು ಸಖತ್ತಾಗಿ ಕಾಣಿಸ್ತಿಲ್ಲ. ನಿರ್ದೇಶಕರು ಎಣ್ಣಗೆಂಪಾಗಿ ಕಾಣಿಸ್ತೀರಾ ಅಂದಿದ್ರು. ಲುಕ್ ಟೆಸ್ಟ್ ಕೊಟ್ಟಾಗ ನಾನೇ ಶಾಕ್ ಆಗಿದ್ದೆ. ಆದ್ರೆ ಹೊಸಪ್ರಯತ್ನ ಇರಲಿ ಅಂತ ಒಪ್ಪಿಕೊಂಡೆ. ಸಿಂಪಲ್ ಅಂಡ್ ಸ್ವೀಟ್ ಆಗಿ ಕಥೆ ಇದರಲ್ಲಿದೆ’’ ಎಂದು ಮೋಕ್ಷಿತಾ ಹೇಳಿದ್ದಾರೆ.
ಈ ಚಿತ್ರದ ಎರಡು ಹಾಡುಗಳು ರಿಲೀಸ್ ಆಗಿವೆ. ಅದರಲ್ಲಿ ಒಂದು ಹಾಡನ್ನ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ಆ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಕೂಡ ಬಂದಿದೆ. ಮಿಡಲ್ ಕ್ಲಾಸ್ ರಾಮಾಯಣ ಚಿತ್ರ ಸೆಪ್ಟಂಬರ್ 12ಕ್ಕೆ ರಿಲೀಸ್ ಆಗಲಿದೆ.
BBK 12: ಪ್ರೋಮೋದಲ್ಲೇ ಹೊಸ ಸೀಸನ್ನ ಕಾನ್ಸೆಪ್ಟ್ ಬಗ್ಗೆ ಹಿಂಟ್ ಕೊಟ್ಟ ಬಿಗ್ ಬಾಸ್?