ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lawyer Jagadish: 93 ದಿನಗಳ ಬಳಿಕ ಜೈಲಿನಿಂದ ಹೊರಬಂದು ಹೊಸ ಪೋಸ್ಟ್ ಹಂಚಿಕೊಂಡು ಲಾಯರ್ ಜಗದೀಶ್

Lawyer Jagadish in Jail: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಮಾಡಿದ್ದಾರೆ. ಇದೀಗ 93 ದಿನಗಳ ಜೈಲು ಶಿಕ್ಷೆ ಅನುಭವಿಸಿ ಕೊನೆಗೂ ಜಾಮೀನು ಪಡೆದು ಹೊರಬಂದಿದ್ದಾರೆ.

ಜೈಲಿನಿಂದ ಹೊರಬಂದು ಹೊಸ ಪೋಸ್ಟ್ ಹಂಚಿಕೊಂಡು ಲಾಯರ್ ಜಗದೀಶ್

Lawyer Jagadish

Profile Vinay Bhat May 2, 2025 7:21 AM

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ (Lawyer Jagadish) ಅವರು ಕೊನೆಗೂ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಮಾಡಿದ್ದಾರೆ. 93 ದಿನಗಳ ಜೈಲು ಶಿಕ್ಷೆ ಅನುಭವಿಸಿ ಕೊನೆಗೂ ಜಾಮೀನು ಪಡೆದು ಹೊರಬಂದಿದ್ದಾರೆ.

ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು. ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌ ಆಗಿದ್ದಾರೆ.

‘ನಮಸ್ತೆ ಕರ್ನಾಟಕ, ನಾನು ಕೆ.ಎನ್.ಜಗದೀಶ್ ಕುಮಾರ್, ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ಎಂದು ಜಗದೀಶ್‌ ಬರೆದುಕೊಂಡಿದ್ದಾರೆ. PSI ಹಗರಣವನ್ನು ಬಯಲು ಮಾಡಿದ್ದು, ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಅಶ್ಲೀಲ ಸ್ಕ್ಯಾಂಡಲ್‌ ಅನ್ನು ಬಹಿರಂಗಪಡಿಸಿದ್ದು, ರವಿ ಡಿ.ಚೆನ್ನಣ್ಣನವರ್ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು, ಟ್ರಾಫಿಕ್ ಟೋಯಿಂಗ್‌ ಸಿಸ್ಟಂ ಅನ್ನು ನಿಲ್ಲಿಸಿದ್ದು, ಕೊಡಿಗೇಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ದು ಇವೆಲ್ಲವೂ ನನ್ನ ಹೋರಾಟದ ಭಾಗ’ ಎಂದು ಹೇಳಿದ್ದಾರೆ.

‘ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳಿಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ’ ಎಂದಿದ್ದಾರೆ ಜಗದೀಶ್.



ಅಣ್ಣಮ್ಮ ದೇವಿ ಕೂರಿಸುವ ವಿಚಾರಕ್ಕೆ ಜಗದೀಶ್‌ ಕಿರಿಕ್‌ ಮಾಡಿಕೊಂಡಿದ್ದರು. ಆಗ ಜಗದೀಶ್ ಮೇಲೆ ಹಲ್ಲೆಗೆ ಯತ್ನವೂ ನಡೆದಿತ್ತು. ಅವರಿಗೆ ಅವಾಜ್‌ ಹಾಕಿದ್ದ ಜಗದೀಶ್‌, ದರ್ಶನ್ ಅಭಿಮಾನಿಗಳನ್ನು ಕೆಣಕುವ ರೀತಿ ಮಾತನಾಡಿದ್ದರು. ಬಳಿಕ ಜಗದೀಶ್ ಕಾರಿನ ಮೇಲೆ ಅಟ್ಯಾಕ್ ಕೂಡ ಆಗಿತ್ತು. ಕೆಲವರು ದೊಣ್ಣೆ ತೆಗೆದುಕೊಂಡು ಬಂದು ಜಗದೀಶ್ ಕಾರಿಗೆ ಹಾನಿ ಮಾಡಿದ್ದಲ್ಲದೆ, ಹಲ್ಲೆ ಯತ್ನ ನಡೆಸಿದ್ದರು. ಈ ವೇಳೆ ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂದು ಆರೋಪಿಸಲಾಗಿದೆ.

ಜಗದೀಶ್‌ ಅವರ ಬಳಿಯಿದ್ದ ಬಂದೂಕನ್ನು ಉತ್ತರ ಪ್ರದೇಶದಲ್ಲಿ ಮಾತ್ರ ಬಳಕೆ ಮಾಡಬಹುದಿತ್ತು. ಅಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದಿದ್ದ ಬಂದೂಕನ್ನು ಕೊಡಿಗೇಹಳ್ಳಿಯಲ್ಲಿ ಬಳಸಲಾಗಿತ್ತು. ಇದೇ ಕಾರಣದಿಂದ ಜಗದೀಶ್‌ ಮತ್ತು ಅವರ ಗನ್‌ಮ್ಯಾನ್‌ ಅವರನ್ನು ಪೊಲೀಸರು ಬಂಧಿಸಿದ್ದರು.

Boys vs Girls: ದಿಢೀರ್ ಮುಕ್ತಾಯಗೊಂಡ ಬಾಯ್ಸ್ vs ಗರ್ಲ್ಸ್ ಶೋ: ಗೆದ್ದವರಿಗೆ ಎಷ್ಟು ಹಣ ಸಿಕ್ಕಿತು?