BBK 11 Winner Hanumantha: ಬಿಗ್ ಬಾಸ್ ವಿನ್ನರ್ ಹನುಮಂತನ ಹುಟ್ಟೂರಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಕನ್ನಡದ ಜನಪ್ರು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 11ರ ವಿಜೇತರಾಗಿ ಹನುಮಂತ ಹೊರ ಹೊಮ್ಮಿದ್ದು, ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. ಹನುಮಂತು ಗೆಲುವಿನ ವಿಚಾರ ತಿಳಿದು ಗ್ರಾಮಸ್ಥರು ಸಂಭ್ರಮಾಚರಣೆ ನಡೆಸಿದರು.

ಹನುಮಂತ.

ಹಾವೇರಿ: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 11 ( (Bigg Boss Kannada 11) ಯಶಸ್ವಿಯಾಗಿ ಮುಕ್ತಾಯ ಕಂಡಿದೆ. ಉತ್ತರ ಕರ್ನಾಟಕದ ಪ್ರತಿಭೆ, ಹಳ್ಳಿ ಹೈದ, ಹಾವೇರಿ ಜಿಲ್ಲೆಯ ಹನುಮಂತ ವಿಜೇತರಾಗಿ ಹೊರ ಹೊಮ್ಮಿದ್ದಾರೆ (BBK 11 Winner Hanumantha). ಜ. 26ರಂದು ನಡೆದ ಫಿನಾಲೆ ವೇಳೆ ನಿರೂಪಕ, ಕಿಚ್ಚ ಸುದೀಪ್ ಅವರು ಹನುಮಂತ ಅವರ ಹೆಸರು ಘೋಷಿಸುತ್ತಿದ್ದಂತೆ ಅವರ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಬಿಗ್ ಬಾಸ್ ಕನ್ನಡ ಸೀಸನ್ 11ಕ್ಕೆ ವೈಲ್ಡ್ ಕಾರ್ಡ್ ಮೂಲಕ ಹನುಮಂತ ಎಂಟ್ರಿ ಕೊಟ್ಟಿದ್ದರು. ಲುಂಗಿ ಸುತ್ತಿ, ಶರ್ಟ್ ಹಾಕಿಕೊಂಡು ಬಹಳ ಸರಳವಾಗಿಯೇ ದೊಡ್ಮನೆಯಲ್ಲಿದ್ದ ಹನುಮಂತ ಮೊದಲಿನಿಂದಲೇ ಪ್ರಬಲ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು. ಮೊದಲ ಸ್ಪರ್ಧಿಯಾಗಿ ಅವರು ಫಿನಾಲೆ ವೇದಿಕೆಗೆ ಪ್ರವೇಶಿಸಿದ್ದರು.
ಹನುಮಂತ ಚಾಂಪಿಯನ್ ಆಗುತ್ತಿದ್ದಂತೆ ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದೆ. ಹನುಮಂತು ಗೆಲುವಿನ ವಿಚಾರ ತಿಳಿದು ಗ್ರಾಮಸ್ಥರು ಸಂಭ್ರಮಾಚರಣೆ ನಡೆಸಿದರು.
ಈ ಸುದ್ದಿಯನ್ನೂ ಓದಿ: Bigg Boss Kannada 11: 20 ಲಕ್ಷ ರೂ. ನಿರಾಕರಿಸಿದ ಬಿಗ್ ಬಾಸ್ ಸ್ಪರ್ಧಿಗಳು; ಕಿಚ್ಚ ಹೇಳಿದ್ದೇನು?
ಹನುಮಂತನಿಗೆ ಸಿಕ್ಕ ಬಹಮಾನವೆಷ್ಟು?
ಹನುಮಂತ 5 ಕೋಟಿ 23 ಲಕ್ಷದ 89 ಸಾವಿರದ 318 ವೋಟ್ಸ್ (5,23,89,318) ಅನ್ನು ಪಡೆದುಕೊಂಡು ದಾಖಲೆ ಬರೆದಿದ್ದಾರೆ. ಟ್ರೋಫಿ ಜತೆಗೆ ಹನುಮಂತ ಅವರಿಗೆ 50 ಲಕ್ಷ ರೂಪಾಯಿ ನಗದು ಲಭಿಸಿದೆ. ರನ್ನರ್ ಅಪ್ ತ್ರಿವಿಕ್ರಮ್ ಅವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಸಿಕ್ಕಿದೆ. ಆದರೆ ಈ ಹಣ ಸಂಪೂರ್ಣವಾಗಿ ಗೆದ್ದ ವ್ಯಕ್ತಿಗೆ ಸಿಗುವುದಿಲ್ಲ. ಗೆದ್ದ ಹಣಕ್ಕೆ ಸರ್ಕಾರ ದೊಡ್ಡ ಮೊತ್ತದ ಟ್ಯಾಕ್ಸ್ ಹೇರುತ್ತದೆ. ಬಹುಮಾನ ಮೊತ್ತಕ್ಕೆ ಸರ್ಕಾರ ಬರೋಬ್ಬರಿ ಶೇ. 30ರಷ್ಟು ಟ್ಯಾಕ್ಸ್ ವಿಧಿಸುತ್ತದೆ.
ಈ ಹಣವನ್ನು ಸಂಸ್ಥೆಯವರು ಕಡಿತ ಮಾಡಿಯೇ ವಿಜೇತರಿಗೆ ನೀಡುತ್ತಾರೆ. ಹೀಗಾಗಿ ಹನುಮಂತಗೆ ಸಿಗೋದು ಕೇವಲ 35 ಲಕ್ಷ ರೂಪಾಯಿ. ಕೇವಲ ಹನುಮಂತ ಮಾತ್ರವಲ್ಲದೆ ರನ್ನರ್ ಅಪ್ ಆದ ತ್ರಿವಿಕ್ರಮ್ ಅವರೂ ತೆರಿಗೆ ಹಣ ಪಾವತಿಸಬೇಕು. ಅವರಿಗೆ ಒಟ್ಟೂ 15 ಲಕ್ಷ ರೂಪಾಯಿ ಸಿಕ್ಕಿದ್ದು, ಇದರಲ್ಲಿ ಅವರಿಗೆ 10,50,000 ಮಾತ್ರ ಸಿಗಲಿದೆ. ರಜತ್ ಅವರಿಗೆ 10 ಲಕ್ಷ ರೂಪಾಯಿ ಸಿಕ್ಕಿದ್ದು, ಅವರ ಕೈ ಸೇರೋದು 7 ಲಕ್ಷ ರೂ. ಮಾತ್ರ.