ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ (Rakesh Poojary) ಅವರು ಮೇ 12 ರ ಬೆಳಗ್ಗಿನ ಜಾವ 1.30ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಘಟನೆಯಿಂದ ಇಡೀ ಚಿತ್ರತಂಡಕ್ಕೆ ಶಾಕ್ ಆಗಿದೆ. ಕಾರ್ಕಳದ ನಿಟ್ಟೆ ಸಮೀಪ ಭಾನುವಾರ ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಅವರು ಕುಸಿದುಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದರು. ಕನ್ನಡ ಚಿತ್ರರಂಗದಲ್ಲಿ ಬ್ಯುಸಿಯಾಗುತ್ತಿದ್ದ ಈ ನಟನ ನಿಧನ ಅವರ ಅಭಿಮಾನಿಗಳು ಮಾತ್ರವಲ್ಲದೇ ರಾಜ್ಯದ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.
ರಾಕೇಶ್ ಪೂಜಾರಿ ಅವರು ಮೊನ್ನೆ ತಡರಾತ್ರಿ ಸ್ನೇಹಿತರ ಮದುವೆಯ ಆರತಕ್ಷತೆಯಲ್ಲಿ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೆ ಒಂದು ಮೆಹೆಂದಿ ಫಂಕ್ಷನ್‌ನಲ್ಲಿ ಕೂಡ ಕುಣಿದಿದ್ದಾರೆ. ನಿನ್ನೆ ರಾತ್ರಿಯವರೆಗೆ ಜನರ ಜೊತೆ ಆರಾಮಾಗಿದ್ದ ರಾಕೇಶ್‌ಗೆ ಸಡನ್ ಆಗಿ ಸುಸ್ತು ಆಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಕೂಡ ಚಿಕಿತ್ಸೆ ಫಲಕಾರಿಯಾಗಿಲ್ಲ.
ರಾಕೇಶ್ ಪೂಜಾರಿ ಸಾವಿಗೂ ಮುನ್ನ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿರೋ ವಿಡಿಯೋ ಇದೀಗ ಲಭ್ಯವಾಗಿದೆ. ಆ ವಿಡಿಯೋದಲ್ಲಿ ರಾಕೇಶ್ ಪೂಜಾರಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಒಂದು ಗುಂಪಿನಲ್ಲಿ ಡ್ಯಾನ್ಸ್ ಮಾಡುತ್ತಿದ್ದ ರಾಕೇಶ್ ಪೂಜಾರಿ ಅವರನ್ನು ಮೈಕ್ನಲ್ಲಿ ಮುಂದೆ ಬನ್ನಿ, ನಿಮಗೆ ಅಭಿಮಾನಿಗಳು ಜಾಸ್ತಿ ಇದ್ದಾರೆ ಅಂತ ಹೇಳಲಾಗಿದೆ. ಆ ಕೂಡಲೇ ಸ್ನೇಹಿತರು ಅವರನ್ನು ಮುಂದೆ ತಳ್ಳಿ ಡ್ಯಾನ್ಸ್ ಮಾಡುವಂತೆ ಹೇಳಿದ್ದಾರೆ.
ಇದಾದ ಬಳಿಕ ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ರಾಕೇಶ್ ಪೂಜಾರಿ ಅಗಲಿದ್ದಾರೆ. ರಾಕೇಶ್ ಪೂಜಾರಿ ಅವರ ಆಪ್ತರು ಹೇಳುವ ಪ್ರಕಾರ, ಕಾಂತಾರ-2 ಸಿನಿಮಾದಲ್ಲಿ ಬ್ಯುಸಿ ಆಗಿರುವ ರಾಕೇಶ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಬಳಿಕ ರಾತ್ರಿ ಸ್ನೇಹಿತರೊಬ್ಬರ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಂಜಾಯ್ ಮಾಡಿದ್ದರು. ಬಹುಶಃ ರಾಕೇಶ್ ಈ ಮೆಹಂದಿ ಕಾರ್ಯಕ್ರಮದಲ್ಲಿ ಸಿಕ್ಕಾಪಟ್ಟೆ ಡ್ಯಾನ್ಸ್ ಮಾಡಿ ಅವರಿಗೆ ಲೋಪಿ ಬಿಪಿ ಉಂಟಾಗಿದೆ. ಬಳಿಕ ಹೃದಯಾಘಾತ ಸಂಭವಿಸಿ ನಿಧನ ಹೊಂದಿದ್ದಾರೆ ಎಂದು ಹೇಳಲಾಗುತ್ತದೆ.
ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಹೀರೋ ದಿಲೀಪ್ ರಾಜ್ ಅವರ ಪಿಎ ಪಾತ್ರದಲ್ಲಿ ನಟಿಸುತ್ತಿದ್ದರು. ತೆರೆ ಮೇಲೆ ಬಂದರೆ ಸಾಕು, ಅವರು ನಗುವಿನ ಹೊಳೆ ಹರಿಸುತ್ತಿದ್ದರು. ರಾಕೇಶ್ ಪೂಜಾರಿ ಸಾವಿಗೆ ನಟಿ ರಕ್ಷಿತಾ, ಶಿವರಾಜ್ ಕೆ ಆರ್ ಪೇಟೆ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ರಾಕೇಶ್ ಅನಿರೀಕ್ಷಿತ ಸಾವಿನಿಂದ ಕಿರುತೆರೆ ಇಂಡಸ್ಟ್ರಿ ಆಘಾತಕ್ಕೆ ಒಳಗಾಗಿದೆ.
Rakesh Poojary: ತಂಗಿಯ ಮದುವೆ ಅದ್ಧೂರಿಯಾಗಿ ಮಾಡಬೇಕೆಂದು ಅಂದುಕೊಂಡಿದ್ದ ರಾಕೇಶ್: ಆದರೆ..