ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BBK 12: ಕಿಚ್ಚನ ಅಭಿಮಾನಿಗಳಿಗೆ ಒಂದಲ್ಲ.. ಎರಡಲ್ಲ.. ತ್ರಿಬಲ್ ಧಮಾಕ: ಏನೆಲ್ಲ ನೋಡಿ

ಬಿಬಿಕೆ 12ರ ಮೊದಲ ಪ್ರೋಮೋ ಶೂಟ್ ಮುಕ್ತಾಯವಾಗಿದೆ. ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅದೇ ದಿನಾಂಕದಂದು ಮೊದಲ ಪ್ರೋಮೋ ಔಟ್ ಆಗಲಿದೆ. ಈ ಮಧ್ಯೆ ಸುದೀಪ್ ಅವರು ಬಿಬಿಕೆ 12 ಶುರುವಾಗುವ ದಿನಾಂಕ ಘೋಷಿಸಿದ್ದಾರೆ.

Bigg Boss and Kiccha Sudeep

ಬಿಗ್ ಬಾಸ್ ಕನ್ನಡ ಹೊಸ ಸೀಸನ್​ಗಾಗಿ ಕಾತುರದಿಂದ ಕಾಯುತ್ತಿದ್ದ ಕಿಚ್ಚ ಸುದೀಪ್ (Kichcha Sudeep) ಫ್ಯಾನ್ಸ್​ಗೆ ಈಗ ಒಂದೊಂದೆ ಗುಡ್ ನ್ಯೂಸ್ ಸಿಗುತ್ತಿದೆ. ಮೊನ್ನೆಯಷ್ಟೆ ಕಲರ್ಸ್ ಕನ್ನಡ ವಾಹಿನಿ ಬಿಗ್ ಬಾಸ್ ಕನ್ನಡ ಸೀಸನ್ 12ರ ಹೊಸ ಲೋಗೋ ಬಿಡುಗಡೆ ಮಾಡುವ ಮೂಲಕ ಸದ್ಯದಲ್ಲೇ ಅತಿ ದೊಡ್ಡ ರಿಯಾಲಿಟಿ ಶೋ ಶುರುವಾಗುವ ಸೂಚನೆ ನೀಡಿತು. ಇದರ ಬೆನ್ನಲ್ಲೇ ಕಿಚ್ಚನ ಬಿಬಿಕೆ 12ರ ಮೊದಲ ಪ್ರೋಮೋ ಶೂಟ್ ಮುಕ್ತಾಯವಾಗಿದೆ. ಸೆಪ್ಟೆಂಬರ್ 2 ರಂದು ಮೊದಲ ಪ್ರೋಮೋ ಔಟ್ ಆಗಲಿದೆ. ಈ ಮಧ್ಯೆ ಸುದೀಪ್ ಅವರು ಬಿಬಿಕೆ 12 ಶುರುವಾಗುವ ದಿನಾಂಕವನ್ನು ಕೂಡ ಘೋಷಿಸಿದ್ದಾರೆ.

ಮೈಸೂರಿನಲ್ಲಿ ನಿನ್ನೆ (ಆಗಸ್ಟ್ 31) ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಇನ್ನೂ ಹಲವು ಗಣ್ಯರು ಭಾಗಿ ಆಗಿದ್ದರು. ಇದೇ ಕಾರ್ಯಕ್ರಮದಲ್ಲಿ ಸುದೀಪ್ ಸಹ ಅತಿಥಿಯಾಗಿ ಭಾಗಿ ಆಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಸುದೀಪ್ ಬಿಗ್​​ ಬಾಸ್ ಬಗ್ಗೆಯೂ ಮಾತನಾಡಿದರು.

ಅಭಿಮಾನಿಗಳ ಕೂಗಾಟ, ಚಪ್ಪಾಳೆ, ಶಿಳ್ಳೆಗಳ ನಡುವೆ ಮಾತನಾಡಿದ ಸುದೀಪ್, ‘ಶೀಘ್ರವೇ ತೆರೆ ಮೇಲೆ ಬರಲಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ ಆಶೀರ್ವಾದ ಮಾಡಿ’ ಎಂದರು. ಆ ಮೂಲಕ ಬಿಗ್​​ಬಾಸ್ ಸೀಸನ್ 12 ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ ಎಂದು ಘೋಷಣೆ ಮಾಡಿದರು.

Drishti Bottu: ದೃಷ್ಟಿಯನ್ನು ಮನೆಯಿಂದ ಹೊರದಬ್ಬಿದ ಶರಾವತಿ: ಏನು ಮಾಡ್ತಾನೆ ದತ್ತ ಭಾಯ್?

ಇನ್ನು ಕಿಚ್ಚ ಸುದೀಪ್ ಅವರು ಸೆಪ್ಟೆಂಬರ್ 2ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ದಿನಕ್ಕಾಗಿ ಫ್ಯಾನ್ಸ್ ಕೂಡ ಕಾದಿದ್ದಾರೆ. ಈ ದಿನದಂದು ಬಿಗ್ ಬಾಸ್ ಪ್ರೋಮೋ ಬಿಡುಗಡೆ ಕಾಣಲಿದೆ. ಸೆ. 2 ರಂದು ಆಯೋಜಕರು ಪ್ರೋಮೋ ರಿಲೀಸ್‌ ಮಾಡಲಿದ್ದು, ಹೊಸ ಸೀಸನ್‌ಗೆ ತಕ್ಕಂತೆ ವಿಶೇಷ ಪ್ರೋಮೋವನ್ನು ಶೂಟ್‌ ಮಾಡಲಾಗಿದೆ. ಇದರ ಜೊತೆಗೆ ಇಂದು ಸಂಜೆ 7:02ಕ್ಕೆ ಸುದೀಪ್ ಹೊಸ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಗಲಿದೆ.