Kiran Raj: ಹೊಸ ಸೀರಿಯಲ್ ಬೆನ್ನಲ್ಲೇ ಹೊಸ ಸಿನಿಮಾ ಅನೌನ್ಸ್ ಮಾಡಿದ ಕಿರಣ್ ರಾಜ್
Kiran Raj New Movie and Serial: ಕಿರಣ್ ಸದ್ಯ ಕರ್ಣ ಹೊಸ ಧಾರಾವಾಹಿಯೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಖಷಿಯ ಜೊತೆಗೆ ಕಿರಣ್ ರಾಜ್ ಮತ್ತೊಂದು ಹ್ಯಾಪಿ ನ್ಯೂಸ್ ಕೂಡ ನೀಡಿದ್ದಾರೆ. ಕರ್ಣ ಧಾರಾವಾಹಿಯ ಬೆನ್ನಲ್ಲೇ ಹೊಸ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವನ್ನು ಬಹಿರಂಗಗೊಳಿಸಿದ್ದಾರೆ.

Kiran Raj

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕನ್ನಡತಿ ಧಾರಾವಾಹಿ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ನಟ ಕಿರಣ್ ರಾಜ್ಗೆ (Kiran Raj) ದೊಡ್ಡ ಅಭಿಮಾನಿಗಳ ಬಳಗವಿದೆ. 2020 ಜನವರಿಯಲ್ಲಿ ಶುರುವಾದ ಈ ಧಾರಾವಾಹಿಯು 2023ರಲ್ಲಿ ಮುಕ್ತಾಯಗೊಂಡರೂ ಇಂದಿಗೂ ಹರ್ಷ ಪಾತ್ರ ಹಸಿರಾಗಿದೆ. ಇವರ ಸ್ಟೈಲ್, ಮಾತುಗಾರಿಕೆಗೆ ಅನೇಕ ಮಂದಿ ಫ್ಯಾನ್ಸ್ ಇದ್ದಾರೆ. ಕೇವಲ ಕಿರುತೆರೆಯಲ್ಲಿ ಮಾತ್ರವಲ್ಲದೆ ಹಿರಿತೆರೆಯಲ್ಲೂ ಗುರುತಿಸಿಕೊಂಡಿದ್ದಾರೆ. ಆದರೆ, ಅವರಿಗೆ ಹೆಚ್ಚು ಯಶಸ್ಸು ತಂದುಕೊಟ್ಟಿದ್ದು ಸೀರಿಯಲ್. ಹೀಗಿದ್ದರೂ ಇವರು ಸಿನಿಮಾದಲ್ಲಿ ನಟಿಸುವುದನ್ನು ನಿಲ್ಲಿಸಿಲ್ಲ.
ಇದರ ಮಧ್ಯೆ ಮೊನ್ನೆಯಷ್ಟೆ ಕಿರಣ್ ರಾಜ್ ಕಿರುತೆರೆಗೆ ಎಂಟ್ರಿ ಕೊಡುವ ಬಗ್ಗೆ ಘೋಷಿಸಿದರು. ಕಿರಣ್ ಸದ್ಯ ಹೊಸ ಧಾರಾವಾಹಿಯೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ಕಲರ್ಸ್ ಕನ್ನಡದ ಬದಲು ಝೀ ಕನ್ನಡವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕರ್ಣನಾಗಿ ಮತ್ತೆ ಕಿರುತೆರೆಯಲ್ಲಿ ಪ್ರೇಕ್ಷಕರನ್ನು ರಂಜಿಸಲು ಅವರು ಸಜ್ಜಾಗಿದ್ದಾರೆ. ಝೀ ಕನ್ನಡ ವಾಹಿನಿಯು ಹೊಸ ಧಾರಾವಾಹಿಯನ್ನು ಶೀಘ್ರದಲ್ಲೇ ಪ್ರಸಾರ ಮಾಡಲಿದೆ. ಈಗಾಗಲೇ ಹೊಸ ಧಾರಾವಾಹಿಯ ಪ್ರೋಮೋ ಕೂಡ ಬಿಡುಗಡೆಯಾಗಿದ್ದು ಅದ್ಭುತ ಪ್ರತಿಕ್ರಿಯೆ ಕೇಳಿಬಂದಿದೆ.
ಝೀ ಕನ್ನಡ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಅಪ್ ಲೋಡ್ ಆಗಿರುವ ಈ ಪ್ರೋಮೋ ಈಗಾಗಲೇ ಹತ್ತು ಮಿಲಿಯನ್ ವೀವ್ಸ್ ಪಡೆದಿದೆ. ಮೂರು ಲಕ್ಷಕ್ಕೂ ಅಧಿಕ ಮಂದಿ ಪ್ರೋಮೋ ನೋಡಿ ಲೈಕ್ಸ್ ಕೊಟ್ಟಿದ್ದಾರೆ. ನಲವತ್ತೈದು ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದಾರೆ. ಈ ಸಂತೋಷದ ವಿಚಾರವನ್ನು ಸ್ವತಃ ಕಿರಣ್ ರಾಜ್ ಅವರೇ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ‘ಬಿಗ್ಗೆಸ್ಟ್ ಓಪನಿಂಗ್ ಎವರ್’ ಎಂದು ಶೀರ್ಷಿಕೆಯನ್ನೂ ಕೂಡಾ ನೀಡಿದ್ದಾರೆ. "ನಮ್ಮ ಮುಂದಿನ ಧಾರಾವಾಹಿ ಕರ್ಣ ಆರು ಮಿಲಿಯನ್‌ಗೂ ಅಧಿಕ ವೀವ್ಸ್ ಬಂದಿದೆ. ಅದು ಕೇವಲ ಒಂದೇ ದಿನದಲ್ಲಿ. ನಿಮ್ಮ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ಹೃತ್ಪೂರ್ವಕ ಧನ್ಯವಾದಗಳು" ಎಂದು ಕಿರಣ್ ರಾಜ್ ಇನ್ಸ್ಟಾಗ್ರಾಮ್ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಈ ಖಷಿಯ ಜೊತೆಗೆ ಕಿರಣ್ ರಾಜ್ ಮತ್ತೊಂದು ಹ್ಯಾಪಿ ನ್ಯೂಸ್ ಕೂಡ ನೀಡಿದ್ದಾರೆ. ಕರ್ಣ ಧಾರಾವಾಹಿಯ ಬೆನ್ನಲ್ಲೇ ಹೊಸ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವನ್ನು ಬಹಿರಂಗಗೊಳಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಮುಹೂರ್ತದ ಚಿತ್ರಗಳನ್ನು ಹಂಚಿಕೊಂಡಿರುವ ಇವರು "New beginning. New movie Update soon" ಎಂದು ಬರೆದುಕೊಂಡಿದ್ದಾರೆ. ಸಿನಿಮಾದ ಹೆಸರೇನು? ನಿರ್ದೇಶಕರು ಯಾರು? ನಾಯಕಿ ಯಾರು ಎಂಬೆಲ್ಲಾ ಮಾಹಿತಿಗಳು ಇನ್ನಷ್ಟೆ ಹೊರಬರಬೇಕಿದೆ.
ಕಿರಣ್ ರಾಜ್ ಅವರು ಈಗಾಗಲೇ ಭರ್ಜರಿ ಗಂಡು, ರಾನಿ, ಮೇಘ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ನಟಿಸಿದ್ದಾರೆ. ಇದೀಗ ಮಗದೊಂದು ಹೊಸ ಸಿನಿಮಾ, ಹೊಸ ಪಾತ್ರದ ಮೂಲಕ ಬರಲು ತಯಾರಾಗಿದ್ದಾರೆ. ಏಕಕಾಲಕ್ಕೆ ಸೀರಿಯಲ್ ಹಾಗೂ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವನ್ನು ಹೊರಹಾಕಿರುವ ಕಿರಣ್ ರಾಜ್ ಇವೆರಡನ್ನೂ ಯಾವ ರೀತಿಯಲ್ಲಿ ಬ್ಯಾಲೆನ್ಸ್ ಮಾಡುತ್ತಾರೆ ಎಂಬುದು ನೋಡಬೇಕಿದೆ. ಕರ್ಣ ಧಾರಾವಾಹಿ ಕುಟುಂಬದವರೆಲ್ಲ ಕುಳಿತು ನೋಡುವಂತ ಫ್ಯಾಮಿಲಿ ಡ್ರಾಮಾ ಕಥೆ ಹೊಂದಿದೆ.
Holi 2025: ಶಿಶಿರ್ ಕೆನ್ನೆಗೆ ಮುತ್ತಿಟ್ಟು ಹೋಳಿ ಹಬ್ಬ ಆಚರಿಸಿದ ಐಶ್ವರ್ಯಾ ಸಿಂಧೋಗಿ, ಗೌತಮಿ ಮನೆಯಲ್ಲೂ ಸಂಭ್ರಮ