Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಉಗ್ರಂ ಮಂಜು
ಸ್ಯಾಂಡಲ್ವುಡ್, ಬಾಲಿವುಡ್, ತೆಲುಗು, ತಮಿಳು. ಮಲಯಾಳಂ ಚಿತ್ರರಂಗದ ಹಲವು ಸ್ಟಾರ್ ನಟ, ನಟಿಯರುಗಳು ಘಟನೆ ನಡೆದ ಕೂಡಲೇ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಪ್ರತಿಕ್ರಿಯೆ ದಾಖಲಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಉಗ್ರಂ ಮಂಜು ಕೂಡ ಈ ಉಗ್ರರ ದಾಳಿ ಖಂಡಿಸಿದ್ದಾರೆ.

Pahalgam Terror Attack

ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ (Pahalgam Terror Attack) ದೇಶವನ್ನೇ ಬೆಚ್ಚಿ ಬೀಳಿಸಿದೆ. ಮಂಗಳವಾರ 26 ಪ್ರವಾಸಿಗರು ಸಾವನ್ನಪ್ಪಿದ್ದು ಇದು ಈ ವರ್ಷ ಪ್ರವಾಸಿಗರ ಮೇಲೆ ನಡೆದ ಅತಿ ದೊಡ್ಡ ದಾಳಿಯಾಗಿದೆ. ಲಷ್ಕರ್-ಎ-ತೈಬಾ ಗೆ ಸೇರಿದ ದಿ ರೆಸಿಸ್ಟೆನ್ಸ್ ಫ್ರಂಟ್ ಎಂಬ ಭಯೋತ್ಪಾದಕ ಗುಂಪು ಈ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ. ಪಹಲ್ಗಾಮ್‌ನ ರೆಸಾರ್ಟ್ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣದಲ್ಲಿ ಈ ಘಟನೆ ನಡೆದಿದೆ.
ಸ್ಯಾಂಡಲ್ವುಡ್, ಬಾಲಿವುಡ್, ತೆಲುಗು, ತಮಿಳು. ಮಲಯಾಳಂ ಚಿತ್ರರಂಗದ ಹಲವು ಸ್ಟಾರ್ ನಟ, ನಟಿಯರುಗಳು ಘಟನೆ ನಡೆದ ಕೂಡಲೇ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಪ್ರತಿಕ್ರಿಯೆ ದಾಖಲಿಸಿದ್ದಾರೆ. ತಮ್ಮ ಬೇಸರ, ನೋವು, ಸಿಟ್ಟನ್ನು ಒಬ್ಬೊಬ್ಬರು ಒಂದೊಂದು ರೀತಿ ವ್ಯಕ್ತಪಡಿಸಿದ್ದಾರೆ. ಆ ಮೂಲಕ ದೇಶದ ನೋವಿನಲ್ಲಿ ತಾವೂ ಭಾಗಿ ಆಗಿದ್ದೇವೆ ಎಂಬುದನ್ನು ತೋರ್ಪಿಸಿದ್ದಾರೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಉಗ್ರಂ ಮಂಜು ಕೂಡ ಈ ಉಗ್ರರ ದಾಳಿ ಖಂಡಿಸಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಸ್ಟೇಟಸ್ ಹಂಚಿಕೊಂಡಿರುವ ಉಗ್ರಂ ಮಂಜು ಸಾವನ್ನಪ್ಪಿದವರ ಕುಟುಂಬಕ್ಕೆ ಸಂತಾಪ ರವಾನಿಸಿದ್ದಾರೆ. ಮೋಕ್ಷಿತಾ ಪೈ, ಐಶ್ವರ್ಯಾ ಸಿಂಧೋಗಿ ಕೂಡ ಸ್ಟೇಟಸ್ ಹಾಕಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ನಟ ಶಿವರಾಜ್‌ಕುಮಾರ್ ಸಹ ಪೋಸ್ಟ್ ಹಂಚಿಕೊಂಡಿದ್ದಾರೆ. ‘‘ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಹಾಗೂ ಧೈರ್ಯವನ್ನು ದೇವರು ನೀಡಲಿ.ಈ ಪೈಶಾಚಿಕ ಕೃತ್ಯ ಎಸಗುವವರ ವಿರುದ್ಧದ ಸರ್ಕಾರದ ಹೋರಾಟಕ್ಕೆ ಸದಾ ಬೆಂಬಲವಿರುತ್ತದೆ.’’ ಎಂದಿದ್ದಾರೆ.
ಇನ್ನು ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಿಕೊಂಡಿದೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ಇದೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.