ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Saroja Srishailan: ಕನ್ನಡ ಚಿತ್ರರಂಗದ ಹಿರಿಯ ನಟಿ ಸರೋಜಾ ಶ್ರೀಶೈಲನ್ ಇನ್ನಿಲ್ಲ

Shailaja Srishailan: ‘ಎ’, ‘ಪುಟ್ಟ ಹೆಂಡ್ತಿ’, ‘ಗೃಹಪ್ರವೇಶ’, ‘ಬಾರೆ ನನ್ನ ಮುದ್ದಿನ ರಾಣಿ’, ‘ಅನಂತನ ಅವಾಂತರ’, ‘ಉಪ್ಪಿ 2’ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ‘ಮುಕ್ತ’ ಮತ್ತು ‘ಮಾಯಾಮೃಗ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲೂ ಅಭಿನಯಿಸಿ ಕನ್ನಡ ಕಿರುತೆರೆಯಲ್ಲೂ ತಮ್ಮದೇ ಛಾಪು ಮೂಡಿಸಿದ್ದರು. ಇಂದು ಬೆಂಗಳೂರಿನ ಶ್ರೀರಾಂಪುರದ ವಿದ್ಯುತ್ ಚಿತಾಗಾರದಲ್ಲಿ ಮೃತರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ .

ಕನ್ನಡ ಚಿತ್ರರಂಗದ ಹಿರಿಯ ನಟಿ ಸರೋಜಾ ಶ್ರೀಶೈಲನ್  ಇನ್ನಿಲ್ಲ

ನಟಿ ಸರೋಜಾ ಶ್ರೀಶೈಲನ್ -

Yashaswi Devadiga
Yashaswi Devadiga Jul 17, 2026 6:27 PM

ಕನ್ನಡ ಚಿತ್ರರಂಗದ (Sandalwood) ಹಿರಿಯ ನಟಿ ಸರೋಜಾ ಶ್ರೀಶೈಲನ್ (Shailaja Srishailan) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸರೋಜಾ ಶ್ರೀಶೈಲನ್ ಅವರು ನೂರಾರು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. ವಿಶೇಷವಾಗಿ ರಿಯಲ್ ಸ್ಟಾರ್ ಉಪೇಂದ್ರ (Real Star Upendra) ಅವರ ಸಿನಿಮಾಗಳಲ್ಲಿ ತಾಯಿ ಸೇರಿದಂತೆ ಪ್ರಮುಖ ಪಾತ್ರಗಳಿಗೆ ಇವರು ಜೀವ ತುಂಬಿದ್ದರು.

‘ಎ’, ‘ಪುಟ್ಟ ಹೆಂಡ್ತಿ’, ‘ಗೃಹಪ್ರವೇಶ’, ‘ಬಾರೆ ನನ್ನ ಮುದ್ದಿನ ರಾಣಿ’, ‘ಅನಂತನ ಅವಾಂತರ’, ‘ಉಪ್ಪಿ 2’ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ‘ಮುಕ್ತ’ ಮತ್ತು ‘ಮಾಯಾಮೃಗ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲೂ ಅಭಿನಯಿಸಿ ಕನ್ನಡ ಕಿರುತೆರೆಯಲ್ಲೂ ತಮ್ಮದೇ ಛಾಪು ಮೂಡಿಸಿದ್ದರು.

ಇಂದು ಬೆಂಗಳೂರಿನ ಶ್ರೀರಾಂಪುರದ ವಿದ್ಯುತ್ ಚಿತಾಗಾರದಲ್ಲಿ ಮೃತರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ .

ಇದನ್ನೂ ಓದಿ: Chand Mera Dil OTT release: ಅನನ್ಯಾ ಪಾಂಡೆ ನಟನೆಯ ಈ ರೊಮ್ಯಾಂಟಿಕ್‌ ಮೂವಿ ಒಟಿಟಿಗೆ ಎಂಟ್ರಿ!

ಗಣ್ಯರು ಹಿರಿಯ ನಟಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮಧ್ಯಾಹ್ನ ಸುಮಾರು 2 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.