ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Photos: ಬೆಜ್ಜವಳ್ಳಿಯಲ್ಲಿ ಸಂಭ್ರಮದ ಸಂಕ್ರಾಂತಿ; ಇರುಮುಡಿ ಹೊತ್ತು ಸಾಗಿದ ನಟ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಉತ್ಸವವು ಸಡಗರದಿಂದ ನಡೆಯುತ್ತಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಗೀತಾ ಶಿವರಾಜ್‌ಕುಮಾರ್ ದಂಪತಿ ಹಾಗೂ ಆಧ್ಯಾತ್ಮಿಕ ಗುರುಗಳಾದ ಅವಧೂತ ವಿನಯ್ ಗುರೂಜಿ ಭಾಗವಹಿಸಿದ್ದರು.‌ ಪ್ರತಿ ವರ್ಷದಂತೆ ಈ ಬಾರಿಯೂ ಉತ್ಸವದ ವೇಳೆ ಆಕಾಶದಲ್ಲಿ ಗರುಡ ದರ್ಶನವಾಗಿದ್ದು, ನೂರಾರು ಭಕ್ತರು ದರ್ಶನವನ್ನು ಪಡೆದರು. ಇನ್ನೂ, ಕ್ಷೇತ್ರದ ಸಂಪ್ರದಾಯದಂತೆ ನಟ ಶಿವರಾಜ್‌ಕುಮಾರ್ ಅವರು ಇರುಮುಡಿ ಹೊತ್ತು, ಅಯ್ಯಪ್ಪ ಸ್ವಾಮಿಗೆ ಪವಿತ್ರ ಅಭಿಷೇಕವನ್ನು ನೆರವೇರಿಸಿದರು. ಇಲ್ಲಿವೆ ನೋಡಿ ಫೋಟೋಗಳು.

1/8

ಮಕರ ಸಂಕ್ರಮಣ ಅಂಗವಾಗಿ ಕರ್ನಾಟಕದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರ ಎಂದು ಪ್ರಸಿದ್ಧಿ ಪಡೆದ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ

2/8

ಬೆಜ್ಜವಳ್ಳಿಯಲ್ಲಿ ನಡೆದ ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ಕಾರ್ಯಕ್ರಮ

3/8

ಶಿವರಾಜ್‌ಕುಮಾರ್ ಬೆಜ್ಜವಳ್ಳಿಯಲ್ಲಿ ಮಾಲೆ ಧರಿಸಿ ಇರುಮುಡಿ ಹೊತ್ತು ಅಯ್ಯಪ್ಪನ ದರ್ಶನ ಪಡೆದರು

4/8

ಶಿವರಾಜ್‌ಕುಮಾರ್‌ ಮತ್ತು ಗೀತಾ ಅವರ ಫೋಟೋಗಳನ್ನ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ

5/8

ಮಕರ ಸಂಕ್ರಮಣದ ವೇಳೆ ಆಕಾಶದಲ್ಲಿ ಗರುಡ ದರ್ಶನವಾಗಿದ್ದು ಸಾವಿರಾರು ಭಕ್ತರಲ್ಲಿ ಸಂಭ್ರಮ ಮೂಡಿಸಿತು

6/8

ವರ್ಧಂತ್ಯುತ್ಸವದ ಅಂಗವಾಗಿ ನಡೆದ ಪಲ್ಲಕ್ಕಿ ಮೆರವಣಿಗೆಯಲ್ಲಿ ಶಿವಣ್ಣ ದಂಪತಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು

7/8

"ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆದ ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ಕಾರ್ಯಕ್ರಮದಲ್ಲಿ ನನ್ನ ಬಾವಾ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ನನ್ನ ಅಕ್ಕ ಗೀತಾ ಶಿವರಾಜ್ ಕುಮಾರ್ ಅವರು ದಂಪತಿ ಸಮೇತವಾಗಿ ಮಾಲೆ ಧರಿಸಿ, ಇರುಮುಡಿ ಕಟ್ಟಿ ದೇವಸ್ಥಾನಕ್ಕೆ ತೆರಳಿದರು" ಎಂದ ಮಧು ಬಂಗಾರಪ್ಪ

8/8

"ಈ ವೇಳೆ ಗರುಡ ದರ್ಶನ ಪಡೆದು, ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮೂರ್ತಿಯನ್ನು ಹೊತ್ತ ಪಲ್ಲಕ್ಕಿ ಮೆರವಣಿಗೆಯಲ್ಲಿ ಭಾಗವಹಿಸಿ, ಅಯ್ಯಪ್ಪ ಸ್ವಾಮಿಯ ದಿವ್ಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು" ಎಂದು ಮಧು ಬಂಗಾರಪ್ಪ ತಿಳಿಸಿದರು.