ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shree Gandhada gudi: ‘ಶ್ರೀ ಗಂಧದಗುಡಿ’ ಧಾರಾವಾಹಿಗೆ ಎಂಟ್ರಿ ಕೊಟ್ಟೇ ಬಿಟ್ರು ಭಾರತೀಯ ಚಿತ್ರರಂಗದ ಪ್ರಸಿದ್ಧ ಪೋಷಕ ನಟ!

ಧಾರಾವಾಹಿಯ ಕತೆಯು ಅತ್ಯಂತ ಕುತೂಹಲದ ಘಟ್ಟ ತಲುಪಿದೆ. ಮಹಾರಾಷ್ಟ್ರ ಮೂಲದ ರವಿಕಾಳೆ (Ravi kaale) ಹಿಂದಿ, ತಮಿಳು, ತೆಲುಗು, ಮರಾಠಿ, ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ. ತಮ್ಮ ಖಡಕ್ ನಟನೆಯ ಮೂಲಕ ಗುರುತಿಸಿಕೊಂಡಿರುವ ಇವರು ಹೆಚ್ಚಾಗಿ ಖಳನಾಯಕನ ಪಾತ್ರದಲ್ಲಿ ಮಿಂಚಿದ್ದಾರೆ. ಭಾರತೀಯ ಚಿತ್ರರಂಗದ ಪ್ರಸಿದ್ಧ ಪೋಷಕ ನಟ ರವಿ ಕಾಳೆ ‘ಶ್ರೀಗಂಧದಗುಡಿ’ ಧಾರಾವಾಹಿಯಲ್ಲಿ (Shree Gandhadagudi Serial) ಗೌರವ ನಟರಾಗಿ ಕಾಣಿಸಿಕೊಳ್ಳಲಿದ್ದಾರೆ.

‘ಶ್ರೀ ಗಂಧದಗುಡಿ’ ಧಾರಾವಾಹಿಗೆ ಎಂಟ್ರಿ ಕೊಟ್ಟೇ ಬಿಟ್ರು ಪ್ರಸಿದ್ಧ ಪೋಷಕ ನಟ!

Colors Kannada -

Yashaswi Devadiga
Yashaswi Devadiga Nov 6, 2025 6:10 PM

ಮಹಾರಾಷ್ಟ್ರ ಮೂಲದ ರವಿಕಾಳೆ (Ravi kaale) ಹಿಂದಿ, ತಮಿಳು, ತೆಲುಗು, ಮರಾಠಿ, ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ. ತಮ್ಮ ಖಡಕ್ ನಟನೆಯ ಮೂಲಕ ಗುರುತಿಸಿಕೊಂಡಿರುವ ಇವರು ಹೆಚ್ಚಾಗಿ ಖಳನಾಯಕನ ಪಾತ್ರದಲ್ಲಿ ಮಿಂಚಿದ್ದಾರೆ. ಭಾರತೀಯ ಚಿತ್ರರಂಗದ ಪ್ರಸಿದ್ಧ ಪೋಷಕ ನಟ ರವಿ ಕಾಳೆ ‘ಶ್ರೀಗಂಧದಗುಡಿ’ ಧಾರಾವಾಹಿಯಲ್ಲಿ (Shree Gandhadagudi Serial) ಗೌರವ ನಟರಾಗಿ ಕಾಣಿಸಿಕೊಳ್ಳಲಿದ್ದಾರೆ.

ಟರ್ನಿಂಗ್ ಪಾಯಿಂಟ್ ಕಾಳೆ

ಧಾರಾವಾಹಿಯ ಕತೆಯು ಅತ್ಯಂತ ಕುತೂಹಲದ ಘಟ್ಟ ತಲುಪಿದೆ. ಚಂದನಾ ತಾನು ಈ ಮನೆಯಲ್ಲಿ ಇರಲಾಗುವುದಿಲ್ಲ ಮತ್ತು ತನ್ನ ಗುರಿಗಳನ್ನು ಸಾಧಿಸಲು ಬೆಂಗಳೂರಿಗೆ ಹೋಗಬೇಕೆಂದು ಹೇಳುತ್ತಾಳೆ. ಆಕೆ ಹರಿಯ ಸಹಾಯ ಕೇಳುತ್ತಾಳೆ.

ಇದನ್ನೂ ಓದಿ: BBK 12: ʻಹಳ್ಳಿ ಹುಡುಗನ ಗತ್ತು, ಗಮ್ಮತ್ತು, ತಾಕತ್ತು ತೋರಿಸಿಯೇ ತೋರಿಸುತ್ತೇನೆʼ; ಮಾಳು ಖಡಕ್ ಮಾತು!

ಹರಿ ಆಕೆಗೆ ರಾತ್ರಿ ಹೋಗುವಂತೆ ಹೇಳುತ್ತಾನೆ ಮತ್ತು ತಾನೇ ಕರೆದುಕೊಂಡು ಹೋಗುವುದಾಗಿ ಹೇಳುತ್ತಾನೆ. ಆದರೆ ಬೆಂಗಳೂರಿಗೆ ಹೊರಡುವ ಮಾರ್ಗದಲ್ಲಿ ಚಂದನಾ ಮಾಡಿದ ಒಂದು ತಪ್ಪಿನಿಂದ ಕುಟುಂಬಕ್ಕೆ ಆಕೆ ಮನೆ ಬಿಟ್ಟಿರುವುದು ಗೊತ್ತಾಗುತ್ತದೆ. ಇದರಿಂದ ಒಂದು ಚೇಸ್ ಆರಂಭವಾಗುತ್ತದೆ. ಚಂದನಾಳ ತಂದೆ ಮಹಾಬಲ ತನ್ನ ಸಂಪರ್ಕ ಬಳಸಿ ದಾಳಿ ಮಾಡುತ್ತಾನೆ. ತನ್ನನ್ನು ರಕ್ಷಿಸಿಕೊಳ್ಳಲು ಹರಿ ಪೊಲೀಸ್ ಠಾಣೆಗೆ ಶರಣಾಗುತ್ತಾನೆ. ಅಲ್ಲಿ ಇನ್‌ಸ್ಪೆಕ್ಟರ್ ಕಾಳೆ ಪ್ರತ್ಯಕ್ಷ ಆಗುತ್ತಾರೆ. ಕಾಳೆ ಈ ಧಾರಾವಾಹಿಯ ಕತೆಗೆ ಟರ್ನಿಂಗ್ ಪಾಯಿಂಟ್ ಆಗುತ್ತಾರೆ.

ಚಂದನಾಳನ್ನೂ ಉಳಿಸುವ ಏಕೈಕ ಮಾರ್ಗ

ಹರಿಯನ್ನೂ ಚಂದನಾಳನ್ನೂ ಉಳಿಸುವ ಏಕೈಕ ಮಾರ್ಗ ಎಂದರೆ ಅವರಿಬ್ಬರೂ ಮದುವೆಯಾಗಬೇಕು. ಈ ಪರಿಸ್ಥಿತಿಯನ್ನು ಹರಿ ತನ್ನ ಪ್ರಯೋಜನಕ್ಕೆ ಬಳಸಿಕೊಳ್ಳುತ್ತಾನೆ ಮತ್ತು ಹೇಗೆ ಅವರ ಮದುವೆ ನಡೆಯುತ್ತದೆ ಎಂಬುದು

ಅತ್ಯಂತ ಆಸಕ್ತಿಕರ

ಈ ಕುತೂಹಲಕರ ರೋಮಾಂಚಕ ಎಪಿಸೋಡ್ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ‘ಶ್ರೀಗಂಧದಗುಡಿ’ ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿದ್ದು ಪ್ರತಿ ರಾತ್ರಿ 8 ಕ್ಕೆ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: Afro Tapaang: ಗಿಲ್ಲಿಯ ʻದೊಡ್ಡವ್ವʼಸಾಂಗ್‌ಗೆ ಶಿವಣ್ಣ, ರಾಜ್ ಬಿ ಶೆಟ್ಟಿ, ಉಪೇಂದ್ರ ಸ್ಟೆಪ್ಸ್ ಹಾಕಿದ್ರೆ ಹೇಗಿರತ್ತೆ? ಟ್ರೆಂಡ್‌ ಆಗ್ತಿದೆ AFRO ಟಪಾಂಗ್‌!

ಸಂಜನಾ ಬುರ್ಲಿ ಪ್ರಮುಖ ಪಾತ್ರ

ವರ್ಷಾನುಗಟ್ಟಲೇ ಸ್ನೇಹಾ ಪಾತ್ರಕ್ಕೆ ಸಂಜನಾ ಬುರ್ಲಿ ಅವರು ಜೀವ ತುಂಬಿದ್ದರು. ಇನ್ನು ಸ್ನೇಹಾ-ಕಂಠಿ ಪಾತ್ರವಂತೂ ಜನರ ಮನಸ್ಸು ಗೆದ್ದಿತ್ತು. ಹೀಗಿರುವಾಗ ಸಂಜನಾ ಬುರ್ಲಿ ಅವರು ಯಾಕೆ ಧಾರಾವಾಹಿ ತೊರೆದರು ಎನ್ನುವ ಪ್ರಶ್ನೆ ಎದ್ದಿತ್ತು. ಅಂತೂ ಈ ಧಾರಾವಾಹಿ ಮೂಲಕ ಕಮ್‌ಬ್ಯಾಕ್‌ ಆಗಿದ್ದಾರೆ. ನಾಲ್ವರು ಹುಡುಗರು, ಓರ್ವ ತಂದೆ ಇರುವ ಮನೆಗೆ ಅವರು ಸೊಸೆಯಾಗಿ ಈ ಧಾರಾವಾಹಿಯಲ್ಲಿ ಪಾತ್ರ ನಿಭಾಯಿಸುತ್ತಿದ್ದಾರೆ. ಬಹಳ ವಿಭಿನ್ನವಾದ ಕಥೆ ಇಲ್ಲಿದೆ.