ಮಂಗಳೂರು: ತಮಿಳುನಾಡು ಸಿಎಂ ವಿಜಯ್ (Tamil Nadu CM Vijay) ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ವಿಜಯ್ ಅವರಿಗೆ ಏರ್‌ಪೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಸಚಿವ ಯುಟಿ ಖಾದರ್ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಮಂಗಳೂರು ಏರ್‌ಪೋರ್ಟ್‌ನಿಂದ ವಿಜಯ್ ಅವರು ನೇರವಾಗಿ ರಸ್ತೆ ಮಾರ್ಗದ ಮೂಲಕ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತೆರಳಿದರು. ಮಂಗಳೂರಿನಿಂದ ಸುಮಾರು 125 ಕಿ.ಮೀ ದೂರದ ಕೊಲ್ಲೂರಿಗೆ ರಸ್ತೆ ಮೂಲಕವೇ ಪ್ರಯಾಣ ಬೆಳೆಸಲಿರುವ ಅವರು, ಸಂಜೆ ಹೊತ್ತಿಗೆ ದೇವಸ್ಥಾನಕ್ಕೆ ತಲುಪಿ, ದರ್ಶನ ಪಡೆಯಲಿದ್ದಾರೆ.
ಮೂಕಾಂಬಿಕಾ ದೇಗುಲುದಲ್ಲಿ ಸಂಜೆ 5 ಗಂಟೆವರೆಗೆ ಸಾರ್ವಜನಿಕರಿಗೆ ದರ್ಶನ ನಿರ್ಬಂಧ
ತಮಿಳುನಾಡು ಮುಖ್ಯಮಂತ್ರಿ (Tamil Nadu Chief Minister) ಜೋಸೆಫ್ ವಿಜಯ್ (Joseph Vijay) ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Devi) ಭೇಟಿ ನೀಡುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿರ್ಬಂಧಿಸಲಾಗಿದೆ. ದೇವಸ್ಥಾನ ಸುತ್ತಮುತ್ತ ಹಾಗೂ ಅವರು ಸಾಗುವ ದಾರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಿಎಂ ವಿಜಯ್ ಅವರು ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ತಮಿಳುನಾಡಿಗೆ ಹಿಂದಿರುಗಲಿದ್ದಾರೆ.
ಭದ್ರತೆಯ ಕಾರಣದಿಂದ ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯವರೆಗೆ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಹೀಗಾಗಿ ಭಕ್ತರು ಪೊಲೀಸರೊಂದಿಗೆ ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
R Praggnanandhaa: ಪ್ರಜ್ಞಾನಂದ ಜತೆ ಚೆಸ್ ಆಡಿದ ತಮಿಳುನಾಡು ಸಿಎಂ ವಿಜಯ್
ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಅವರು ಸಂಚರಿಸಲಿರುವ ದಾರಿಯುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಬಿಗಿ ಬಂದೋಬಸ್ತ್ ಕೈಗೊಂಡಿದೆ. ದೇವಿ ದರ್ಶನದ ಬಳಿಕ ವಿಜಯ್ ಅವರು ಬಳಿಕ ತಮಿಳುನಾಡಿಗೆ ಹಿಂದಿರುಗಲಿದ್ದಾರೆ.