ದರ್ಶನ್ ( Actor Darshan) ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ತಾಯ್ತು. ಡೆವಿಲ್ ಸಿನಿಮಾ (The Devil Movie Trailer) ಟ್ರೈಲರ್ ಔಟ್ ಆಗಿದೆ. ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಫ್ಯಾನ್ಸ್ ಕೊಂಡಾಡಿದ್ದಾರೆ. ಟ್ರೈಲರ್ ನೋಡಿ, ನಿರೀಕ್ಷೆ ಇನ್ನಷ್ಟು ಹೆಚ್ಚಾಯ್ತು ಅಂತ ಕಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಫ್ಯಾನ್ಸ್. ದರ್ಶನ್ ಅವರು ಟ್ರೈಲರ್‌ನಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್ (Stylish Look), ಮಾಸ್ ಡೈಲಾಗ್ ಫಿದಾ ಆಗಿದ್ದಾರೆ ಸಿನಿಪ್ರಿಯರು. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ.
`ಖೇಲ್ ಕಥಮ್, ನಾಟಕ್ ಬಂದ್'! ಎಂದು ಮಾಸ್ ಡೈಲಾಗ್ ಮೂಲಕ ಅಬ್ಬರಿಸಿದ್ದಾರೆ ಚಾಲಿಂಗ್ ಸ್ಟಾರ್. ಟ್ರೈಲರ್ ನಲ್ಲಿ ಬಿಗ್ ಬಾಸ್ ಗಿಲ್ಲಿ ನಟ, ಚಂದು ಗೌಡ, ವಿನಯ್ ಗೌಡ ಮೊದಲಾದವರನ್ನು ತೋರಿಸಲಾಗಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿದ್ದಾರೆ. ಈಗಾಗಲೇ ರಿಲೀಸ್ ಆದ ಹಾಡುಗಳು ಗಮನ ಸೆಳೆದಿವೆ.
ನಟನಅನುಪಸ್ಥಿತಿಯಲ್ಲೇ ಸಿನಿಮಾವನ್ನು ರಿಲೀಸ್ ಮಾಡಲಾಗುತ್ತಿದೆ. ಹಾಗಾಗಿ, ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರೇ ಪ್ರಚಾರ ಹೊಣೆ ಹೊತ್ತುಕೊಂಡು ಈಗಾಗಲೇ ದರ್ಶನ್ ಅವರ ಅಭಿಮಾನಿಗಳ ಜೊತೆಗೆ ಸಭೆ ಮಾಡಿದ್ದಾಗಿದೆ.
ದಿ ಡೆವಿಲ್ ಟ್ರೈಲರ್
"ನನ್ನ ಅಭಿಮಾನಿಗಳು ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ.. ನನ್ನ ಉಳಿದ ಸಿನಿಮಾಗಳಿಗೆ ಅಪಾರ ಪ್ರೀತಿ ನೀಡಿದ್ದೀರಿ. ಆದರೆ, ಡೆವಿಲ್‌ಗೆ ಹೆಚ್ಚು ಪ್ರೀತಿ ಕೊಡಿ ಅಂತ ಅಭಿಮಾನಿಗಳಲ್ಲಿ ದರ್ಶನ್ ಕೇಳಿಕೊಂಡಿದ್ದಾರೆ" ಎಂದು ವಿಜಯಲಕ್ಷ್ಮಿ ಹೇಳಿದ್ದರು.
ಈಗ ದರ್ಶನ್ ಕೂಡ ಟ್ರೈಲರ್ ಪೋಸ್ಟರ್ ಜೊತೆಗೆ, ನಮ್ಮ ಎಲ್ಲ ಸೆಲೆಬ್ರಿಟಿಗಳಿಗೆ ಸಮರ್ಪಿತವಾಗಿ ಬಂದಿರುವ ದಿ ಡೆವಿಲ್ ಚಿತ್ರದ ಟ್ರೈಲರ್ ಇದೀಗ ನಿಮ್ಮ ಮುಂದೆ.ನೋಡಿ… ಆನಂದಿಸಿ… ಮತ್ತು ನಿಮ್ಮ ಪ್ರೀತಿಯ ಬೆಂಬಲವನ್ನು ನೀಡಿರಿ ಎಂದು ಬರೆದುಕೊಂಡಿದ್ದಾರೆ.
ದಿ ಡೆವಿಲ್ ಸಿನಿಮಾವನ್ನು ನಿರ್ದೇಶನ ಮಾಡುವುದರ ಜೊತೆಗೆ ಪ್ರಕಾಶ್ ಅವರು ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ದರ್ಶನ್ ಅವರಿಗೆ ನಾಯಕಿಯಾಗಿ ರಚನಾ ರೈ ಅಭಿನಯಿಸಿದ್ದಾರೆ.ಡೆವಿಲ್’ ನಿರ್ದೇಶಕ ಮಿಲನ ಪ್ರಕಾಶ್ ಅವರ 2007ರಲ್ಲಿ ಬಂದ ‘ಮಿಲನ’ ಸೂಪರ್ ಹಿಟ್ ಆಯಿತು.ದರ್ಶನ್ ಜೊತೆ ಅವರು ಈ ಮೊದಲು ‘ತಾರಕ್’ ಅಲ್ಲಿ ಕೆಲಸ ಮಾಡಿದ್ದರು. ಈಗ ಇಬ್ಬರೂ ‘ಡೆವಿಲ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ: Actor Darshan: ದರ್ಶನ್ ‘ದಿ ಡೆವಿಲ್’ಸಿನಿಮಾಗೆ ಶುಭ ಹಾರೈಸಿದ ಸುಮಲತಾ ಅಂಬರೀಷ್
ದರ್ಶನ್ ತೂಗುದೀಪ ಅವರಿಗೆ ನಾಯಕಿಯಾಗಿ ರಚನಾ ರೈ ಕಾಣಿಸಿಕೊಂಡಿದ್ದು, ಮಹೇಶ್ ಮಾಂಜ್ರೇಕರ್, ಅಚ್ಯುತ್ ಕುಮಾರ್, ಶೋಭರಾಜ್, ಗಿಲ್ಲಿ ನಟ, ಹುಲಿ ಕಾರ್ತಿಕ್, ಶರ್ಮಿಳಾ ಮಾಂಡ್ರೆ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಸಿನಿಮಾಕ್ಕೆ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.