BBK 12 Contestants: ನಾಳೆ ಬಿಗ್ ಬಾಸ್ ಕನ್ನಡ ಗ್ರ್ಯಾಂಡ್ ಓಪನಿಂಗ್; ದೊಡ್ಮನೆ ಪ್ರವೇಶಿಸುವ ಮೂವರು ಸ್ಪರ್ಧಿಗಳ ಹೆಸರು ರಿವೀಲ್
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಕ್ವಾಟ್ಲೆ ಕಿಚನ್‌ನ ಫಿನಾಲೆ ನಡೆಯುತ್ತಿದ್ದು, ಅದರಲ್ಲಿ ಬಿಗ್ ಬಾಸ್‌ನ ಮೂವರು ಸ್ಪರ್ಧಿಗಳ ಹೆಸರು ರಿವೀಲ್ ಮಾಡಲಾಗಿದೆ. ಕಲಾವಿದರಾದ ಕಾಕ್ರೋಚ್ ಸುಧಿ, ಮಂಜು ಭಾಷಿಣಿ ಮತ್ತು ಮಲ್ಲಮ್ಮ ಅವರ ಹೆಸರನ್ನು ಅಧಿಕೃತವಾಗಿ ಇದೀಗ ಘೋಷಿಸಲಾಗಿದೆ.

-

ಬೆಂಗಳೂರು: ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 12 (BBK 12) ಆರಂಭಕ್ಕೆ ದಿನಗಣೆ ಆರಂಭವಾಗಿದೆ. ಸೆಪ್ಟೆಂಬರ್ 28ರಂದು ಬಿಗ್ ಬಾಸ್‌ನ 12ನೇ ಆವೃತ್ತಿಯ ಗ್ರ್ಯಾಂಡ್ ಓಪನಿಂಗ್ ನಡೆಯಲಿದೆ. ಈ ಬಾರಿ ಯಾರೆಲ್ಲ ಸ್ಪರ್ಧಿಗಳಾಗಿ ದೊಡ್ಮನೆ ಪ್ರವೇಶಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದ್ದು, ಒಂದಷ್ಟು ಸಂಭಾವ್ಯರ ಪಟ್ಟಿ ಹರಿದಾಡುತ್ತಿದೆ. ಈ ಮಧ್ಯೆ ಕಲರ್ಸ್ ಕನ್ನಡ ವಾಹಿನಿಯ ಮತ್ತೊಂದು ಜನಪ್ರಿಯ ರಿಯಾಲಿಟಿ ಶೋ ಕ್ವಾಟ್ಲೆ ಕಿಚನ್‌ನ ಫಿನಾಲೆ ನಡೆಯುತ್ತಿದ್ದು, ಅದರಲ್ಲಿ ಬಿಗ್ ಬಾಸ್‌ನ ಮೂವರು ಸ್ಪರ್ಧಿಗಳ ಹೆಸರು ರಿವೀಲ್ ಮಾಡಲಾಗಿದೆ (BBK 12 Contestants). ಕಲಾವಿದರಾದ ಕಾಕ್ರೋಚ್ ಸುಧಿ, ಮಂಜು ಭಾಷಿಣಿ ಮತ್ತು ಮಲ್ಲಮ್ಮ ಅವರ ಹೆಸರನ್ನು ಅಧಿಕೃತವಾಗಿ ಇದಗ ಘೋಷಿಸಲಾಗಿದೆ. ಇನ್ನುಳಿದ 15 ಸ್ಪರ್ಧಿಗಳು ಯಾರೆಲ್ಲ ಎನ್ನುವ ಕುತೂಹಲಕ್ಕೆ ನಾಳೆ ( ಸೆಪ್ಟೆಂಬರ್ 28) ಉತ್ತರ ಸಿಗಲಿದೆ.
ಕಾಕ್ರೋಚ್ ಸುಧಿ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಟಗರು' ಸಿನಿಮಾದಲ್ಲಿ 'ಕಾಕ್ರೋಚ್' ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಸುಧೀರ್ ಬಾಲರಾಜ್ ಬಳಿಕ 'ಕಾಕ್ರೋಚ್ ಸುಧಿ' ಎಂದೇ ಜನಪ್ರಿಯರಾದರು. ಇತ್ತೀಚೆಗೆ ಅವರು ನಟಿಸುತ್ತಿರುವ 'ಚೈಲ್ಡು' ಚಿತ್ರ ಸೆಟ್ಟೇರಿದೆ. ವಿಶೇಷ ಎಂದರೆ ಅವರು ನಾಯಕನಾಗಿ ಅಭಿನಯಿಸುತ್ತಿರುವ 3ನೇ ಚಿತ್ರ ಇದು. ಇದರೊಂದಿಗೆ ಅವರು ಸುಮಾರು 10ಕ್ಕೂ ಹೆಚ್ಚು ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ದೊಡ್ಮನೆ ಪ್ರವೇಸಿಸುತ್ತಿದ್ದು, ಅಲ್ಲಿ ಯಾವ ರೀತಿ ಗೇಮ್ ಪ್ಲ್ಯಾನ್ ಮಾಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಈ ಸುದ್ದಿಯನ್ನೂ ಓದಿ: BBK 12: ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ದಿನಗಣನೆ; ಸೆಪ್ಟೆಂಬರ್ 28ಕ್ಕೆ ಗ್ರ್ಯಾಂಡ್ ಓಪನಿಂಗ್
ಮಂಜು ಭಾಷಿಣಿ
ʼಸಿಲ್ಲಿ ಲಲ್ಲಿʼ ಧಾರಾವಾಹಿ ಮೂಲಕ ಜನರನ್ನು ನಗಿಸಿದ ಮಂಜು ಭಾಷಿಣಿ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಸದ್ಯ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಝೀ ಕನ್ನಡದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲೂ ಅವರು ಕಾಣಿಸಿಕೊಂಡಿದ್ದರು. ಮಲ್ಲಮ್ಮ ಅವರ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ರಿವೀಲ್ ಆಗಬೇಕಿದೆ.
ವಿಭಿನ್ನ ಥೀಮ್
ಕಳೆದ 11 ಸೀಸನ್‌ಗಳಿಂದಲೂ ಕನ್ನಡಿಗರನ್ನು ರಂಜಿಸುತ್ತ ಬಂದಿರುವ ‘ಬಿಗ್ ಬಾಸ್’ ರಿಯಾಲಿಟಿ ಶೋ ಈ ಬಾರಿ "Expect the Unexpected” ಎಂಬ ಥೀಮ್‌ನಲ್ಲಿ ಹಲವು ಅನಿರೀಕ್ಷಿತಗಳನ್ನು ಇಟ್ಟುಕೊಂಡು ಪ್ರೇಕ್ಷಕರ ಮನರಂಜನೆ ಒದಗಿಸಲು ಸಜ್ಜಾಗಿದೆ. ಸೆಪ್ಟೆಂಬರ್ 28ರ ಸಂಜೆ 6 ಗಂಟೆಗೆ ಬಿಗ್ ಬಾಸ್ ಸೀಸನ್ 12ರ ಗ್ರ್ಯಾಂಡ್ ಓಪನಿಂಗ್ ಪ್ರಸಾರವಾಗಲಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಕಲರ್ಸ್ ಕನ್ನಡ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು. ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ರಾತ್ರಿ 9 ಗಂಟೆಯಿಂದ ಪ್ರಸಾರವಾಗಲಿದೆ.
ಚಿನ್ನದ ನಾಣ್ಯ ನಿಮ್ಮದಾಗಿಸಿ
ಮನೆಯೊಳಗೆ ನಡೆಯುವ ವಿಚಾರಗಳನ್ನು ಪ್ರತಿ ಕ್ಷಣವನ್ನೂ ಜಿಯೋ ಹಾಟ್‌ಸ್ಟಾರ್‌ನಲ್ಲಿ 24 ಗಂಟೆ ಲೈವ್ ಆಗಿ ನೋಡಬಹುದು. ನೋಡುವುದರ ಜತೆಗೆ ವೀಕ್ಷಕರಿಗೆ ಆಡುವ ಮಜಾ ನೀಡುವುದಕ್ಕಾಗಿ ‘ಜೀತೋ ಧನ್ ಧನಾ ಧನ್’ ಸ್ಪರ್ಧೆ ಇದೆ. ಎಪಿಸೋಡ್ ಪ್ರಸಾರವಾಗುವ ವೇಳೆ ಜಿಯೋ ಹಾಟ್‌ಸ್ಟಾರ್‌ನಲ್ಲಿ ಕೇಳುವ ಸರಳ ಪ್ರಶ್ನೆಗಳಿಗೆ ಉತ್ತರಿಸಿದರೆ ಚಿನ್ನದ ನಾಣ್ಯವನ್ನು ನಿಮ್ಮದಾಗಿಸಿಕೊಳ್ಳಬಹುದು. ಫ್ಯಾನ್ ಝೋನ್‌ನಲ್ಲಿ ಸಕ್ರಿಯರಾಗಿದ್ದರೆ ಸೀಸನ್ ಅಂತ್ಯದಲ್ಲಿ ನಡೆಯುವ ಫಿನಾಲೆಯಲ್ಲಿ ಅತಿಥಿಯಾಗಿ ಪಾಲ್ಗೊಳ್ಳುವ ಅವಕಾಶವನ್ನೂ ಪಡೆಯಬಹುದು. ಈ ಬಾರಿಯೂ ನಿಮ್ಮಿಷ್ಟದ ಸ್ಪರ್ಧಿಗಳನ್ನು ಉಳಿಸುವುದಕ್ಕಾಗಿ ವೋಟ್ ಮಾಡಲು ಜಿಯೋ ಹಾಟ್‌ಸ್ಟಾರ್ ಆಪ್ಲಿಕೇಷನ್‌ನಲ್ಲಿ ಮಾತ್ರ ಅವಕಾಶ ಸಿಗಲಿದೆ.