ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Toxic Release: 12 ಸಾವಿರ ಸ್ಕ್ರೀನ್‌ಗಳಲ್ಲಿ 'ಟಾಕ್ಸಿಕ್' ಅಬ್ಬರ! ಪಟಾಕಿ ಸಿಡಿಸಿ, ಕಟೌಟ್‌ಗೆ ಹಾಲಿನ ಅಭಿಷೇಕ

Toxic Release: ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಫ್ಯಾನ್ಸ್ ಶೋಗಳಿಗೆ ಜನಸಾಗರವೇ ಹರಿದುಬಂದಿದ್ದು, ಬಾಕ್ಸ್ ಆಫೀಸ್‌ನಲ್ಲಿ ನೂತನ ಇತಿಹಾಸ ಸೃಷ್ಟಿಯಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 12,000 ಸ್ಕ್ರೀನ್‌ಗಳಲ್ಲಿ (1200 Screen) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಮುಂಜಾನೆಯಿಂದಲೇ ಚಿತ್ರಮಂದಿರಗಳ ಬಳಿ ಅಭಿಮಾನಿಗಳು ಪಟಾಕಿ ಸಿಡಿಸಿ, ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.

ಟಾಕ್ಸಿಕ್‌ ಸಿನಿಮಾ

'ರಾಕಿಂಗ್ ಸ್ಟಾರ್ ಯಶ್' (Yash) ಅವರ ಬಹುನಿರೀಕ್ಷಿತ ಗ್ಯಾಂಗ್‌ಸ್ಟರ್ ಕಹಾನಿ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಇಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಚಿತ್ರಮಂದಿರಗಳನ್ನು ಅಪ್ಪಳಿಸಿದೆ. ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗಿರುವ ಫ್ಯಾನ್ಸ್ ಶೋಗಳಿಗೆ ಜನಸಾಗರವೇ ಹರಿದುಬಂದಿದ್ದು, ಬಾಕ್ಸ್ ಆಫೀಸ್‌ನಲ್ಲಿ ನೂತನ ಇತಿಹಾಸ ಸೃಷ್ಟಿಯಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 12,000 ಸ್ಕ್ರೀನ್‌ಗಳಲ್ಲಿ (1200 Screen) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಮುಂಜಾನೆಯಿಂದಲೇ ಚಿತ್ರಮಂದಿರಗಳ ಬಳಿ ಅಭಿಮಾನಿಗಳು ಪಟಾಕಿ ಸಿಡಿಸಿ, ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.

ಅಧಿಕ ಸ್ಕ್ರೀನ್‌ಗಳಲ್ಲಿ ಪ್ರದರ್ಶನ

ಚಿತ್ರವು ವಿಶ್ವಾದ್ಯಂತ ಬರೋಬ್ಬರಿ 12,000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ತೆರೆಕಂಡಿದ್ದು, ಕರ್ನಾಟಕ ಒಂದರಲ್ಲೇ 1,500ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ. ಪಟಾಕಿ ಸಿಡಿಸಿ, ಹಾರ ಹಾಕಿ ಸಂಭ್ರಮಾಚರಣೆ ಮುಗಿಲು ಮುಟ್ಟಿಸಿದ್ದಾರೆ ಫ್ಯಾನ್ಸ್‌,. ಯಶ್ ಕಟೌಟ್​​ಗೆ ಹಾಲಿನ ಅಭಿಷೇಕ ಮಾಡಲಾಗಿದೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಿನಿಮಾಗೆ ಬೇಡಿಕೆ ಸೃಷ್ಟಿ ಆಗಿದೆ. ಡ್ವಾನ್ಸ್ ಬುಕಿಂಗ್ ಮೂಲಕವೇ ಸುಮಾರು 70 ಕೋಟಿ ರೂಪಾಯಿ ಸಂಗ್ರಹಿಸಿ ಹೊಸ ದಾಖಲೆ ಬರೆದಿದೆ.



ಇದನ್ನೂ ಓದಿ: Toxic Movie: ಟಾಕ್ಸಿಕ್ ಬಿಡುಗಡೆಗೂ ಮುನ್ನ ಯಶ್‌ ಮನವಿ ಮಾಡಿದ್ದೇನು?

ಮೊದಲ ಶೋ ನೋಡಿರುವ ಮಹಿಳಾ ವೀಕ್ಷಕರು, ಟೀಸರ್ ಮತ್ತು ಟ್ರೈಲರ್‌ನಲ್ಲಿ ತೋರಿಸಿದಕ್ಕಿಂತ ಆಕ್ಷನ್ ಸೀನ್‌ಗಳು ಚೆನ್ನಾಗಿವೆ. ಚಿತ್ರದ ಕಥೆಯೂ ಚೆನ್ನಾಗಿದೆ. ಕಿಯಾರಾ ಜೊತೆಗಿನ ಯಶ್ ಅವರ ಕೆಮಿಸ್ಟ್ರಿ ಚಿತ್ರದ ಹೈಲೈಟ್. ಚಿತ್ರಮಂದಿರ ತುಂಬಿದ್ದು, ಕ್ರೇಜಿ ಸೀನ್‌ಗಳು ಅದ್ಭುತವಾಗಿವೆ ಎನ್ನುತ್ತಿದ್ದಾರೆ.

, ಗೀತು ಮೋಹನ್‌ದಾಸ್ ನಿರ್ದೇಶನ ಮಾಡುವುದರ ಜೊತೆಗೆ ಯಶ್ ಅವರೊಂದಿಗೆ ಸೇರಿ ಚಿತ್ರಕಥೆ ಬರೆದಿದ್ದಾರೆ. ಕೆ.ವಿ.ಎನ್. ಪ್ರೊಡಕ್ಷನ್ಸ್‌ನ ವೆಂಕಟ್ ಕೆ. ನಾರಾಯಣ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಯಶ್ ಸ್ವತಃ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: Toxic Movie: ಟಾಕ್ಸಿಕ್ ಬಿಡುಗಡೆಗೂ ಮುನ್ನ ಯಶ್‌ ಮನವಿ ಮಾಡಿದ್ದೇನು?

. ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಅವರೊಂದಿಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸಿದ್ದಾರೆ.

Yashaswi Devadiga

View all posts by this author