ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Andhra King Taluka Trailer: ಉಪೇಂದ್ರ ಈಗ ‘ಆಂಧ್ರ ಕಿಂಗ್’; ಟಾಲಿವುಡ್‌ನಲ್ಲಿ ʻರಿಯಲ್‌ ಸ್ಟಾರ್‌ʼ ಹವಾ ಜೋರು!

Upendra: ಸ್ಯಾಂಡಲ್‌ವುಡ್‌ ರಿಯಲ್ ಸ್ಟಾರ್ ಉಪೇಂದ್ರ ನಟಿಸಿರುವ ತೆಲುಗು ಸಿನಿಮಾ ‘ಆಂಧ್ರ ಕಿಂಗ್ ತಾಲೂಕ’. ಇದು ಅಭಿಮಾನಿ ಮತ್ತು ಸ್ಟಾರ್ ಹೀರೋ ನಡೆಯುವ ಕತೆ. ಉಪೇಂದ್ರ ಅವರಿಗೆ ತೆಲುಗಿನಲ್ಲಿ ಇದು ಒಂಬತ್ತನೇ ಸಿನಿಮಾ. ತೆಲುಗು ಚಿತ್ರಂಗದಲ್ಲಿಯೂ ಸಹ ಉಪ್ಪಿ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಈ ಬಾರಿ ಸ್ಟಾರ್ ಹೀರೋ ಆಗಿಯೇ ಉಪ್ಪಿ ನಟಿಸಿದ್ದು ಈ ಸಿನಿಮಾದಿಂದ ಅವರಿಗೆ ತೆಲುಗಿನಲ್ಲಿ ಅಭಿಮಾನಿಗಳು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.

ಆಂಧ್ರ ಕಿಂಗ್ ತಾಲೂಕ ಸಿನಿಮಾ ತಂಡ

ಸ್ಯಾಂಡಲ್‌ವುಡ್‌ ರಿಯಲ್ ಸ್ಟಾರ್ ಉಪೇಂದ್ರ(Upendra) ನಟಿಸಿರುವ ತೆಲುಗು ಸಿನಿಮಾ ‘ಆಂಧ್ರ ಕಿಂಗ್ ತಾಲೂಕ’ (Andhra King Taluka Trailer) ಟ್ರೈಲರ್ ಬಿಡುಗಡೆ ಆಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಸಿನಿಮಾದಲ್ಲಿ ತೆಲುಗು ನಟ ರಾಮ್ ಪೋತಿನೇನಿ (Ram Pothineni) ಮತ್ತು ಉಪೇಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಭಾಗ್ಯಶ್ರೀ ಬೋರ್ಸೆ ಸಾಥ್ ಕೊಟ್ಟಿದ್ದಾರೆ. ಇದು ಅಭಿಮಾನಿ ಮತ್ತು ಸ್ಟಾರ್ ಹೀರೋ ನಡೆಯುವ ಕತೆ.

ಉಪೇಂದ್ರ ಹೇಳಿದ್ದೇನು?

ಉಪೇಂದ್ರ ಮಾತನಾಡಿ, ʻಎಲ್ಲಾ ಸಿನಿಮಾ ಮಾಡೋದಕ್ಕೆ ಒಂದೊಂದು ಕಾರಣ ಇರುತ್ತದೆ. ಸಬ್ಜೆಕ್ಟ್, ಮೆಸೇಜ್, ಸ್ಕ್ರೀನ್ ಪ್ಲೇ, ನಮಗೆ ಸಿಗುವ ಸ್ಕೋಪ್ ಇದೆಲ್ಲಾ ಕಾರಣ. ಆದರೆ ಈ ಸಿನಿಮಾ ಮಾಡಿರುವುದು ಅಭಿಮಾನಿಗಳಿಗೋಸ್ಕರ. ಈ ಚಿತ್ರ ನೋಡಿ ಫ್ಯಾನ್ಸ್ ಎಂಜಾಯ್ ಮಾಡುತ್ತಾರೆ. ನಾನು ಚಿತ್ರ ನೋಡಿ ಮಾತನಾಡುತ್ತೇನೆʼ ಎಂದರು.

ಇದನ್ನೂ ಓದಿ: Raktha Kashmira Movie: ಉಪೇಂದ್ರ-ರಮ್ಯಾ ಕಾಂಬಿನೇಷನ್‌ನಲ್ಲಿ ಶೀಘ್ರವೇ ತೆರೆಗೆ ಬರಲಿದೆ ‘ರಕ್ತ ಕಾಶ್ಮೀರ’

ನಾಯಕ‌ ರಾಮ್ ಪೋತಿನೇನಿ ಮಾತನಾಡಿ,‌ ಆಂಧ್ರ ಕಿಂಗ್ ತಾಲೂಕು ಸಿನಿಮಾದಲ್ಲಿ ನಾನು ಹೃದಯದಿಂದ ಅಭಿನಯಿಸಿದ್ದೇನೆ. ಅಭಿಮಾನಿ ಹಾಗೂ ನಟ ನಡುವಿನ ಪ್ರೀತಿ‌ ಮಾತ್ರವಲ್ಲದೆ ಈ ಚಿತ್ರದಲ್ಲಿ ಎಮೋಷನ್ ಇದೆ. ಅದು ನಿಮ್ಮನ್ನು ಟಚ್ ಮಾಡುತ್ತದೆ ಎಂದುಕೊಂಡಿದ್ದೇನೆ. ಉಪ್ಪಿ ಸರ್ ಜೊತೆ ನಟಿಸಿರುವುದು ಖುಷಿ ಇದೆ.‌ ಇದೇ ತಿಂಗಳ‌ 27ರಂದು ಚಿತ್ರ ಬಿಡುಗಡೆಯಾಗುತ್ತಿದೆ. ತಪ್ಪದೇ ನಮ್ಮ ಸಿನಿಮಾ ನೋಡಿ ಎಂದರು.



ನಿರ್ದೇಶಕ ಮಹೇಶ್ ಬಾಬು‌ ಮಾತನಾಡಿ, ಆಂಧ್ರ ಕಿಂಗ್ ತಾಲೂಕು ಸಿನಿಮಾ ನಟರಿಗಿಂತ ಇದು ಅಭಿಮಾನಿಗಳಿಗೆ ಕನೆಕ್ಟ್ ಆಗುವ ಸಿನಿಮಾ.‌ ಇದು ಅಭಿಮಾನಿ ಹಾಗೂ ಸ್ಟಾರ್ ನಡುವಿನ ಚಿತ್ರ ಎನ್ನುವುದಕ್ಕಿಂತ ಎಲ್ಲರಿಗೂ ಕನೆಕ್ಟ್ ಆಗುವ ಸಿನಿಮಾ. ನನಗೆ ಅವಕಾಶ ಕೊಟ್ಟ ಇಡೀ ಚಿತ್ರತಂಡಕ್ಕೆ ಧನ್ಯವಾದ. ನಿರ್ದೇಶಕನಾಗಿ ನನಗೆ ಇದು ಎರಡನೇ ಚಿತ್ರ ಎಂದರು

ಉಪೇಂದ್ರ ಅವರಿಗೆ ತೆಲುಗಿನಲ್ಲಿ ಇದು ಒಂಬತ್ತನೇ ಸಿನಿಮಾ. ತೆಲುಗು ಚಿತ್ರಂಗದಲ್ಲಿಯೂ ಸಹ ಉಪ್ಪಿ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಈ ಬಾರಿ ಸ್ಟಾರ್ ಹೀರೋ ಆಗಿಯೇ ಉಪ್ಪಿ ನಟಿಸಿದ್ದು ಈ ಸಿನಿಮಾದಿಂದ ಅವರಿಗೆ ತೆಲುಗಿನಲ್ಲಿ ಅಭಿಮಾನಿಗಳು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ..

ಅಪ್ಪಟ ಅಭಿಮಾನಿಯ ಪಾತ್ರದಲ್ಲಿ ರಾಮ್ ಪೋತಿನೇನಿ

ಸಿನಿಮಾನಲ್ಲಿ ಉಪೇಂದ್ರ ಸ್ಟಾರ್ ಹೀರೋ ಆಗಿ ನಟಿಸಿದ್ದಾರೆ. ಅವರ ಅಪ್ಪಟ ಅಭಿಮಾನಿಯ ಪಾತ್ರದಲ್ಲಿ ರಾಮ್ ಪೋತಿನೇನಿ ನಟಿಸಿದ್ದಾರೆ. ಇದು ಅಭಿಮಾನಿ ಮತ್ತು ಸ್ಟಾರ್ ಹೀರೋ ನಡೆಯುವ ಕಥೆ.

Upendra Andhra King Taluka movie event

ಈ ಚಿತ್ರವನ್ನ ಮಹೇಶ್ ಬಾಬು .ಪಿ ಡೈರೆಕ್ಷನ್ ಮಾಡಿದ್ದಾರೆ. ಇವರೇ ಕಥೆ ಬರೆದಿದ್ದಾರೆ. ಚಿತ್ರಕಥೆ ಕೂಡ ಇವರದ್ದೆ ಆಗಿದೆ. ರಾಹುಲ್ ರಾಮಕೃಷ್ಣ, ಮುರಳಿ ಶರ್ಮಾ, ರಾಜೀವ್ ಕನಕಾಲ, ರಾವ್ ರಮೇಶ್ ತಾರಾಬಳಗದಲ್ಲಿದ್ದಾರೆ. ಸಿನಿಮಾಕ್ಕೆ ವಿವೇಕ್ ಮತ್ತು ಮೆರ್ವೀನ್ ಸಂಗೀತ ನೀಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಅಡಿಯಲ್ಲಿ ನವೀನ್ ಯೆರ್ನೇನಿ, ವೈ. ರವಿಶಂಕರ್ ನಿರ್ಮಿಸಿದ್ದಾರೆ. ಇದೇ ತಿಂಗಳ‌ 27ಕ್ಕೆ ಚಿತ್ರ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Ekka OTT: ದೊಡ್ಮನೆ ಅಭಿಮಾನಿಗಳಿಗೆ ಮನರಂಜನೆ ಫಿಕ್ಸ್‌; OTTಗೆ ಎಂಟ್ರಿ ಕೊಡ್ತಿದೆ ʻಎಕ್ಕʼ ಸಿನಿಮಾ, ಸ್ಟ್ರೀಮಿಂಗ್‌ ಎಲ್ಲಿ?

ಆಂಧ್ರ ಕಿಂಗ್ ತಾಲೂಕಾ ಚಿತ್ರದ ಬಗ್ಗೆ ಉಪೇಂದ್ರ ಒಂದು ಪೋಸ್ಟ್ ಹಾಕಿದ್ದರು. ಈ ಪೋಸ್ಟರ್ ಅಲ್ಲಿ ಲೈನ್ ಬರೆದಿದ್ದರು. ನಿಮ್ಮನ್ನ ನೀವು ನೋಡಿಕೊಳ್ಬೇಕಾ? ಹಾಗಾದ್ರೆ ಆಂಧ್ರ ಕಿಂಗ್ ತಾಲೂಕಾ ಸಿನಿಮಾ ನೋಡಿ ಎಂದು ಹೇಳಿದ್ದರು.

Yashaswi Devadiga

View all posts by this author