B. Saroja Devi: ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ ನಿಧನ; 200 ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಅಭಿನಯ ಸರಸ್ವತಿ
ಹಿರಿಯ ನಟಿ ಬಿ. ಸರೋಜಾದೇವಿ (B. Sarojadevi) ಇಂದು ವಿಧಿವಶರಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಅಭಿನಯ ಶಾರದೆ ಎಂದು ಬಿರುದು ಪಡೆದುಕೊಂಡಿದ್ದ ಇವರು ಹಲವು ಭಾಷೆಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.


ಬೆಂಗಳೂರು: ಹಿರಿಯ ನಟಿ ಬಿ. ಸರೋಜಾದೇವಿ (B. Sarojadevi) ಇಂದು (87) ವಿಧಿವಶರಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಅಭಿನಯ ಶಾರದೆ ಎಂದು ಬಿರುದು ಪಡೆದುಕೊಂಡಿದ್ದ ಇವರು ಹಲವು ಭಾಷೆಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು 1955 ರಿಂದ 2020 ರವರೆಗೆ ಚಿತ್ರರಂಗದಲ್ಲಿದ್ದರು. ಸುದೀರ್ಘ 29 ವರ್ಷಗಳ ಕಾಲ ಚಿತ್ರಗಳಲ್ಲಿ ನಟಿಸಿದ್ದಾರೆ.
ಸರೋಜಾದೇವಿ ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಮಹಾಕವಿ ಕಾಳಿದಾಸ, ಕಿತ್ತೂರು ಚೆನ್ನಮ್ಮ, ಅಣ್ಣಾ ತಮ್ಮ, ಭಕ್ತ ಕನಕದಾಸ, ಬಾಳೇ ಬಂಗಾರ, ನಾಗಕನ್ಯೆ, ಬೆಟ್ಟದ ಹೂವು, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ನಾಡೋಡಿ ಮನ್ನನ್, ಕರ್ಪೂರ ಕರಸಿ, ಪಾಂಡುರಂಗ ಮಹಾತ್ಯಂ, ತಿರುಮಣಂ ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದರು. ಕೊನೆಯದಾಗಿ 2020 ರಲ್ಲಿ ಪುನೀತ್ ರಾಜ್‌ಕುಮಾರ್ ಅಭಿನಯದ ನಟ ಸಾರ್ವಭೌಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
ಸರೋಜಾದೇವಿ ಬಾಲ್ಯ
1938ರ ಜನವರಿ 7ರಂದು ಬೆಂಗಳೂರಿನಲ್ಲಿ ಇವರ ಜನನವಾಯಿತು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್ವೈಫ್ ಆಗಿದ್ದರು. ಬಾಲ್ಯದಿಂದಲೇ ಕಲೆ ಹಾಗೂ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಇವರಿಗೆ ತಂದೆಯ ಪ್ರೋತ್ಸಾಹ ದೊರಕಿತ್ತು. ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.
ಈ ಸುದ್ದಿಯನ್ನೂ ಓದಿ: KB Ganapathy: ಹಿರಿಯ ಪತ್ರಕರ್ತ ಕೆಬಿ ಗಣಪತಿ ನಿಧನ, ಕೆಯುಡಬ್ಲ್ಯೂಜೆ ಸಂತಾಪ
1955ರಲ್ಲಿ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು. ನಂತರ ಇವರ ನಟನೆಯನ್ನು ನೋಡಿ ಅನೇಕ ಅವಕಾಶಗಳು ದೊರೆತವು. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ತೆಲಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಅವರ ವೃತ್ತಿ ಬದುಕಿನಲ್ಲಿ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದರು.