Vidyapathi Movie: ಮಲೈಕಾ ಬರ್ತ್‌ಡೇಗೆ 'ವಿದ್ಯಾಪತಿ' ಫಸ್ಟ್ ಝಲಕ್ ರಿಲೀಸ್; ನಾಗಭೂಷಣ್‌ಗೆ ಸೂಪರ್ ಸ್ಟಾರ್ ವಿದ್ಯಾ ಜೋಡಿ
ʼಉಪಾಧ್ಯಕ್ಷʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಬಲಗಾಲಿಟ್ಟು ಪ್ರವೇಶಿಸಿದ್ದ ಮಲೈಕಾ ವಸುಪಾಲ್ ಸದ್ಯ ನಾಗಭೂಷಣ್ ಅವರಿಗೆ ಜೋಡಿಯಾಗಿ ʼವಿದ್ಯಾಪತಿʼ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸದ್ಯ ಶೂಟಿಂಗ್ ನಡೆಯುತ್ತಿದೆ. ಇದೀಗ ಚಿತ್ರತಂಡ ಅವರ ಹುಟ್ಟುಹಬ್ಬದ ವಿಶೇಷವಾಗಿ ಫಸ್ಟ್ ಲುಕ್ ರಿಲೀಸ್ ಮಾಡಿದೆ.
![ಮಲೈಕಾ ಬರ್ತ್‌ಡೇಗೆ 'ವಿದ್ಯಾಪತಿ' ಫಸ್ಟ್ ಝಲಕ್ ರಿಲೀಸ್](https://cdn-vishwavani-prod.hindverse.com/media/original_images/Vidyapathi_Movie_1.jpg)
![Profile](https://vishwavani.news/static/img/user.png)
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಹಿಟ್ಲರ್ ಕಲ್ಯಾಣ' ಧಾರಾವಾಹಿಯಲ್ಲಿ ಎಡವಟ್ಟು ರಾಣಿ ಲೀಲಾ ಆಗಿ ನಟಿಸಿ ಸೈ ಎನಿಸಿಕೊಂಡ ಬೆಡಗಿ ಮಲೈಕಾ ವಸುಪಾಲ್ (Malaika Vasupal) ಕಳೆದ ವರ್ಷ ಚಿಕ್ಕಣ್ಣ ನಾಯಕನಾಗಿ ನಟಿಸಿ ʼಉಪಾಧ್ಯಕ್ಷʼ ಸಿನಿಮಾ ಮೂಲಕ ಸ್ಯಾಂಡಲ್ ವುಡ್‌ಗೆ ಬಲಗಾಲಿಟ್ಟು ಪ್ರವೇಶಿಸಿದ್ದರು. ಚಿಕ್ಕಣ್ಣನಿಗೆ ಜೋಡಿಯಾಗಿ ಮಿಂಚಿದ್ದ ಬ್ಯೂಟಿ ಈಗ ʼವಿದ್ಯಾಪತಿʼ ಸಿನಿಮಾ (Vidyapathi Movie)ದಲ್ಲಿ ನಾಗಭೂಷಣ್ ಜತೆ ನಟಿಸುತ್ತಿದ್ದಾರೆ. ಬುಧವಾರ (ಫೆ. 12) ಮಲೈಕಾ ವಸುಪಾಲ್ ಜನ್ಮದಿನ. ಅವರ ಹುಟ್ಟುಹಬ್ಬದ ವಿಶೇಷವಾಗಿ 'ವಿದ್ಯಾಪತಿ' ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ.
ಹೌದು, ʼವಿದ್ಯಾಪತಿʼ ಸಿನಿಮಾದಲ್ಲಿನ ಮಲೈಕಾ ಅವರ ಮೊದಲ ಝಲಕ್ ಅನಾವರಣ ಮಾಡಲಾಗಿದೆ. ಸಿನಿಮಾದಲ್ಲಿನ ಸಿನಿಮಾ ನಾಯಕಿಯಾಗಿ ಮಲೈಕಾ ಅಭಿನಯಿಸುತ್ತಿದ್ದಾರೆ. ಅಂದರೆ ಸೂಪರ್ ಸ್ಟಾರ್ ವಿದ್ಯಾ ಪಾತ್ರಕ್ಕೆ ʼಉಪಾಧ್ಯಕ್ಷʼ ಸುಂದರಿ ಬಣ್ಣ ಹಚ್ಚಿದ್ದಾರೆ. ಕರಾಟೆ ಗೆಟಪ್ ತೊಟ್ಟಿರುವ ನಾಯಕ ನಾಗಭೂಷಣ್ ಗೆ ಮಲೈಕಾ ವಸುಪಾಲ್ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. ನಾಗಭೂಷಣ್ ಎದುರು ಗರುಡ ರಾಮ್ ವಿಲನ್ ಆಗಿ ಅಬ್ಬರಿಸಲಿದ್ದಾರೆ. ಕರಾಟೆ ಮಾಸ್ಟರ್ ಅವತಾರದಲ್ಲಿ ರಂಗಾಯಣ ರಘು ನಟಿಸುತ್ತಿರುವುದು ಚಿತ್ರದ ಮತ್ತೊಂದು ವಿಶೇಷ.
ಆ್ಯಕ್ಷನ್, ಕಾಮಿಡಿ ಕತೆ ಹೊಂದಿರುವ ಈ ಚಿತ್ರವನ್ನು ಇಶಾಂ ಹಾಗೂ ಹಸೀಂ ಖಾನ್ ನಿರ್ದೇಶನ ಮಾಡುತ್ತಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಕೋಡ್ ಸಂಗೀತ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ಚಿತ್ರಕ್ಕಿದೆ.
ಡಾಲಿ ಧನಂಜಯ್ ಅವರ ಡಾಲಿ ಪಿಕ್ಚರ್ಸ್ ನಿರ್ಮಾಣದ ಬಹುನಿರೀಕ್ಷಿತ ʼವಿದ್ಯಾಪತಿʼ ಚಿತ್ರ ಏ. 10ರಂದು ತೆರೆಗೆ ಬರಲಿದೆ.
ʼಕರುನಾಡ ಕಣ್ಮಣಿʼ ಶೂಟಿಂಗ್ ಮಾರ್ಚ್‌ನಲ್ಲಿ ಆರಂಭ
ಅಮೋಘ ಅಭಿನಯದ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಜನಪ್ರಿಯ ನಟ ಚರಣ್ ರಾಜ್ ಅವರು ನಿರ್ದೇಶಿಸಲಿರುವ ನೂತನ ಚಿತ್ರವೊಂದು ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, ABCR ಫಿಲಂ ಫ್ಯಾಕ್ಟರಿ ಬ್ಯಾನರ್‌ನಲ್ಲಿ ಅಶ್ವಥ್ ಬಳಗೆರೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹುಭಾಷಾ ನಟ ಕಿಶೋರ್ ಸಹ ಈ ಚಿತ್ರದಲ್ಲಿ ನಟಿಸಲಿದ್ದು, ಚರಣ್ ರಾಜ್ ಅವರ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಸಾಗರ್ ಗುರುರಾಜ್ ಸಂಗೀತ ನಿರ್ದೇಶನ ಹಾಗೂ ಪೃಥ್ವಿ ಛಾಯಾಗ್ರಹಣವಿರುವ ಈ ನೂತನ ಚಿತ್ರದ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.
ಈ ಸುದ್ದಿಯನ್ನೂ ಓದಿ: Meghana Shankarappa: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾರಾಮ ಧಾರಾವಾಹಿಯ ನಟಿ ಮೇಘನಾ ಶಂಕರಪ್ಪ
ಇದೊಂದು ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ನಾನೇ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದೇನೆ. ಈ ಚಿತ್ರದ ಬಹುತೇಕ ಚಿತ್ರೀಕರಣ ಕಾಲೇಜ್‌ನಲ್ಲೇ ನಡೆಯಲಿದ್ದು, ಕಾಲೇಜ್ ರಜಾ ಶುರುವಾದ ತಕ್ಷಣ ನಮ್ಮ ಚಿತ್ರದ ಚಿತ್ರೀಕರಣ ಸಹ ಆರಂಭವಾಗಲಿದೆ. ಕನ್ನಡದ ಚಿತ್ರೀಕರಣ ಬೆಂಗಳೂರಿನಲ್ಲಿ, ತಮಿಳಿನ ಚಿತ್ರೀಕರಣ ಪಾಂಡಿಚೇರಿ ಹಾಗೂ ಕಡಲೂರಿನಲ್ಲಿ ಮತ್ತು ತೆಲುಗು ಭಾಷೆಯ ಚಿತ್ರೀಕರಣ ಹೊಂಗನೂರು ಮುಂತಾದ ಕಡೆ ನಡೆಯಲಿದೆ.