Vijaya lakshmi darshan: ಅಣ್ಣಮ್ಮ ದೇವಿ ದೇವಸ್ಥಾನದಲ್ಲಿ ಹರಕೆ ಸಲ್ಲಿಸಿದ ವಿಜಯಲಕ್ಷ್ಮಿ ; ದರ್ಶನ್‌ಗಾಗಿ ವಿಶೇಷ ಪೂಜೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪತಿಯ ಶ್ರೇಯಸ್ಸಿಗಾಗಿ ಈಗಾಗಲೇ ಹಲವು ದೇವಾಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇದೀಗ ಅವರ ಟೆಂಪಲ್ ರನ್ ಮುಂದುವರಿದಿದ್ದು, ಶುಕ್ರವಾರ ಮೆಜೆಸ್ಟಿಕ್ನಲ್ಲಿರುವ ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಇಂದು ಅವರು ದೇವಿಗೆ ಹರಕೆ ಸಲ್ಲಿಸಿದ್ದಾರೆ.


ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijaya lakshmi darshan) ಅವರು ಪತಿಯ ಶ್ರೇಯಸ್ಸಿಗಾಗಿ ಈಗಾಗಲೇ ಹಲವು ದೇವಾಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇದೀಗ ಅವರ ಟೆಂಪಲ್ ರನ್ ಮುಂದುವರಿದಿದ್ದು, ಶುಕ್ರವಾರ ಮೆಜೆಸ್ಟಿಕ್ನಲ್ಲಿರುವ ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಇಂದು ಅವರು ದೇವಿಗೆ ಹರಕೆ ಸಲ್ಲಿಸಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ವಿಜಯಲಕ್ಷ್ಮಿ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಇದೀಗ ಅಣ್ಣಮ್ಮ ದೇವಿಗೆ ದರ್ಶನ್ ಪತ್ನಿ ಹರಕೆ ಸಲ್ಲಿಸಿದ್ದಾರೆ. ಅಣ್ಣಮ್ಮ ದೇವಿಗೆ ಸೀರೆ ಜೊತೆ ಮಡಿಲಕ್ಕಿ ತುಂಬಿ ಹರಕೆ ತೀರಿಸಿದ್ದಾರೆ. ವಿಶೇಷವಾಗಿ ಕುಟುಂಬಸ್ಥರ ಹೆಸರಿನಲ್ಲಿ ವಿಜಯಲಕ್ಷ್ಮಿ ಅವರು ಪೂಜೆ ಮಾಡಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲಿನಲ್ಲಿದ್ದಾಗ ಅವರ ಸಹೋದರ ದಿನಕರ್ ತೂಗುದೀಪ್ ಕೂಡ ಅಣ್ಣಮ್ಮ ದೇವಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದ್ದರು. ಇದೀಗ ವಿಜಯಲಕ್ಷ್ಮಿ ಹರಕೆ ತೀರಿಸಿದ್ದಾರೆ. ಬೆಳಗ್ಗೆ ಅಣ್ಣಮ್ಮ ದೇವಾಸ್ಥಾನಕ್ಕೆ ಭೇಟಿ ಕೊಟ್ಟಿದ್ದ ವಿಜಯಲಕ್ಷ್ಮಿ ದೇವಿಗೆ ವಿಶೇಷ ಅಭಿಷೇಕ ಮಾಡಿದ್ದಾರೆ. ದರ್ಶನ್ ಕುಟುಂಬಸ್ಥರ ಹೆಸರು ಹೇಳಿ ಅರ್ಚನೆಯನ್ನೂ ಮಾಡಿಸಿದ್ದಾರೆ.
ಕಳೆದ ತಿಂಗಳು ಮಾ. 2 ರಂದು ಪಾಂಡವಪುರದಲ್ಲಿ ಬೇಬಿಬೆಟ್ಟ ಜಾತ್ರಾ ಮಹೋತ್ಸವದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಜಯಲಕ್ಷ್ಮಿ24 ಮಂದಿ ನವ ವಧು-ವರರಿಗೆ ಮಾಂಗಲ್ಯ ನೀಡಿ ಶುಭಕೋರಿದ್ದರು. ನಟ ಧನ್ವೀರ್ ಅವರು ವಾಚ್ ವಿತರಣೆ ಮಾಡಿದರೆ, ಹಾಸ್ಯನಟ ಚಿಕ್ಕಣ್ಣ ಅವರು ಸೀರೆ, ಪಂಚೆ-ಶರ್ಟ್ ವಿತರಣೆ ಮಾಡಿದ್ದಾರೆ. ವಿಜಯಲಕ್ಷ್ಮಿದರ್ಶನ್ ಮಾತನಾಡಿ, ಸರಳ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿ ದಾಂಪತ್ಯ ಜೀವನಕ್ಕೆ ಕಾಲಿಟುತ್ತಿರುವುದು ಒಳ್ಳೆಯ ನಿರ್ಧಾರ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು ಜೀವನ ಸುಖ, ನೆಮ್ಮದಿ ದೊರಕಲಿ, ರೈತರು ಮತ್ತು ರೈತರ ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದ್ದಾರೆ.
ಈ ಸುದ್ದಿಯನ್ನೂ ಓದಿ: Star Fashion: ಫ್ಯಾಷನ್ ಪ್ರಿಯ ಮಾನಿನಿಯರನ್ನು ಸೆಳೆದ ವಿಜಯಲಕ್ಷ್ಮಿ ದರ್ಶನ್‌ರವರ ದಾವಣಿ-ಲಂಗ ಶೈಲಿಯ ಲೆಹೆಂಗಾ
ದರ್ಶನ್ ಜೈಲಿನಿಂದ ಬಿಡುಗಡೆಯಾದ ಬಳಿಕ ವಿಜಯಲಕ್ಷ್ಮಿ ಹಲವಾರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಡೆವಿಲ್ ಶೂಟಿಂಗ್‌ನಲ್ಲಿ ದರ್ಶನ್ ಜೊತೆ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಕೂಡ ಭಾಗಿಯಾಗಿದ್ದರು. ಕಳೆದ ವಾರ ಏ.4ರಂದು ಬೆಂಗಳೂರಿಗೆ ಚಿತ್ರೀಕರಣ ಮುಗಿಸಿ ವಾಪಸ್ ಆದರು.