ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದರ್ಶನ್ ಜೊತೆ ಮುಖಾಮುಖಿ ಭೇಟಿಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ- ಪುತ್ರ ವಿನೀಶ್

ಸ್ಯಾಂಡಲ್‌ವುಡ್ ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಇಂದು 23ನೇ ವಿವಾಹ ವಾರ್ಷಿಕೋತ್ಸವ. ಅದರ ಅಂಗವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಪುತ್ರ ವಿನೀಶ್ ಜೊತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಮುಖಾಮುಖಿ ಭೇಟಿ ಆಗಲಿದ್ದಾರೆ. ಇದೇ ವೇಳೆ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣಗಳ ವದಂತಿಗಳನ್ನು ಡಿಜಿಪಿ ಅಲೋಕ್‌ ಕುಮಾರ್‌ ತಳ್ಳಿಹಾಕಿದ್ದಾರೆ.

ಸ್ಯಾಂಡಲ್‌ವುಡ್ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ದಂಪತಿಗೆ ಇಂದು (ಮೇ 19) 23ನೇ ವಿವಾಹ ವಾರ್ಷಿಕೋತ್ಸವ. ಈ ವಿಶೇಷ ದಿನದಂದು ಪತಿ ದರ್ಶನ್ ಅವರನ್ನು ಭೇಟಿಯಾಗಲು ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ‌ಆಗಮಿಸಿದ್ದರು.

ಬಹಳ ದಿನಗಳ ನಂತರ ಮುಖಾಮುಖಿ ಭೇಟಿ

ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ವಿಜಯಲಕ್ಷ್ಮಿ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ದರ್ಶನ್ ಅವರನ್ನು ನೆನೆದು ಅತ್ಯಂತ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಪತಿಯ ಕಷ್ಟದ ದಿನಗಳಲ್ಲಿ ಅವರಿಗೆ ಬೆನ್ನೆಲುಬಾಗಿ ನಿಂತಿರುವ ವಿಜಯಲಕ್ಷ್ಮಿ, ಜೈಲಿನಲ್ಲೇ ಇರುವ ಪತಿಗೆ ಧೈರ್ಯ ತುಂಬಲು ಮತ್ತು ಈ ವಿಶೇಷ ದಿನವನ್ನು ಜೊತೆಯಾಗಿ ಕಳೆಯಲು ಜೈಲಾಧಿಕಾರಿಗಳ ಅನುಮತಿಯೊಂದಿಗೆ ಭೇಟಿಗೆ ಸಜ್ಜಾಗಿದ್ದಾರೆ. ಮಧ್ಯಾಹ್ನ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಇಬ್ಬರೂ ಜೈಲಿನಲ್ಲಿ ದರ್ಶನ್ ಅವರನ್ನು ಮುಖಾಮುಖಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

Actor Darshan: ಸವಲತ್ತು ಕೋರಿದ ದರ್ಶನ್‌ ಅರ್ಜಿ 9ಕ್ಕೆ ಮುಂದೂಡಿಕೆ, ʼಉಮೇಶ್‌ ರೆಡ್ಡಿಗೆ ಕೊಟ್ಟ ಸೌಲಭ್ಯ ದರ್ಶನ್‌ಗೆ ಏಕಿಲ್ಲ?ʼ ಎಂದ ವಕೀಲರು

ಡಿಜಿಪಿಗೆ ಮನವಿ ಮಾಡಿದ್ದ ವಿಜಯಲಕ್ಷ್ಮಿ

ತಮ್ಮ ವಿವಾಹ ವಾರ್ಷಿಕೋತ್ಸವದಂದು ದರ್ಶನ್‌ ಅವರನ್ನು ಮುಖಾಮುಖಿ ಭೇಟಿ ಮಾಡಲು ಅವಕಾಶ ನೀಡುವಂತೆ ವಿಜಯಲಕ್ಷ್ಮಿ ಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ವಿನಂತಿ ಮಾಡಿದ್ದರು. ಕೆಲ ದಿನಗಳ ಹಿಂದಷ್ಟೇ ಖುದ್ದಾಗಿ ಡಿಜಿಪಿ ಅಲೋಕ್ ಕುಮಾರ್ ಅವರನ್ನು ಭೇಟಿ ಮಾಡಿ, ಈ ಮನವಿಯನ್ನು ನೀಡಿದ್ದರು.

ಆ ಬಗ್ಗೆ ಪ್ರತಿಕ್ರಿಯಿಸಿದ್ದ ಅಲೋಕ್‌ ಕುಮಾರ್‌, "ಜೈಲು ನಿಯಮಗಳ ಪ್ರಕಾರ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದು ತಿಳಿಸಿದ್ದರು. ಇಂದು ದರ್ಶನ್‌ ಮತ್ತು ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅನುಮತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ದರ್ಶನ್‌ ಅವರ ಜಾಮೀನು ಅರ್ಜಿಯು ಸುಪ್ರೀಂ ಕೋರ್ಟ್‌ನಲ್ಲಿ ರಿಜೆಕ್ಟ್‌ ಆಗಿದ್ದು, 2027ರ ಮೇ 15ರ ಮೇಲೆ ಅವರು ಜಾಮೀನಿಗೆ ಅರ್ಜಿ ಹಾಕಬೇಕಿದೆ.

Actor Darshan: ವಿವಾಹ ವಾರ್ಷಿಕೋತ್ಸವ; ವಿಜಯಲಕ್ಷ್ಮಿ ದರ್ಶನ್‌ ಭಾವುಕ!

ವದಂತಿಗಳಿಗೆ ಬ್ರೇಕ್‌ ಹಾಕಿದ ಅಲೋಕ್‌ ಕುಮಾರ್‌

ಈ ಮಧ್ಯೆ ದರ್ಶನ್‌ ಅವರ ಬಗ್ಗೆ ಕೆಲವೊಂದಿಷ್ಟು ವದಂತಿಗಳು ಹರಿದಾಡಿದ್ದವು. ಆ ಬಗ್ಗೆ ಸ್ಪಷ್ಟನೆ ನೀಡಿರುವ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕ ಅಲೋಕ್‌ ಕುಮಾರ್‌, "ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಇದರಿಂದ ಅಭಿಮಾನಿಗಳಲ್ಲಿ ಆತಂಕ ಮೂಡಿದೆ. ಇದು ಸುಳ್ಳು ಸುದ್ದಿ. ಯಾರೂ ಆತಂಕ ಪಡುವುದು ಬೇಡ. ಈ ಗಾಳಿಸುದ್ದಿಗಳಿಗೆ ಕಿವಿ ಕೊಡಬೇಡಿ. ದರ್ಶನ್‌ ಅವರು ಚೆನ್ನಾಗಿದ್ದಾರೆ" ಎಂದು ಹೇಳಿದ್ದಾರೆ.