ರಾಜಸ್ಥಾನದಲ್ಲಿ ದಾಖಲಾಗಿರುವ 30 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ (Vikram Bhatt ) ಉದಯಪುರ ಪೊಲೀಸರು ಭಾನುವಾರ (ಡಿ.೭) ಜನಪ್ರಿಯ ಚಲನಚಿತ್ರ ನಿರ್ಮಾಪಕ ವಿಕ್ರಮ್ ಭಟ್ ಮತ್ತು ಅವರ ಪತ್ನಿಯನ್ನು ಮುಂಬೈನಿಂದ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಭಟ್, ಅವರ ಪತ್ನಿ ಶ್ವೇತಾಂಬರಿ ಭಟ್ ಮತ್ತು ಇತರ ಆರು ಮಂದಿ ವಿರುದ್ಧ ಉದಯಪುರ ಮೂಲದ ಡಾ. ಅಜಯ್ ಮುರ್ದಿಯಾ ಅವರಿಗೆ 30 ಕೋಟಿ ರೂ. ವಂಚನೆ ಮಾಡಿದ ಆರೋಪವಿದೆ ಎಂದು ಅಧಿಕಾರಿ (Cheating Doctor) ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆ ಇಬ್ಬರನ್ನು ಬಂಧಿಸಲಾಗಿತ್ತು ಎಂದು ಅವರು ಹೇಳಿದರು.
ಇಂದಿರಾ ಗ್ರೂಪ್ ಆಫ್ ಕಂಪನಿಗಳ ಸಂಸ್ಥಾಪಕ ಉದಯಪುರ ಮೂಲದ ಡಾ. ಅಜಯ್ ಮುರ್ದಿಯಾ ಅವರಿಗೆ 30 ಕೋಟಿ ರೂ. ವಂಚನೆ ಮಾಡಿರುವ ಪ್ರಕರಣ ಇದಾಗಿದ್ದು, ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ವಿಕ್ರಮ್ ಭಟ್ ಬಾಲಿವುಡ್‌ನ ಸ್ಟಾರ್ ನಿರ್ದೇಶಕ ಫರೇಬ್', ಗುಲಾಮ್ ,ಕಸೂರ್', ಆಪ್ ಮುಝೇ ಅಚ್ಚೆ ಲಗನೇ ಲಗೇ''.. ''ಆವಾರಾ ಪಾಗಲ್ ದಿವಾನಾ''.. ''ದಿವಾನೆ ಹುಯೇ ಪಾಗಲ್''.. ಹೀಗೆ ಹಲವು ಸಿನಿಮಾಗಳನ್ನು ಮಾಡಿದ್ದಾರೆ.
ಅಂಧೇರಿ ಪಶ್ಚಿಮದಲ್ಲಿ ಸಂಬಂಧಿಕರ ಮನೆಯಲ್ಲಿದ್ದ ವಿಕ್ರಮ್ ಭಟ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಕೇವಲ ವಿಕ್ರಮ್ ಭಟ್ ಮಾತ್ರವಲ್ಲದೇ ಅವರ ಪತ್ನಿ ಶ್ವೇತಾಂಬರಿ ಭಟ್ ಅವರನ್ನು ಕೂಡ ಪೊಲೀಸರು ಬಂಧಿಸಿದ್ದು ಟ್ರಾನ್ಸಿಟ್ ರಿಮಾಂಡ್ ಪಡೆದ ನಂತರ ಉದಯಪುರಕ್ಕೆ ಕರೆದೊಯ್ದಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಉದಯಪುರ ಪೊಲೀಸರ ತಂಡವು ಭಾನುವಾರ ವಿಕ್ರಮ್ ಭಟ್ ಮತ್ತು ಶ್ವೇತಾಂಬರಿ ಅವರನ್ನು ಬಂಧಿಸಿದೆ ಎಂದು ಅವರು ಹೇಳಿದರು.
ಬಯೋಪಿಕ್ ಸಿನಿಮಾ
"ಇಂದಿರಾ ಐವಿಎಫ್ ಆಸ್ಪತ್ರೆಯ ಮಾಲೀಕರಾದ ಮುರ್ದಿಯಾ, ತಮ್ಮ ದಿವಂಗತ ಪತ್ನಿಯ ಬಯೋಪಿಕ್ ಸಿನಿಮಾ ನಿರ್ಮಿಸಲು ಬಯಸಿದ್ದರು. 200 ಕೋಟಿ ರೂಪಾಯಿಗಳ ಗಳಿಕೆಯ ಭರವಸೆ ನೀಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ಆದರೆ ಏನೂ ಕಾರ್ಯರೂಪಕ್ಕೆ ಬರಲಿಲ್ಲ, ನಂತರ ಮುರ್ದಿಯಾ ಉದಯಪುರದ ಭೋಪಾಲ್‌ಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರು, ಅಲ್ಲಿ ವಂಚನೆ ಮತ್ತು ಇತರ ಅಪರಾಧಗಳಿಗಾಗಿ ಎಫ್‌ಐಆರ್ ದಾಖಲಿಸಲಾಗಿದೆ" ಎಂದು ಅಧಿಕಾರಿ ಹೇಳಿದರು.
ಸಂಜೆ ನಂತರ ಉದಯಪುರ ಪೊಲೀಸರು ಭಟ್ ಮತ್ತು ಅವರ ಪತ್ನಿಯನ್ನು ಡಿಸೆಂಬರ್ 9 ರವರೆಗೆ ಟ್ರಾನ್ಸಿಟ್ ರಿಮಾಂಡ್ ಪಡೆದರು. ದಂಪತಿ ವಕೀಲರಾದ ರಾಕೇಶ್ ಸಿಂಗ್ ಮತ್ತು ಸಂಜಯ್ ಸಿಂಗ್, ರಾಜಸ್ಥಾನ ಪೊಲೀಸರು ಸೂಕ್ತ ಅನುಮತಿಯಿಲ್ಲದೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪೊಲೀಸರು ಹೇಳೋದೇನು?
ಮೇ 2024 ರಲ್ಲಿ ಮುರ್ದಿಯಾ ಮತ್ತು ಭಟ್ ದಂಪತಿಗಳ ನಡುವೆ ಜೀವನಚರಿತ್ರೆ ಸೇರಿದಂತೆ ಒಟ್ಟು ನಾಲ್ಕು ಚಲನಚಿತ್ರಗಳನ್ನು ನಿರ್ಮಿಸಲು ಒಪ್ಪಂದವನ್ನು ಸಿದ್ಧಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು ಒಪ್ಪಂದದ ಮೌಲ್ಯ 47 ಕೋಟಿ ರೂ.ಗಳಾಗಿದ್ದು, ಮೊದಲ ಎರಡು ಯೋಜನೆಗಳು ಪೂರ್ಣಗೊಂಡಿವೆ ಎಂದು ವರದಿಯಾಗಿದ್ದರೂ, ಉಳಿದ ಚಲನಚಿತ್ರಗಳನ್ನು ಮಾಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ, ರಾಜಸ್ಥಾನ ಪೊಲೀಸರು ಆರೋಪಿಗಳನ್ನು ಮುಂಬೈನಿಂದ ಉದಯಪುರಕ್ಕೆ ರಸ್ತೆ ಮೂಲಕ ಹೆಚ್ಚಿನ ವಿಚಾರಣೆ ಮತ್ತು ಕಾನೂನು ಕ್ರಮಗಳಿಗಾಗಿ ಸಾಗಿಸಲು ಎರಡು ದಿನಗಳ ಕಾಲ ಟ್ರಾನ್ಸಿಟ್ ರಿಮಾಂಡ್ ಕೋರಿದರು.
ಬಂಧನಕ್ಕೆ ಕಾರಣಗಳನ್ನು ಆರೋಪಿಗಳಿಗೆ ಸರಿಯಾಗಿ ತಿಳಿಸಲಾಗಿಲ್ಲ ಎಂದು ದಂಪತಿ ವಕೀಲರಾದ ರಾಕೇಶ್ ಸಿಂಗ್ ಮತ್ತು ಸಂಜಯ್ ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದರು.