Ahmedabad Plane Crash: ನನ್ನ ಚಿಕ್ಕಪ್ಪ ಮಗನನ್ನು ಕಳೆದುಕೊಂಡರು; ಪೈಲಟ್ ಕುಂದರ್ ಕುರಿತು ಭಾವುಕ ಪೋಸ್ಟ್ ಮಾಡಿದ ನಟ
ಜೂನ್ 12 ರಂದು ಅಹಮದಾಬಾದ್‌ನಲ್ಲಿ (Ahmedabad Plane Crash) ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ವಿಮಾನದ ಸಿಬ್ಬಂದಿಗಳು ಸೇರಿ 241 ಜನರು ಮೃತಪಟ್ಟಿದ್ದಾರೆ. ಬಾಲಿವುಡ್ ನಟ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ತಮ್ಮ ಕುಟುಂಬ ಸ್ನೇಹಿತ ಕ್ಲೈವ್ ಕುಂದರ್ ಕೂಡ ಸೇರಿದ್ದಾರೆ ಎಂದು ಹೇಳಿದ್ದಾರೆ.


ಗಾಂಧೀನಗರ: ಜೂನ್ 12 ರಂದು ಅಹಮದಾಬಾದ್‌ನಲ್ಲಿ (Ahmedabad Plane Crash) ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ವಿಮಾನದ ಸಿಬ್ಬಂದಿಗಳು ಸೇರಿ 241 ಜನರು ಮೃತಪಟ್ಟಿದ್ದಾರೆ. ಬಾಲಿವುಡ್ ನಟ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ತಮ್ಮ ಕುಟುಂಬ ಸ್ನೇಹಿತ ಕ್ಲೈವ್ ಕುಂದರ್ ಕೂಡ ಸೇರಿದ್ದಾರೆ ಎಂದು ಹೇಳಿದ್ದಾರೆ. ಇಂದು ಅಹಮದಾಬಾದ್‌ನಲ್ಲಿ ನಡೆದ ಊಹಿಸಲಾಗದ ದುರಂತ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗಾಗಿ ನನ್ನ ಹೃದಯ ಒಡೆದು ಹೋಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ನನ್ನ ಅಂಕಲ್ ಕ್ಲಿಫರ್ಡ್ ಕುಂದರ್ ಅದೇ ಫೈಟ್‌ನಲ್ಲಿ ಪೈಲಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಗ ಕ್ಲೈವ್ ಕುಂದರ್ ಅವರನ್ನು ಕಳೆದುಕೊಂಡರು ಎಂದು ತಿಳಿದು ಇನ್ನಷ್ಟು ನೋವುಂಟಾಗಿದೆ. ದೇವರು ನಿಮಗೆ ಮತ್ತು ನಿಮ್ಮ ಕುಟುಂಬದ ಸದಸ್ಯರಿಗೆ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ವಿಕ್ರಾಂತ್ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಬರೆದಿದ್ದಾರೆ. ವಿಮಾನ ದುರಂತ ಸಂಭವಿಸುತ್ತಿದ್ದಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದರು. ಅಹಮದಾಬಾದ್‌ನಲ್ಲಿ ನಡೆದ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ ಎಂದು ಮೋದಿ ಹೇಳಿದ್ದಾರೆ.
ಘಟನೆಯಲ್ಲಿ ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ 241 ಮಂದಿ ಮೃತಪಟ್ಟಿದ್ದಾರೆ. "ಅಹಮದಾಬಾದ್‌ನಿಂದ ಮಧ್ಯಾಹ್ನ 3.38 ಕ್ಕೆ ಹೊರಟ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ದಿತ್ತು. ಈ ಪೈಕಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ವಿಮಾನಯಾನ ಸಚಿವಾಲಯವು ಅಪಘಾತದ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಭರವಸೆ ನೀಡಿದೆ. ಅಧಿಕಾರಿಗಳು ಇನ್ನೂ ಘಟನೆಯ ಕಾರಣವನ್ನು ಬಿಡುಗಡೆ ಮಾಡಿಲ್ಲ, ಆದರೆ ತಜ್ಞರು ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ವೈಫಲ್ಯ ಸಂಭವಿಸಿರಬಹುದು ಎಂದು ಸೂಚಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Ahmedabad Plane Crash: ಗುಜರಾತ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ; 242 ಪ್ರಯಾಣಿಕರ ಪೈಕಿ ಓರ್ವ ಪವಾಡ ಸದೃಶ ಪಾರು
ಇಂದು ಬೆಳಿಗ್ಗೆ ಪ್ರಧಾನಿ ಮೋದಿ ಅಹಮದಾಬಾದ್ ವಿಮಾನ ಅಪಘಾತದಲ್ಲಿ ಗಾಯಾಳುಗಳನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಸಿವಿಲ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್ ಗೆ ಆಗಮಿಸಿದ್ದು, ಅಪಘಾತದ ಸ್ಥಳವನ್ನು ಪರಿಶೀಲಿಸಿದ್ದಾರೆ. ಬಳಿಕ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.