ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

B. SarojaDevi: ಸಾವಿಗೂ ಮುನ್ನ ಸರೋಜಾದೇವಿ ಅಂತಿಮ ಕ್ಷಣ ಹೇಗಿತ್ತು? ಅವರಿಗೆ ಏನಾಗಿತ್ತು?

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ. ಸರೋಜಾದೇವಿ (B.SarojaDevi) ಅವರು ಇಂದು (ಜು. 14) ಬೆಳಗ್ಗೆ 9 ಗಂಟೆಯ ವೇಳೆಗೆ ವಿಧಿವಶರಾಗಿದ್ದಾರೆ. 200 ಕ್ಕೂ ಅಧಿಕ ಚಿತ್ರದಲ್ಲಿ ಇವರು ಬಣ್ಣ ಹಚ್ಚಿದ್ದಾರೆ. ನಟಿಯ ಸಾವಿನ ಕುರಿತು ಅವರ ಮ್ಯಾನೇಜರ್‌ ವಿಜಯ್‌ ಕುಮಾರ್‌ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ಸಾವಿಗೂ ಮೊದಲು ಸರೋಜಾದೇವಿ ಕೊನೆಯದಾಗಿ ಮಾಡಿದ್ದೇನು?

Profile Vishakha Bhat Jul 14, 2025 3:24 PM

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ. ಸರೋಜಾದೇವಿ (B.SarojaDevi) ಅವರು ಇಂದು (ಜು. 14) ಬೆಳಗ್ಗೆ 9 ಗಂಟೆಯ ವೇಳೆಗೆ ವಿಧಿವಶರಾಗಿದ್ದಾರೆ. 200 ಕ್ಕೂ ಅಧಿಕ ಚಿತ್ರದಲ್ಲಿ ಇವರು ಬಣ್ಣ ಹಚ್ಚಿದ್ದಾರೆ. ನಟಿಯ ಸಾವಿನ ಕುರಿತು ಅವರ ಮ್ಯಾನೇಜರ್‌ ವಿಜಯ್‌ ಕುಮಾರ್‌ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಸರೋಜಾದೇವಿ ಅವರು ಪ್ರತಿನಿತ್ಯ ಬೆಳಗ್ಗೆ ಎದ್ದು ಪೇಪರ್‌ ಓದುತ್ತಿದ್ದರು. ನಂತರ ಸ್ನಾನ ಮಾಡಿ ಪೂಜೆ ಮಾಡಿ ತಿಂಡಿ ತಿನ್ನುತ್ತಿದ್ದರು. ಇಂದು ಸ್ನಾನ ಮಾಡಿ ಪೂಜೆ ಮಾಡಿದ ಬಳಿಕ ಬೆಳಗ್ಗೆ 9 ಗಂಟೆಯ ವೇಳೆಗೆ ಟಿವಿ ಆನ್‌ ಮಾಡಿ ನೋಡುತ್ತಿದ್ದರು.

ನಂತರ ಇಂದು ತುಂಬಾ ಸುಸ್ತು ಎಂದು ಹೇಳಿದ್ದಾರೆ. ಕೂಡಲೇ ಅವರು ಅರೆಪ್ರಜ್ಞಾವಸ್ಥೆಗೆ ಹೋದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ವಿಜಯ್‌ ಕುಮಾರ್‌ ತಿಳಿಸಿದ್ದಾರೆ. ಸರೋಜಾ ದೇವಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸರೋಜಾ ದೇವಿ ಅವರ ತಾಯಿಯನ್ನು ಎಲ್ಲಿ ಮಣ್ಣು ಮಾಡಲಾಗಿದೆಯೋ ಅಲ್ಲೇ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ವಿಜಯ್‌ ಕುಮಾರ್‌ ಹೇಳಿದ್ದಾರೆ.

ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧಾರ ತೆಗೆದುಕೊಂಡಿದ್ದಾರೆ. ನಟಿಯ ಅಂತಿಮ ದರ್ಶನಕ್ಕೆ ಹಲವಾರು ಕಲಾವಿದರು, ಗಣ್ಯರು ಆಮಿಸುತ್ತಿದ್ದಾರೆ. 1955ರಲ್ಲಿ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು. ನಂತರ ಇವರ ನಟನೆಯನ್ನು ನೋಡಿ ಅನೇಕ ಅವಕಾಶಗಳು ದೊರೆತವು. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ತೆಲಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಅವರ ವೃತ್ತಿ ಬದುಕಿನಲ್ಲಿ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದರು.

ಈ ಸುದ್ದಿಯನ್ನೂ ಓದಿ: ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು: ಬಸವರಾಜ ಬೊಮ್ಮಾಯಿ

ಸರೋಜಾದೇವಿ ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಮಹಾಕವಿ ಕಾಳಿದಾಸ, ಕಿತ್ತೂರು ಚೆನ್ನಮ್ಮ, ಅಣ್ಣಾ ತಮ್ಮ, ಭಕ್ತ ಕನಕದಾಸ, ಬಾಳೇ ಬಂಗಾರ, ನಾಗಕನ್ಯೆ, ಬೆಟ್ಟದ ಹೂವು, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ನಾಡೋಡಿ ಮನ್ನನ್, ಕರ್ಪೂರ ಕರಸಿ, ಪಾಂಡುರಂಗ ಮಹಾತ್ಯಂ, ತಿರುಮಣಂ ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದರು. ಕೊನೆಯದಾಗಿ 2020 ರಲ್ಲಿ ಪುನೀತ್‌ ರಾಜ್‌ಕುಮಾರ್‌ ಅಭಿನಯದ ನಟ ಸಾರ್ವಭೌಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.