Actor Darshan: ಮತ್ತೆ ಒಂದಾಗ್ತಾರಾ ಪವಿತ್ರ-ದರ್ಶನ್? ಮೊಬೈಲ್ ನಂಬರ್ ಎಕ್ಸ್ಚೇಂಜ್? ಕೋರ್ಟ್‌ನಲ್ಲಿ ಆಗಿದ್ದಾದರೂ ಏನು?
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಣದ ಆರೋಪಿಗಳು ಇಂದು 57ನೇ ಸಿಸಿಹೆಚ್ ಕೋರ್ಟ್‌ಗೆ (Actor Darshan) ಹಾಜರಾಗಿದ್ದರು. ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದರು. ಆರೋಪಿಗಳ ವಿರುದ್ಧ ಹೆಚ್ಚುವರಿ ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.


ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಣದ ಆರೋಪಿಗಳು ಇಂದು 57ನೇ ಸಿಸಿಹೆಚ್ ಕೋರ್ಟ್‌ಗೆ (Actor Darshan) ಹಾಜರಾಗಿದ್ದರು. ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದರು. ಆರೋಪಿಗಳ ವಿರುದ್ಧ ಹೆಚ್ಚುವರಿ ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. 57ನೇ ಸಿಸಿಹೆಚ್ ಕೋರ್ಟ್‌ಗೆ ಎ1 ಪವಿತ್ರ ಗೌಡ, (Pavitra Gowda) ಎ2 ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಹಾಜರಾಗಿದ್ದರು. ವಿಚಾರಣೆ ಮುಗಿಸಿ ಹೊರಗೆ ಬರುವಾಗ ಪವಿತ್ರಾ ಗೌಡ ಹಾಗೂ ದಶರ್ನ್ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯಾಯಾಲಯದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರುಗಳು ಪಕ್ಕ-ಪಕ್ಕದಲ್ಲೇ ನಿಂತಿದ್ದರಂತೆ. ಈ ಸಮಯದಲ್ಲಿ ಪರಸ್ಪರ ತುಸು ಸಮಯ ಮಾತನಾಡಿದ್ದಾರೆ. ವಿಚಾರಣೆ ಮುಗಿಸಿ ಹೊರಬಂದಾಗಲೂ ಸಹ ಇಬ್ಬರೂ ಒಟ್ಟಿಗೆ ಬಂದರಂತೆ. ಹೊರಗೆ ಬಂದಾಗಲೂ ಸಹ ಒಟ್ಟಿಗೆ ಲಿಫ್ಟ್ನಲ್ಲಿ ಬಂದರಂತೆ. ನಟ ದರ್ಶನ್ ಪವಿತ್ರಾ ಅವರನ್ನು ಸಂತೈಸಿದ್ದಾರೆ ಎಂದು ಹೇಳಲಾಗುತ್ತಿದೆ. ಪವಿತ್ರಾಗೌಡ ಅವರು ದುಂಬಾಲು ಬಿದ್ದು ಮಾತನಾಡಿಸಿದರು. ಕೈ ಹಿಡಿದು ಫೋನ್ ನಂಬರ್ ನೀಡುವಂತೆ ಒತ್ತಾಯ ಮಾಡಿದರು. ಕೊನೆಗೆ ದರ್ಶನ್ ಅವರು ತನ್ನ ಫೋನ್ ನಂಬರ್ ಅನ್ನ ಡಯಲ್ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ಪವಿತ್ರಾ ಹಾಗೂ ದರ್ಶನ್ ಇಬ್ಬರೂ ಕೆಲ ಸಮಯ ಮಾತನಾಡಿದ್ದಾರೆ ಎಂದು ಕೆಲ ಆಪ್ತ ಮೂಲಗಳು ತಿಳಿಸಿವೆ. ಜೈಲಿನಿಂದ ಹೊರ ಬಂದ ಬಳಿಕ ಪವಿತ್ರಾ ಹಾಗೂ ದರ್ಶನ್ ದೂರವಾಗಿದ್ದರು. ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮೀ ಜೊತೆ ಅನ್ಯೋನ್ಯವಾಗಿದ್ದರು. ವಿಜಯಕ್ಷ್ಮಿ ಅವರು ದರ್ಶನ್ ಅವರೊಟ್ಟಿಗೆ ನಿನ್ನೆಯಷ್ಟೆ ವಿವಾಹ ವಾರ್ಷಿಕೋತ್ಸವ ಆಚರಣೆ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮೀ ಹಾಗೂ ದರ್ಶನ್ ಮುದ್ದು ರಾಕ್ಷಸಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪತ್ನಿಗಾಗಿ ದರ್ಶನ್ ಹಿಂದಿ ಹಾಡೊಂದನ್ನು ಹಾಡಿದ್ದಾರೆ. ವಿಜಯಲಕ್ಷ್ಮಿ ಕೂಡ ಹಾಡು ಹಾಡುತ್ತಾ ಎಂಜಾಯ್ ಮಾಡಿದ್ದಾರೆ. ಈ ವಿಡಿಯೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಈ ಜೋಡಿ ಯಾವಾಗಲೂ ಹೀಗೆಯೇ ಇರಲಿ, ಈ ದಂಪತಿ ಮೇಲೆ ಯಾರ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಶುಭ ಹಾರೈಸಿದ್ದಾರೆ.
ಈ ಸುದ್ದಿಯನ್ನೂ ಓದಿ: Pavithra Gowda: ಮುಂದುವರಿದ ಪವಿತ್ರಾ ಗೌಡ ಟೆಂಪಲ್ ರನ್; ಮಗಳೊಂದಿಗೆ ಮಂತ್ರಾಲಯಕ್ಕೆ ಭೇಟಿ
ಕಳೆದ ವರ್ಷ ದುಬೈಯಲ್ಲಿ ಮದುವೆ ವಾರ್ಷಿಕೋತ್ಸವವನ್ನು ಈ ದಂಪತಿ ಆಚರಿಸಿದ್ದರು. ಆದರೆ, ತದನಂತರ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಲುಕಿ ಸಾಕಷ್ಟು ಸಂಕಷ್ಟ ಅನುಭವಿಸಿದ್ದರು. ಬಳಿಕ ಜಾಮೀನಿನ ಮೇಲೆ ಅವರನ್ನು ಜೈಲಿನಿಂದ ಹೊರಗೆ ತರುವಲ್ಲಿ ವಿಜಯಲಕ್ಷ್ಮಿ ಮಹತ್ವದ ಪಾತ್ರ ವಹಿಸಿದ್ದರು.