ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bigg Boss Kannada 12: ಆರಂಭವಾಗಿ ಕೆಲವೇ ದಿನಗಳಲ್ಲಿ ಕನ್ನಡ ಬಿಗ್‌ ಬಾಸ್‌ ಶೋ ಬಂದ್‌ ಆಗುತ್ತಾ? ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ನೀಡಿದ್ದೇಕೆ?

ಕಿಚ್ಚ ಸುದೀಪ್‌ ಸಾರಥ್ಯದ ಬಿಗ್‌ ಬಾಸ್‌ ಕನ್ನಡ ಶೋ ಆರಂಭವಾಗಿ ಕೆಲವೇ ದಿನವಾಗಿದ್ದು, ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಮಧ್ಯೆ ಬಿಗ್‌ ಬಾಸ್‌ ಮನೆಗೆ ಬಹುದೊಡ್ಡ ಶಾಕ್‌ ಎದುರಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದ್ದು, ಶೋ ಬಂದ್‌ ಮಾಡುವಂತೆ ಸೂಚಿಸಿದೆ.

ಕನ್ನಡ ಬಿಗ್‌ ಬಾಸ್‌ ಶೋ ಬಂದ್‌ ಆಗುತ್ತಾ?

-

Ramesh B Ramesh B Oct 6, 2025 8:51 PM

ಬೆಂಗಳೂರು: ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ನ 12ನೇ ಸೀಸನ್‌ ಆರಂಭವಾಗಿದ್ದು (Bigg Boss Kannada 12), 1 ವಾರದಲ್ಲೇ ವಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈಗಾಗಲೇ ಸ್ಪರ್ಧಿಗಳ ನಡುವೆ ಕಿಚ್ಚು ಹಚ್ಚಿಕೊಂಡಿದ್ದು, ವಾದ-ವಿವಾದ ಶುರುವಾಗಿದೆ. ಈ ಮಧ್ಯೆ ಬಿಗ್‌ ಬಾಸ್‌ ಶೋಗೆ ಬಹುದೊಡ್ಡ ಶಾಕ್‌ ಎದುರಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (Pollution Control Board) ಆಯೋಜಕರಿಗೆ ನೋಟಿಸ್ ಜಾರಿ ಮಾಡಿದೆ. ‘ಬಿಗ್​ ಬಾಸ್ ಕನ್ನಡ ಸೀಸನ್ 12’ ಶೋ ಆಯೋಜಕರು ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್​ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಜತೆಗೆ ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ಸೂಚಿಸಿದ್ದು, ವೀಕ್ಷಕರಿಗೆ ಆಘಾತ ಎದುರಾಗಿದೆ.

ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಮನೆಯನ್ನು ನಿರ್ಮಿಸಲಾಗಿದೆ. ಆರಂಭದಲ್ಲಿ ಒಟ್ಟು 19 ಜನರು ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಾಗಿ ಎಂಟ್ರಿ ನೀಡಿದ್ದರು. ಇದೀಗ ಇಬ್ಬರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಸ್ಪರ್ಧಿಗಳೊಂದಿಗೆ ನೂರಾರು ಮಂದಿ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಿಂದ ಸಾಕಷ್ಟು ತಾಜ್ಯ ಉಂಟಾಗುತ್ತದೆ. ಆದರೆ ಸಮರ್ಪಕ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡಿಲ್ಲ ಎನ್ನುವ ದೂರು ಕೇಳಿ ಬಂದಿದೆ.

ಬಿಗ್‌ ಬಾಸ್‌ 12ರ ಪ್ರೋಮೊ:

ಈ ಸುದ್ದಿಯನ್ನೂ ಓದಿ: BBK 12: ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರವೇ ನಡೆಯಿತು ಡಬಲ್ ಎಲಿಮಿನೇಷನ್

ಜಾಲಿವುಡ್‌ ಸ್ಟುಡಿಯೋ ನಡೆಸಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆದಿಲ್ಲ ಎನ್ನಲಾಗಿದ್ದು, ಈ ಕಾರಣದಿಂದ ಶೋ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಜತೆಗೆ ಶೋ ಬಂದ್ ಮಾಡುವಂತೆ ಸೂಚಿಸಲಾಗಿದೆ. ಜಾಲಿವುಡ್ ಸ್ಟುಡಿಯೋದಿಂದ ದೊಡ್ಡ ಪ್ರಮಾಣದ ತಾಜ್ಯ ನೀರು ಹೊರಬರುತ್ತಿದೆ. ಅದನ್ನು ಸರಿಯಾಗಿ ಸಂಸ್ಕರಿಸದ ಕಾರಣ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ತ್ಯಾಜ್ಯವನ್ನು ಕೂಡ ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂಬ ಆರೋಪ ಎದ್ದಿದೆ. ಹೀಗಾಗಿ ಶೋ ನಿಲ್ಲುತ್ತಾ ಅಥವಾ ಆಯೋಜಕರು ಸೂಕ್ತ ಉತ್ತರ ನೀಡಿ ಶೋ ಮುಂದುವರಿಸಲು ಅನುಮತಿ ಪಡೆಯುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಮೊದಲ ವಾರವೇ ನಡೆಯಿತು ಡಬಲ್ ಎಲಿಮಿನೇಷನ್

ಬಿಗ್ ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಮೊದಲ ವಾರವೇ ಡಬಲ್ ಎಲಿಮಿನೇಷನ್ ನಡೆದಿದ್ದು, ಆರ್​ಜೆ ಅಮಿತ್ ಹಾಗೂ ಬಾಡಿ ಬಿಲ್ಡರ್ ಕರಿಬಸಪ್ಪ ದೊಡ್ಮನೆಯಿಂದ ಹೊರ ನಡೆದಿದ್ದಾರೆ. ಈ ವಾರ ಒಟ್ಟು 8 ಮಂದಿ ನಾಮಿನೇಟ್ ಆಗಿದ್ದರು. ಧನುಷ್, ಮಲ್ಲಮ್ಮ, ಆರ್​ಜೆ ಅಮಿತ್, ಕರಿಬಸಪ್ಪ, ಕಾವ್ಯಾ ಶೈವ, ಗಿಲ್ಲಿ ನಟ, ಅಶ್ವಿನಿ, ಅಭಿಷೇಕ್ ನಾಮಿನೇಟ್ ಆಗಿದ್ದರು. ಈ ಪೈಕಿ ಮಲ್ಲಮ್ಮ ಶನಿವಾರದ ಎಪಿಸೋಡ್​ನಲ್ಲಿ ಸೇವ್ ಆಗಿದ್ದರು. ಬಳಿಕ ಭಾನುವಾರದ ಎಪಿಸೋಡ್​ನಲ್ಲಿ ಕಿಚ್ಚ ಸುದೀಪ್ ಉಳಿದ ಸ್ಪರ್ಧಿಗಳನ್ನು ಸೇವ್ ಮಾಡಿ ಜಂಟಿ ಸದಸ್ಯರಾದ ಆರ್​ಜೆ ಅಮಿತ್ ಹಾಗೂ ಕರಿಬಸಪ್ಪ ಅವರನ್ನು ಮನೆಯಿಂದ ಹೊರಕರೆದರು.