ನಟ ಧನಂಜಯ-ಧನ್ಯತಾ ಮದುವೆಗೆ ವಿಶೇಷ ಸ್ಟ್ಯಾಂಪ್ ನೀಡಿದ ಅಂಚೆ ಇಲಾಖೆ
Daali Dhananjaya: ಧನಂಜಯ ಅವರು ಸರಳವಾದ ಪೋಸ್ಟ್ ಕಾರ್ಡ್ ಮಾದರಿಯಲ್ಲಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿದ್ದರು. ಆಮಂತ್ರಣ ಪತ್ರಿಕೆಯಲ್ಲಿ ಸ್ವತಃ ವಧು-ವರರು ಆಪ್ತವಾಗಿ ಪತ್ರ ಬರೆದಿರುವ ರೀತಿಯ ಸಾಲುಗಳು ಇದ್ದಿದ್ದರಿಂದ ಎಲ್ಲರ ಗಮನ ಸೆಳೆದಿತ್ತು. ಈ ಬಗ್ಗೆ ಭಾರತೀಯ ಅಂಚೆ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಡಾಲಿ-ಧನ್ಯತಾ ವಿವಾಹಕ್ಕೆ ವಿಶೇಷ 12 ಸ್ಟ್ಯಾಂಪ್ ನೀಡಿ ಶುಭಾಶಯ ಕೋರಿದೆ.