Monday, 3rd October 2022

ಶೂಟಿಂಗ್ ವೇಳೆ ನಟ ನಾಸರ್ʼಗೆ ಗಂಭೀರ ಗಾಯ

ಹೈದರಾಬಾದ್: ಹೈದರಾಬಾದ್ ಪೊಲೀಸ್ ಅಕಾಡೆಮಿಯಲ್ಲಿ ಶೂಟಿಂಗ್ ನಡೆಯುತ್ತಿದ್ದಾಗ ನಟ ನಾಸರ್ʼಗೆ ಗಂಭೀರವಾಗಿ ಗಾಯಗೊಂಡಿದ್ದು, ಸಧ್ಯ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳು ಚಿತ್ರದ ಚಿತ್ರೀಕರಣವು ಹೈದರಾಬಾದ್‌ನಲ್ಲಿ ನಡೆಯುತ್ತಿದ್ದು, ನಟ ಸುಹಾಸಿನಿ, ಮೆಹ್ರೀನ್ ಮತ್ತು ಶಿಯಾಜಿ ಶಿಂಧೆ ಅವರೊಂದಿಗೆ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ನಾಸಿರ್ ಗಾಯಗೊಂಡಿದ್ದಾರೆ.

ತಕ್ಷಣ ಅವರನ್ನ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. ನಾಸರ್ ಮೆಟ್ಟಿಲುಗಳನ್ನ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅವರ ಎಡಗಣ್ಣಿನ ಕೆಳಗೆ ಗಾಯವಾಗಿದ್ದು, ಇದು ರಕ್ತಸ್ರಾವಕ್ಕೆ ಕಾರಣವಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

ದಕ್ಷಿಣದಲ್ಲಿ ವಿಶಿಷ್ಟ ನಟ ಎಂದೇ ಖ್ಯಾತರಾದ ನಟ ನಾಸರ್, ಸ್ಟಾರ್ ಹೀರೋಗಳ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನ ನಿರ್ವಹಿಸಿದ್ದಾರೆ. ಬಾಹುಬಲಿಯಂತಹ ಸೂಪರ್ ಹಿಟ್ ಚಿತ್ರಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ನಾಸರ್ ದೊಡ್ಡ ಹೀರೋಗಳ ತಂದೆಯಾಗಿ, ಪೊಲೀಸ್ ಆಗಿ, ಖಳನಾಯಕನಾಗಿ ಮತ್ತು ಹಾಸ್ಯನಟನಾಗಿ ವಿವಿಧ ಪಾತ್ರಗಳನ್ನು ನಿರ್ವಹಿಸಿ ದರು.