ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತಿಂಗಳಾಂತ್ಯದಲ್ಲಿ ಕಿರ್ಗಿಸ್ತಾನ್‌, ಉಜ್ಬೇಕಿಸ್ತಾನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಮಧ್ಯ ಏಷ್ಯಾದೊಂದಿಗೆ ಭಾರತದ ಬಾಂಧವ್ಯ ಮತ್ತಷ್ಟು ವೃದ್ಧಿಸಲು ಕ್ರಮ

Narendra Modi: ಪ್ರಧಾನಿ ನರೇಂದ್ರ ಮೋದಿ ಆಗಸ್ಟ್‌ ಅಂತ್ಯದಲ್ಲಿ ಕಿರ್ಗಿಸ್ತಾನ್ ಮತ್ತು ಉಜ್ಬೇಕಿಸ್ತಾನ್‌ಗೆ ಭೇಟಿ ನೀಡಲಿದ್ದಾರೆ. ಶೃಂಗಸಭೆಯಲ್ಲಿ ಭಾಗವಹಿಸುವುದರ ಜತೆಗೆ ವ್ಯಾಪಾರ, ರಕ್ಷಣಾ ಸಹಕಾರ, ಹೂಡಿಕೆ ಮತ್ತು ರಾಜತಾಂತ್ರಿಕ ಸಂಬಂಧ ಬಲಪಡಿಸುವ ಕುರಿತು ಮಾತನಾಡಿದ್ದಾರೆ.

ತಿಂಗಳಾಂತ್ಯದಲ್ಲಿ ಕಿರ್ಗಿಸ್ತಾನ್‌, ಉಜ್ಬೇಕಿಸ್ತಾನ್‌ಗೆ ಪ್ರಧಾನಿ ಮೋದಿ ಭೇಟಿ

ನರೇಂದ್ರ ಮೋದಿ (ಸಂಗ್ರಹ ಚಿತ್ರ) -

Profile
Sushmitha Jain Aug 4, 2026 11:33 PM

ನವದೆಹಲಿ, ಆ. 4: ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್‌ ಕೊನೆಯ ವಾರದಲ್ಲಿ ಕಿರ್ಗಿಸ್ತಾನ್‌ ಹಾಗೂ ಉಜ್ಬೇಕಿಸ್ತಾನ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಮಧ್ಯ ಏಷ್ಯಾ ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ, ಆರ್ಥಿಕ ಹಾಗೂ ಭದ್ರತಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಪ್ರವಾಸ ಕೈಗೊಳ್ಳಲಾಗುತ್ತಿದೆ. ಮೊದಲು ಕಿರ್ಗಿಸ್ತಾನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಹಲವು ರಾಷ್ಟ್ರಗಳ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಯಿದೆ. ನಂತರ ಉಜ್ಬೇಕಿಸ್ತಾನ್‌ಗೆ ಭೇಟಿ ನೀಡಿ ವ್ಯಾಪಾರ, ಹೂಡಿಕೆ, ರಕ್ಷಣಾ ಸಹಕಾರ, ಸಾರಿಗೆ ಸಂಪರ್ಕ ಮತ್ತು ಆರ್ಥಿಕ ಸಹಭಾಗಿತ್ವ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ.

ಇತ್ತೀಚೆಗೆ ಉಜ್ಬೇಕಿಸ್ತಾನದ ವಿದೇಶಾಂಗ ಸಚಿವ ಬಖ್ತಿಯೊರ್ ಸೈದೋವ್ (Bakhtiyor Saidov) ಭಾರತಕ್ಕೆ ಭೇಟಿ ನೀಡಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ (S. Jaishankar) ಅವರನ್ನು ಭೇಟಿಯಾಗಿ ಪ್ರಧಾನಿ ಮೋದಿ ಅವರ ಆಗಮನಕ್ಕೆ ಸಿದ್ಧತೆ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ನಕ್ಷೆ ವಿವಾದ: 'ನಾವೂ ಭಾರತೀಯರೇ' ಎಂದು ಲವ್ಲಿನಾ ಬೋರ್ಗೊಹೇನ್ ಬೇಸರ

ಭಾರತ ಮತ್ತು ಉಜ್ಬೇಕಿಸ್ತಾನ್ ನಡುವಿನ ದ್ವಿಪಕ್ಷೀಯ ವ್ಯಾಪಾರ ಈಗಾಗಲೇ ಒಂದು ಶತಕೋಟಿ ಅಮೆರಿಕನ್ ಡಾಲರ್‌ಗಿಂತ ಹೆಚ್ಚಾಗಿದೆ. ಔಷಧ ತಯಾರಿಕೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಆರೋಗ್ಯ, ಹೂಡಿಕೆ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ವಿಸ್ತರಿಸಲು ಉಭಯ ರಾಷ್ಟ್ರಗಳು ಉತ್ಸುಕವಾಗಿವೆ.

ರಕ್ಷಣಾ ಕ್ಷೇತ್ರದಲ್ಲಿ ಎರಡೂ ದೇಶಗಳು ವಾರ್ಷಿಕ ಜಂಟಿ ಸೇನಾ ಅಭ್ಯಾಸಗಳನ್ನು ನಡೆಸುತ್ತಿವೆ. ಭಯೋತ್ಪಾದನೆ ನಿಗ್ರಹ ಹಾಗೂ ಸೇನಾ ಸಹಕಾರವನ್ನು ಬಲಪಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಕಿರ್ಗಿಸ್ತಾನ್‌ನಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಭಾರತ ಸೇರಿ ಹಲವು ರಾಷ್ಟ್ರಗಳು ಪ್ರಾದೇಶಿಕ ಭದ್ರತೆ, ಆರ್ಥಿಕ ಸಹಕಾರ ಮತ್ತು ಸಂಪರ್ಕ ವ್ಯವಸ್ಥೆ ಕುರಿತು ಚರ್ಚಿಸಲಿವೆ. ಕಳೆದ ಕೆಲವು ಈ ಈಬಂಧವನ್ನು ಬಲಪಡಿಸುತ್ತಿದ್ದು, ಪ್ರಧಾನಿ ಮೋದಿ ಅವರ ಈ ಪ್ರವಾಸ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.