ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ 10 ಭಕ್ತರ ದಾರುಣ ಸಾವು-19 ಜನರಿಗೆ ಗಂಭೀರ ಗಾಯ!

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕಾರು ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಹತ್ತು ಭಕ್ತರು ದಾರುಣವಾಗಿ ಮೃತಪಟ್ಟಿದ್ದು, 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಕುಂಭಮೇಳಕ್ಕೆ ತೆರಳುತ್ತಿದ್ದ ಬೊಲೆರೊ ಕಾರು ಬಸ್ಸಿಗೆ ಡಿಕ್ಕಿ ಹೊಡೆದು ನಜ್ಜುಗುಜ್ಜಾಗಿರುವುದು

ಲಖನೌ: ಉತ್ತರ ಪ್ರದೇಶದ(Uttar Pradesh) ಪ್ರಯಾಗ್‌ರಾಜ್‌ನಲ್ಲಿ(Prayagraj) ಕಾರು ಮತ್ತು ಬಸ್ ನಡುವೆ ಡಿಕ್ಕಿ(Car Collides With Car) ಸಂಭವಿಸಿ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ(Road Accident) ಹತ್ತು ಭಕ್ತರು ದಾರುಣವಾಗಿ ಮೃತಪಟ್ಟಿದ್ದು, 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಮಹಾ ಕುಂಭಮೇಳದಿಂದ ಹಿಂತಿರುಗುತ್ತಿದ್ದ ಆಂಧ್ರಪ್ರದೇಶ ಮೂಲದ ಭಕ್ತರು ಪ್ರಯಾಣಿಸುತ್ತಿದ್ದ ಮಿನಿ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದರು.

ಕುಂಭಮೇಳದ ಪವಿತ್ರ ನದಿಯಾದ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುವ ಸಲುವಾಗಿ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.



ಕುಂಭಮೇಳದಲ್ಲಿ ಕಾಲ್ತುಳಿತ ದುರಂತ:ಮೋದಿ ಸಂತಾಪ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಾಗುತ್ತಿರುವ ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ ಪವಿತ್ರವಾದ ಮೌನಿ ಅಮಾವಾಸ್ಯೆಯಂದೇ ಹಲವರು ಮೃತಪಟ್ಟಿದ್ದರು. ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದರು.

"ಪ್ರಯಾಗ್‌ರಾಜ್ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವುದು ಅತ್ಯಂತ ದುಃಖಕರ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಮೋದಿ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದರು.

ಈ ಸುದ್ದಿಯನ್ನೂ ಓದಿ:Modi-Trump Meet: 5ನೇ ಜನರೇಷನ್‌ ಜೆಟ್‌, ಮಿಷನ್‌ 500, ಮುಂಬೈ ದಾಳಿ ರೂವಾರಿಯ ಗಡಿಪಾರು; ಟ್ರಂಪ್‌-ಮೋದಿ ಒಪ್ಪಂದಗಳ ಲಿಸ್ಟ್‌ ಇಲ್ಲಿದೆ

'ಘಟನಾ ಸ್ಥಳದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸುವುದರ ಜತೆಗೆ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡುತ್ತಿದೆ. ನಾನು ಮುಖ್ಯಮಂತ್ರಿ ಯೋಗಿ ಆದಿತ್ತನಾಥ್ ಅವರೊಂದಿಗೆ ಮಾತನಾಡಿದ್ದೇನೆ. ಜತೆಗೆ, ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ' ಎಂದು ಮೋದಿ ತಿಳಿಸಿದ್ದರು. ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಿಂದಾಗಿ 30ಕ್ಕೂ ಹೆಚ್ಚು ಭಕ್ತರು ದುರಂತವಾಗಿ ಮೃತಪಟ್ಟಿದ್ದರು.